ಬಿಜೆಪಿಯ ಮತ್ತೋರ್ವ ನಾಯಕ ನಿವೃತ್ತಿ ಘೋಷಣೆ: ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್​ ಅಂಗಾರ ಗುಡ್​ ಬೈ

S Angara Retires From Politics ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಜೋರಾಗಿದ್ದು, ಇದೀಗ ಮತ್ತೋರ್ವ ಹಿರಿಯ ನಾಯಕ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಬಿಜೆಪಿಯ ಮತ್ತೋರ್ವ ನಾಯಕ ನಿವೃತ್ತಿ ಘೋಷಣೆ: ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್​ ಅಂಗಾರ ಗುಡ್​ ಬೈ
ಎಸ್ ಅಂಗಾರ
Follow us
ರಮೇಶ್ ಬಿ. ಜವಳಗೇರಾ
|

Updated on:Apr 12, 2023 | 1:21 PM

ಬೆಂಗಳೂರು/ದಕ್ಷಿಣ ಕ್ನನಡ: ಸುಳ್ಯ ಕ್ಷೇತ್ರದ ಬಿಜೆಪಿ ಟಿಕೆಟ್​​ ಕೈತಪ್ಪಿದ ಬೆನ್ನಲ್ಲೇ ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್​.ಅಂಗಾರ (S Angara)  ನಿವೃತ್ತಿ ಘೋಷಣೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕೂ ಹೋಗದಿರಲು ನಿರ್ಧರಿಸಿದ್ದಾರೆ. ಆರು ಸುಳ್ಯ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದು ಶಾಸಕರಾಗಿದ್ದ ಎಸ್. ಅಂಗಾರ ಅವರಿಗೆ ಈ ಬಾರಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್​ ಟಿಕೆಟ್ ನೀಡಲಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಅಂಗಾರ, ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. 7 ಬಾರಿ ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಂಗಾರ, ಮೊದಲ ಬಾರಿಗೆ ಸೋಲನ್ನು ಅನುಭವಿಸಿದ್ದರು.  ಬಳಿಕ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡುವರೆ ವರ್ಷದಿಂದ ಮೀನುಗಾರಿಕೆ ಸಚಿವರಾಗಿದ್ದರು. ಸುಳ್ಯದಲ್ಲಿ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಪಡೆದಿದ್ದರು.

ಇದನ್ನೂ ಓದಿ: KS Eshwarappa: ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ; ಬಿಜೆಪಿ ಹೈಕಮಾಂಡ್​ಗೆ ಟಿಕೆಟ್ ನೀಡಬೇಡಿ ಎಂದು ಮನವಿ

ಸದ್ಯದ ಬೆಳವಣಿಗೆ ಕಾರ್ಯಕರ್ತರಲ್ಲಿ ಸಂಶಯ ತರಿಸಿದೆ. ಯಾರ ಮೇಲೆ ವಿಶ್ವಾಸ ಇಡಬೇಕು ಎನ್ನುವಂತಾಗಿದೆ. ಲಾಬಿ ಮಾಡಿದವರಿಗೆ ಸೀಟು, ಲಾಬಿ ಮಾಡದವರಿಗೆ ಸೀಟು ಇಲ್ಲ ಎಂಬಂತಾಗಿದೆ. ನಾನು ಪಕ್ಷ, ಪಕ್ಷದ ನಾಯಕರನ್ನು ದೂರುವುದಿಲ್ಲ. ನನ್ನ ನಡೆಯೇ ನನಗೆ ಮುಳ್ಳಾಯಿತು. ಇಲ್ಲಿಗೆ ರಾಜಕೀಯ ಸಾಕು ಎಂದು ಅಸಮಾಧಾನ ಹೊರ ಹಾಕಿದರು.

ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು ಒಬ್ಬರಿಂದೊಬ್ಬರು ನಿವೃತ್ತಿಯಾಗುತ್ತಿದ್ದಾರೆ. ಮೊದಲಿ ಬಿಎಸ್ ಯಡಿಯೂರಪ್ಪ ಅವರು ಚುನಾವಣೆ ಕಣದಿಂದ ನಿವೃತ್ತಿ ಘೋಷಣೆ ಮಾಡಿದ್ದರು. ಆದ್ರೆ, ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದರು. ಇನ್ನು ಮತ್ತೋರ್ವ ಬಿಜೆಪಿ ಹಿರಿಯ ನಾಯಕರ ಕೆಎಸ್ ಈಶ್ವರಪ್ಪ ಸಹ ಚುನಾವಣೆಗೆ ನಿವೃತ್ತಿ ಹೇಳಿದ್ದು, ರಾಜಕೀಯದಲ್ಲಿ ಇರುತ್ತೇನೆ ಎಂದಿದ್ದಾರೆ.

ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಹ ಸ್ವಯಂ ಪ್ರೇರಿತವಾಗಿಯೇ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅಲ್ಲದೇ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ಅವರೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಘೋಷಣೆ ಮಾಡಿದ್ದರು. ಇದೀಗ ಸತತ ಆರು ಬಾರಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದ ಸುಳ್ಯ ಶಾಸಕ ಎಸ್.​ಅಂಗಾರ ಅವರು ಈ ಬಾರಿ ಬಿಜೆಪಿ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಸಕ್ರಿಯ ರಾಜಕಾರಣಕ್ಕೆ ಗುಡ್​ಬೈ ಹೇಳಿದ್ದಾರೆ.

ಅಭ್ಯರ್ಥಿ ಘೋಷಣೆ ಮಾಡಿದ ಬೆನ್ನಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಲೈವ್​ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:03 pm, Wed, 12 April 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ