AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಶೆಟ್ಟರ್, ಸವದಿ ಕಾಂಗ್ರೆಸ್​ ಸೇರ್ಪಡೆ ನಮಗೆ ಪ್ಲಸ್​ ಆಗುತ್ತೆ, ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ?

ಬಿಜೆಪಿ ತೊರೆದು ಹೋದ ಶೆಟ್ಟರ್, ಸವದಿ ಕಾಂಗ್ರೆಸ್​ ಸೇರ್ಪಡೆಯಿಂದ ನಮಗೆ ಪ್ಲಸ್​ ಆಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Karnataka Assembly Elections 2023: ಶೆಟ್ಟರ್, ಸವದಿ ಕಾಂಗ್ರೆಸ್​ ಸೇರ್ಪಡೆ ನಮಗೆ ಪ್ಲಸ್​ ಆಗುತ್ತೆ, ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ?
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 24, 2023 | 11:42 AM

Share

ದಾವಣಗೆರೆ: ವಿಧಾನಸಭೆ ಚುನಾವಣೆ(Karnataka Assembly Election)ಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಲಿಂಗಾಯತ ಸಿಎಂ ಕುರಿತು ಚರ್ಚೆ ಜೋರಾಗಿದೆ. ಈ ಮಧ್ಯೆ ಹೇಗಾದರೂ ಮಾಡಿ ಗೆಲುವು ಸಾಧಿಸಲು ಉಭಯ ಪಕ್ಷಗಳು ಆರೋಪ ಪ್ರತ್ಯಾರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ. ಅದರಂತೆ ‘ಬಿಜೆಪಿ ತೊರೆದು ಹೋದ ಶೆಟ್ಟರ್, ಸವದಿ ಕಾಂಗ್ರೆಸ್​ ಸೇರ್ಪಡೆಯಿಂದ ನಮಗೆ ಪ್ಲಸ್​ ಆಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ. ದಾವಣಗೆರೆಯಲ್ಲಿ ಲಿಂಗಾಯತ ಮುಖ್ಯಮಂತ್ರಿ ಬಗ್ಗೆ ಸಿದ್ದರಾಮಯ್ಯ(Siddaramaiah) ಹೇಳಿಕೆ ವಿಚಾರವನ್ನ ತಿರುಚಲಾಗಿದೆ ಎಂಬ ಆರೋಪ ಕುರಿತು ಮಾತನಾಡಿದ ಅವರು‘ ಸಿದ್ದರಾಮಯ್ಯ ಹೇಳಿಕೆಯನ್ನು ಯಾರೂ ತಿರುಚಿಲ್ಲ, ಅವರು ಮಾತನಾಡಿದ ವಿಡಿಯೋ ಇದೆ. ಸಿದ್ದರಾಮಯ್ಯ ಅವರೇ ಹೇಳಿಕೆಯನ್ನ ಬದಲಾವಣೆ ಮಾಡಿಕೊಂಡಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಹೇಳಿಕೆ, ಜೊತೆಗೆ ಕೆಲವರು ಕಾಂಗ್ರೆಸ್ ಸೇರ್ಪಡೆಯಿಂದ ಈ ಸಲ ಬಿಜೆಪಿಗೆ ವೀರಶೈವ ಮತಗಳು ಹೆಚ್ಚಾಗುತ್ತವೆ. ಈಗ ಬಿಜೆಪಿ ಅಲೆ ಇದ್ದು, ಖಂಡಿತ ಅಧಿಕಾರಕ್ಕೆ ಬರಲಿದೆ. ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲಿಸುವುದು ಸೂಕ್ತ. ಮುಂದಿನ ಸಿಎಂ ನಾನೇ ಎಂದು ಹೇಳಲ್ಲ. ಫಲಿತಾಂಶ ಬಂದ ಬಳಿಕ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ಇನ್ನು ರಾಜ್ಯದಲ್ಲಿ ಶೇ 90 ರಷ್ಟು ಬಿಜೆಪಿಯಲ್ಲಿನ ಬಂಡಾಯ ಶಮನವಾಗಿದೆ. ಇನ್ನಷ್ಟು‌ ಮಾತು ಕತೆ ನಡೆದಿದೆ ಎಂದಿದ್ದಾರೆ.

ಇದನ್ನೂ ಓದಿ:ಇಂದಿರಾ ಗಾಂಧಿ ವಿರುದ್ಧ ಸ್ಪರ್ಧಿಸಲಿಲ್ಲ, ರಾಜಕೀಯಕ್ಕೂ ಬರಲಿಲ್ಲ; ರಾಜ್​ಕುಮಾರ್ ಅವರನ್ನು ತಡೆದಿತ್ತು ಈ ವಿಚಾರ

ಇನ್ನು 18ರಿಂದ35 ವರ್ಷದೊಳಗಿನ ಯುವ ಪಡೆ ಬಿಜೆಪಿಯೊಂದಿಗೆ ಇದೆ. ಜನರ ಭಾವನೆಗಳ‌ ಜೊತೆ ಆಟವಾಡುವುದು ಕಾಂಗ್ರೆಸ್. ನಿನ್ನೆ(ಏ.23) ರಾಹುಲ್ ಗಾಂಧಿ‌ ಕೂಡಲ ಸಂಗಮಕ್ಕೆ ಭೇಟಿ ನೀಡಿದ್ದಾರೆ. ತೊರಿಕೆಗಾದರೂ ಬಸವಣ್ಣನ ದರ್ಶನ ಮಾಡಲಿಲ್ಲವೆಂದರೂ. ಇನ್ನು ಚುನಾವಣಾ ಪ್ರಚಾರಕ್ಕೋಸ್ಕರ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ ಸೇರಿದಂತೆ ಪ್ರಮುಖರು ರಾಜ್ಯಕ್ಕೆ ಬರಲಿದ್ದಾರೆ. ನಾನು ಈಗ ಬೆಂಗಳೂರು, ಮಧ್ಯ ಕರ್ನಾಟಕ, ನಾಳೆ(ಏ.25) ಬೆಳಗಾವಿ ವಿಭಾಗ, ಇದಾದ ಬಳಿಕ‌ ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರ ಮಾಡುವೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:42 am, Mon, 24 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ