Shiggaon Election Results: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟಿದ್ದು, ಯಾರಿಗೆ ಒಲಿಯಲಿದ್ದಾನೆ ಮತದಾರ?
Shiggaon Assembly Election Result 2023 Live Counting Updates: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ನಿಂದ ಯಾಸೀರ್ ಅಹ್ಮದ್ ಖಾನ್ ಪಠಾಣ್ ಹಾಗೂ ಜೆಡಿಎಸ್ನಿಂದ ಶಶಿಧರ ಯಲಿಗಾರ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.
Shiggaon Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ( Shiggaon Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿದ್ದಾರೆ. ಈ ಮೂಲಕ ನಾಲ್ಕನೇ ಬಾರಿ ಕಣಕ್ಕೀಳಿದಿದ್ದಾರೆ. ಇನ್ನು ಇವರು ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ 83,868 ಮತಗಳನ್ನ ಪಡೆದು ಗೆಲುವನ್ನ ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿ ಗದ್ದುಗೆಯನ್ನ ಅಲಂಕರಿಸಿದ್ದರು. ಈ ಬಾರಿ ಕೂಡ ಗೆಲುವು ಕಾಣುವು ವಿಶ್ವಾಸವಿದ್ದು, ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ.
ಕಾಂಗ್ರೆಸ್ನಿಂದ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧಿಸಿದ್ದು, ಈ ಮೂಲಕ ರಾಜಕೀಯಕ್ಕೆ ಧುಮುಕುತ್ತಿದ್ದಾರೆ. ಇನ್ನು ಇವರ ತಾಯಿ ಕೂಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರು. ಜೊತೆಗೆ ಇವರು ಹಾನಗಲ್ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರು. ಇನ್ನು ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸೈಯದ್ ಅಜೀಮ್ ಪೀರ್ ಖಾದ್ರಿ 74,603 ಮತವನ್ನ ಪಡೆದಿದ್ದು, 9,265 ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧಿಸಿದ್ದು ಗೆಲ್ಲುವ ಭರವಸೆ ಹೊಂದಿದ್ದಾರೆ. ಇನ್ನು ಜೆಡಿಎಸ್ನಿಂದ ಶಶಿಧರ ಯಲಿಗಾರ ಸ್ಪರ್ಧೆ ಮಾಡಿದ್ದು, ಇವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು, ಆದರೆ ಟಿಕೆಟ್ ಕೈ ತಪ್ಪಿದ ಕಾರಣ, ಕೊನೆ ಕ್ಷಣದಲ್ಲಿ ಜೆಡಿಎಸ್ ಜೊತೆ ಸೇರಿ ಸ್ಪರ್ಧಿಸಿದ್ದಾರೆ. ಇನ್ನು ಇವರು ಪಂಚಮಸಾಲಿ ಸಮುದಾಯದವರಾಗಿದ್ದು, ಕೊರೊನಾ ಸಮಯದಲ್ಲಿ ಜನರೊಟ್ಟಿಗಿದ್ದು, ಆಹಾರ ಕಿಟ್ಗಳನ್ನ ಕೊಡುವುದರೊಂದಿಗೆ ಜನರ ವಿಶ್ವಾಸವನ್ನ ಗಳಿಸಿದ್ದಾರೆ. ಇನ್ನು ಕ್ಷೇತ್ರದಲ್ಲಿ ಬಹು ಮುಖ್ಯವಾಗಿ ಮುಸ್ಲಿಂ ಮತ್ತು ಪಂಚಮಶಾಲಿ ಮತಗಳು ನೀರ್ಣಾಯಕ ಮತಗಳಾಗಿವೆ.