AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiggaon Election Winner: ಶಿಗ್ಗಾಂವಿ ಭರ್ಜರಿಯಾಗಿ ಗೆಲುವು ಸಾಧಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Basavaraja Bommai: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇದೀಗ ಹೊರಬಿದ್ದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

Shiggaon Election Winner: ಶಿಗ್ಗಾಂವಿ ಭರ್ಜರಿಯಾಗಿ ಗೆಲುವು ಸಾಧಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:May 13, 2023 | 12:16 PM

Share

Shiggaon Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ​ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ( Shiggaon Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿದ್ದು, ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ.  ಈ ಮೂಲಕ ನಾಲ್ಕನೇ ಬಾರಿ ಕಣಕ್ಕೀಳಿದಿದ್ದರು.  ಹಿಂದೆ ನಡೆದಿದ್ದ ಚುನಾವಣೆಯಲ್ಲಿ 83,868 ಮತಗಳನ್ನ ಪಡೆದು ಗೆಲುವನ್ನ ಸಾಧಿಸಿ, ರಾಜ್ಯದ ಮುಖ್ಯಮಂತ್ರಿ ಗದ್ದುಗೆಯನ್ನ ಅಲಂಕರಿಸಿದ್ದರು.

ಕಾಂಗ್ರೆಸ್​​ನಿಂದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಸ್ಪರ್ಧಿಸಿದ್ದು, ಈ ಮೂಲಕ ರಾಜಕೀಯಕ್ಕೆ ಧುಮುಕಿದ್ದರು. ಇನ್ನು ಇವರ ತಾಯಿ ಕೂಡ ಜಿಲ್ಲಾ ಪಂಚಾಯತ್​ ಸದಸ್ಯರಾಗಿದ್ದರು. ಜೊತೆಗೆ ಇವರು ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರು. ಇನ್ನು ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸೈಯದ್ ಅಜೀಮ್ ಪೀರ್ ಖಾದ್ರಿ 74,603 ಮತವನ್ನ ಪಡೆದಿದ್ದು, 9,265 ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಸ್ಪರ್ಧಿಸಿದ್ದು ಗೆಲ್ಲುವ ಭರವಸೆ ಹೊಂದಿದ್ದರು. ಇನ್ನು ಜೆಡಿಎಸ್​ನಿಂದ ಶಶಿಧರ ಯಲಿಗಾರ ಸ್ಪರ್ಧೆ ಮಾಡಿದ್ದು, ಇವರು ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಾಗಿದ್ದರು, ಆದರೆ ಟಿಕೆಟ್​ ಕೈ ತಪ್ಪಿದ ಕಾರಣ, ಕೊನೆ ಕ್ಷಣದಲ್ಲಿ ಜೆಡಿಎಸ್​ ಜೊತೆ ಸೇರಿ ಸ್ಪರ್ಧಿಸಿದ್ದರು. ಇನ್ನು ಇವರು ಪಂಚಮಸಾಲಿ ಸಮುದಾಯದವರಾಗಿದ್ದು, ಕೊರೊನಾ ಸಮಯದಲ್ಲಿ ಜನರೊಟ್ಟಿಗಿದ್ದು, ಆಹಾರ ಕಿಟ್​ಗಳನ್ನ ಕೊಡುವುದರೊಂದಿಗೆ ಜನರ ವಿಶ್ವಾಸವನ್ನ ಗಳಿಸಿದ್ದರು. ಇನ್ನು ಕ್ಷೇತ್ರದಲ್ಲಿ ಬಹು ಮುಖ್ಯವಾಗಿ ಮುಸ್ಲಿಂ ಮತ್ತು ಪಂಚಮಶಾಲಿ ಮತಗಳು ನೀರ್ಣಾಯಕ ಮತಗಳಾಗಿದ್ದು, ಬಸವರಾಜ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:11 pm, Sat, 13 May 23

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ