Shikaripur Election 2023 Winner: ತಂದೆಯ ಭದ್ರಕೋಟೆ ಶಿಕಾರಿಪುರದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ವಿಜಯೇಂದ್ರಗೆ ಭಾರಿ ಗೆಲುವು

BY Vijayendra: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಶಿಕಾರಿಪುರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 1983ರಿಂದ 2018ರವರೆಗೆ ಒಮ್ಮೆ ಮಾತ್ರ ಶಿಕಾರಿಪುರದ ಜನತೆ ಯಡಿಯೂರಪ್ಪರನ್ನು ಸೋಲಿಸಿತ್ತು.

Shikaripur Election 2023 Winner: ತಂದೆಯ ಭದ್ರಕೋಟೆ ಶಿಕಾರಿಪುರದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ವಿಜಯೇಂದ್ರಗೆ ಭಾರಿ ಗೆಲುವು
ಬಿವೈ ವಿಜಯೇಂದ್ರ
Follow us
ನಯನಾ ರಾಜೀವ್
|

Updated on: May 13, 2023 | 3:25 PM

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಶಿಕಾರಿಪುರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 1983ರಿಂದ 2018ರವರೆಗೆ ಒಮ್ಮೆ ಮಾತ್ರ ಶಿಕಾರಿಪುರದ ಜನತೆ ಯಡಿಯೂರಪ್ಪರನ್ನು ಸೋಲಿಸಿತ್ತು. ಯಡಿಯೂರಪ್ಪ ಹೊಸ ಪಕ್ಷ ಕಟ್ಟಿದಾಗಲೂ ಮತದಾರರು ಕೈ ಬಿಟ್ಟಿರಲಿಲ್ಲ. ಈ ಬಾರಿ ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದು ಅವರ ಬದಲಿಗೆ ಬಿಜೆಪಿಯಿಂದ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರಗೆ ಟಿಕೆಟ್ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರನ್ನು ಎಂಟು ಬಾರಿ ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿಕೊಟ್ಟಿದ್ದ ಶಿಕಾರಿಪುರದ ಜನತೆ ಇತ್ತೀಚಿನ ದಿನಗಳಲ್ಲಿ ಮೊದಲ ಬಾರಿಗೆ ರಾಜಕೀಯ ಸ್ಥಿತ್ಯಂತರಗಳನ್ನು ಕಾಣುತ್ತಿದೆ.

ಕಾಂಗ್ರೆಸ್​ನಿಂದ ಜಿಬಿ ಮಾಲತೇಶ್​, ಜೆಡಿಎಸ್​ನಿಂದ ಸುಧಾಕರ್ ಶೆಟ್ಟಿ, ಆಪ್​ನಿಂದ ಚಂದ್ರಕಾಂತ್ ರೇವಣ್​ಕರ್ ಅಭ್ಯರ್ಥಿಯಾಗಿದ್ದರು. ಕಳೆದ ಬಾರಿ ಯಡಿಯೂರಪ್ಪ 35 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಅದಕ್ಕೂ ಮೊದಲು ಕೆಜೆಪಿಯಿಂದ ಸ್ಪರ್ಧಿಸಿದ್ದಾಗ, ಅವರ ಗೆಲುವಿನ ಅಂತರ 25 ಸಾವಿರ ಮತದಷ್ಟಿತ್ತು, ಆಗ ಬಿಜೆಪಿ ಅಭ್ಯರ್ಥಿಗೆ ಠೇವಣಿ ನಷ್ಟವಾಗಿತ್ತು ಎನ್ನುವುದನ್ನು ಗಮನಿಸಬಹುದು.

ಈ ಬಾರಿ ವಿಜಯೇಂದ್ರ ಹಾಗೂ ಮಾಲತೇಶ್ ನಡುವೆ ನೇರ ಪೈಪೋಟಿ ಇರಲಿದೆ. ಕಳೆದ ಬಾರಿಯೂ ಮಾಲತೇಶ್ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್