Shirahatti Election Result: ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಡಾ ಚಂದ್ರು ಲಮಾಣಿಗೆ ಭರ್ಜರಿ ಜಯ

Shirahatti Assembly Election Result 2023 Live Counting Updates: ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ನಿಂದ ಹನುಮಂತಪ್ಪ ನಾಯಕ, ಕಾಂಗ್ರೆಸ್​ನಿಂದ ಸುಜಾತಾ ದೊಡ್ಡಮನಿ ಹಾಗೂ ಬಿಜೆಪಿಯಿಂದ ಡಾ. ಚಂದ್ರು ಲಮಾಣಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Shirahatti Election Result: ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಡಾ ಚಂದ್ರು ಲಮಾಣಿಗೆ ಭರ್ಜರಿ ಜಯ
ಪ್ರಾತಿನಿಧಿಕ ಚಿತ್ರ

Updated on: May 13, 2023 | 6:31 PM

Shirahatti Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಶಿರಹಟ್ಟಿ ವಿಧಾನಸಭಾ ಕ್ಷೇತ್ರದಿಂದ (Shirahatti Assembly Constituency) ಬಿಜೆಪಿ ಅಭ್ಯರ್ಥಿಯಾಗಿ ಡಾ. ಚಂದ್ರು ಲಮಾಣಿ ಸ್ಪರ್ಧಿಸಿದ್ದರು. ಸುಮಾರು 22963 ಮತಗಳಿಂದ ಭರ್ಜರಿ ಜಯ ಸಾಧಿಸಿದ್ದಾರೆ. ಚಂದ್ರು ಲಮಾಣಿ 73600 ಮತ ಪಡೆದ್ರೆ,
ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ 45637 ಮತಗಳು ಪಡೆದಿದ್ದಾರೆ. ಸುಮಾರು 34550 ಮತ ಪಡೆದ ಸುಜಾತಾ ದೊಡ್ಡಮನಿ ಮೂರನೇ ಸ್ಥಾನಕ್ಕೆ ತೃಪ್ತಿಗೊಂಡಿದ್ದಾರೆ.

ಕಳೆದ ಬಾರಿ ಚುನಾವಣೆಯಲ್ಲಿ ಸಾಕಷ್ಟು ಮತಗಳ ಅಂತರದಿಂದ ಕಾಂಗ್ರೆಸ್​ ಅಭ್ಯರ್ಥಿಯನ್ನು ಸೋಲಿಸಿದ್ದ ರಾಮಣ್ಣ ಲಮಾಣಿ ಬದಲಾಗಿ ಹೊಸ ಮುಖಕ್ಕೆ ಮಣೆ ಹಾಕಿರುವ ಬಿಜೆಪಿ ಡಾ. ಚಂದ್ರು ಲಮಾಣಿ ಅವರನ್ನು ಕಣಕ್ಕಿಳಿಸಿತ್ತು. ಸರಕಾರಿ ಕೆಲಸದಲ್ಲಿದ್ದ ಡಾ. ಚಂದ್ರು ಲಮಾಣಿ ಅವರ ರಾಜೀನಾಮೆಯನ್ನು
ಚುನಾವಣಾ ಆಯೋಗ ಸ್ವೀಕರಿಸಿದ್ದರಿಂದ ಶಿರಹಟ್ಟಿ ಕ್ಷೇತ್ರದಿಂದ ಸ್ಫರ್ಧಿಸಿದ್ದರು.

ಕಾಂಗ್ರೆಸ್​ ಪಕ್ಷದಿಂದ ಟಿಕೆಟ್​ ಪಡೆಯುವಲ್ಲಿ ಸುಜಾತಾ ದೊಡ್ಡಮನಿ ಯಶಸ್ವಿಯಾಗಿದ್ದರು. ಆ ಮೂಲಕ ರಾಷ್ಟ್ರೀಯ ಪಕ್ಷದಿಂದ ಟಿಕೆಟ್​ ಪಡೆದ ಜಿಲ್ಲೆಯ ಏಕೈಕ್ ಮಹಿಳೆ ಎನ್ನಿಸಿಕೊಂಡಿದ್ದರು. ಜೆಡಿಎಸ್​ ಪಕ್ಷದ ಅಭ್ಯರ್ಥಿಯಾಗಿ ಹನುಮಂತಪ್ಪ ನಾಯಕ ಸ್ಫರ್ಧಿಸಿದ್ದರು.

2018ರ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದ ರಾಮಕೃಷ್ಣ ಸಿದ್ದಲಿಂಗಪ್ಪ ಸುಮಾರು 29 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದು, ಬಿಜೆಪಿ ಅಭ್ಯರ್ಥಿ ರಾಮಣ್ಣ ಲಮಾಣಿ ಜಯ ಗಳಿಸಿದ್ದರು. ಹೀಗಾಗಿ ಈ ಬಾರಿ ಕ್ಷೇತ್ರದಲ್ಲಿ  ಚುನಾವಣೆ ಕಾವು ಹೆಚ್ಚಾಗಿತ್ತು. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:36 am, Sat, 13 May 23