ನಟ ಕಿಚ್ಚ ಸುದೀಪ್ ಅಭಿನಯದ ಸಿನಿಮಾ, ಟಿವಿ ಶೋ ಪ್ರಸಾರ ಮಾಡದಂತೆ ಚುನಾವಣಾ ಆಯೋಗಕ್ಕೆ ಶಿವಮೊಗ್ಗದ ವಕೀಲ ಮನವಿ

ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರಗಳನ್ನು, ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳ ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ನಟ ಕಿಚ್ಚ ಸುದೀಪ್ ಅಭಿನಯದ ಸಿನಿಮಾ, ಟಿವಿ ಶೋ ಪ್ರಸಾರ ಮಾಡದಂತೆ ಚುನಾವಣಾ ಆಯೋಗಕ್ಕೆ ಶಿವಮೊಗ್ಗದ ವಕೀಲ ಮನವಿ
ನಟ ಸುದೀಪ್​
Follow us
ವಿವೇಕ ಬಿರಾದಾರ
|

Updated on: Apr 05, 2023 | 10:50 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ನಟ ಕಿಚ್ಚ ಸುದೀಪ್ (Actor Sudeep) ,​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ (CM Basavaraj Bommai) ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆ ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರಗಳನ್ನು (Films), ಟಿ.ವಿ.ಶೋಗಳನ್ನು (TV Shows) ಮತ್ತು ಅವರು ಇರುವ ಜಾಹಿರಾತುಗಳ (Advertisement) ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ (Shivamogga) ವಕೀಲರೊಬ್ಬರು (Advocate) ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಶಿವಮೊಗ್ಗದ ವಕೀಲರ ಪತ್ರದಲ್ಲಿ ಏನಿದೆ

ಜಿಲ್ಲೆಯ ವಕೀಲ ಕೆ.ಪಿ ಶ್ರೀಪಾಲ ಎಂಬುವರು ಪತ್ರದಲ್ಲಿ “ಕನ್ನಡದ ಚಲನಚಿತ್ರ ನಟ ಕಿಚ್ಚ ಸುದೀಪ್​ ಅವರು ಬಿಜೆಪಿಯ ಸ್ಟಾರ್​ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ ಶೋಗಳು ಪ್ರಸಾರವಾಗದಂತೆ ಮತ್ತು ನಟಿಸಿರುವ ಜಾಹಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕ್ರಮ ಜರುಗಿಸಬೇಕು.”

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ನಟ ಸುದೀಪ್​ ಬೆಂಬಲ: ಬಿಜೆಪಿ ವಿರುದ್ಧ ಟ್ವೀಟ್​ ಮೂಲಕ ಕಾಂಗ್ರೆಸ್​ ವ್ಯಂಗ್ಯ

“ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು, ಟಿ.ವಿ ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ತಕ್ಷಣದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳುವಂತೆ ವಕೀಲ ಕೆ.ಪಿ ಶ್ರೀಪಾಲ ಅವರು ಒತ್ತಾಯಿಸಿದ್ದಾರೆ.”

ವಿಧಾನಸಭಾ ಚುನಾವಣಾ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ