ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ನಟ ಕಿಚ್ಚ ಸುದೀಪ್ (Actor Sudeep) , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ (CM Basavaraj Bommai) ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆ ನಟ ಕಿಚ್ಚ ಸುದೀಪ್ ಅವರ ಚಲನಚಿತ್ರಗಳನ್ನು (Films), ಟಿ.ವಿ.ಶೋಗಳನ್ನು (TV Shows) ಮತ್ತು ಅವರು ಇರುವ ಜಾಹಿರಾತುಗಳ (Advertisement) ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ (Shivamogga) ವಕೀಲರೊಬ್ಬರು (Advocate) ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಜಿಲ್ಲೆಯ ವಕೀಲ ಕೆ.ಪಿ ಶ್ರೀಪಾಲ ಎಂಬುವರು ಪತ್ರದಲ್ಲಿ “ಕನ್ನಡದ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ ಶೋಗಳು ಪ್ರಸಾರವಾಗದಂತೆ ಮತ್ತು ನಟಿಸಿರುವ ಜಾಹಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕ್ರಮ ಜರುಗಿಸಬೇಕು.”
ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ನಟ ಸುದೀಪ್ ಬೆಂಬಲ: ಬಿಜೆಪಿ ವಿರುದ್ಧ ಟ್ವೀಟ್ ಮೂಲಕ ಕಾಂಗ್ರೆಸ್ ವ್ಯಂಗ್ಯ
“ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು, ಟಿ.ವಿ ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ತಕ್ಷಣದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳುವಂತೆ ವಕೀಲ ಕೆ.ಪಿ ಶ್ರೀಪಾಲ ಅವರು ಒತ್ತಾಯಿಸಿದ್ದಾರೆ.”
ವಿಧಾನಸಭಾ ಚುನಾವಣಾ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ