AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಶೋಭಾ ಕರಂದ್ಲಾಜೆ

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ನೀಡಿದ್ದಾರೆ.

ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಶೋಭಾ ಕರಂದ್ಲಾಜೆ
ಸೋನಿಯಾ ಗಾಂಧಿ
ವಿವೇಕ ಬಿರಾದಾರ
| Edited By: |

Updated on:May 08, 2023 | 3:51 PM

Share

ಬೆಂಗಳೂರು: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ (Sonia Gandhi) ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ದೂರು ನೀಡಿದ್ದಾರೆ. ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿ ಮಾತನಾಡಿದ್ದಾರೆ. ಭಾರತದ ಸಾರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿ ಮಾತನಾಡಿದ್ದಾರೆ ಹೀಗಾಗಿ ಇದರ ವಿರುದ್ಧ ದೂರು ನೀಡಿದ್ದೇವೆ ಎಂದು ಹೇಳಿದರು. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿಕೆಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ತಿರುಗೇಟು ವಿಚಾರವಾಗಿ ಮಾತನಾಡಿದ ಅವರು ಬಿಜೆಪಿ ಗೆಲ್ಲದಿದ್ದರೇ ಕೇಂದ್ರದ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಜೆಪಿ ನಡ್ಡಾ ಹೇಳಿಲ್ಲ. ಕೇಂದ್ರದ ಯೋಜನೆಗಳು ಕುಂಠಿತವಾಗುತ್ತೆ ಎಂಬರ್ಥದಲ್ಲಿ ಹೇಳಿದ್ದಾರೆ ಎಂದು ಹೇಳಿದರು.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್​ನವರು ಅಧಿಕಾರಕ್ಕೆ ಬಂದರೇ ಅಭಿವೃದ್ಧಿ ಮಾಡೋಕೆ ಬಿಡಲ್ಲ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಕರ್ನಾಟಕದಿಂದ ಕಿಸಾನ್ ಸಮ್ಮಾನ್ ಯೋಜನೆಗೆ 17 ಅರ್ಜಿಗಳು ಮಾತ್ರ ಬಂದಿದ್ದವು. ನಾವು ಬಂದ ಮೇಲೆ 50,000ಕ್ಕೂ ಹೆಚ್ಚು ಫಲಾನುಭವಿಗಳಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ನೆರವು ನೀಡಿದ್ದೇವೆ ಎಂದರು.

ಇದನ್ನೂ ಓದಿ: ಕಳೆದ ಒಂದೂವರೆ ತಿಂಗಳು ರಾಜ್ಯದ 224 ಕ್ಷೇತ್ರದ ದರ್ಶನ: ಟ್ರೆಂಡ್ ಹೇಗಿದೆ? ನಳಿನ್ ಕುಮಾರ್ ಕಟೀಲ್ ಹೇಳಿದ್ದಿಷ್ಟು

ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸುತ್ತಾರೆ

ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸುತ್ತಾರೆ. ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೋಲುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದ ಬಳಿಕ 10-15 ಸ್ಥಾನಗಳು ಹೆಚ್ಚಾಗುತ್ತೆ. ಸಿದ್ದರಾಮಯ್ಯ ಸರ್ಕಾರ ಕೇಂದ್ರದ 3 ಯೋಜನೆಗಳನ್ನು ನಿಲ್ಲಿಸಿತ್ತು. ಅಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಯೋಜನೆಗಳನ್ನು ‌ಜಾರಿ‌ ಮಾಡಲ್ಲ ಎಂದು ಪಕ್ಷದ ರಾಜ್ಯ ಘಟಕ ಅಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹೇಳಿದ್ದಾರೆ.

ಇಡೀ ರಾಜ್ಯದಲ್ಲಿ 10ರಿಂದ15 ದಿನಗಳಲ್ಲಿ ನಮ್ಮ ಪ್ರಚಾರ ವೇಗವಾಗಿತ್ತು. ಬೇರೆ ರಾಜ್ಯದ ಮುಖ್ಯಮಂತ್ರಿಗಳೂ ಬಂದು ಪ್ರಚಾರ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಪ್ರಧಾನಿ ಪ್ರವಾಸ, ರೋಡ್ ಶೋಗಳ ಬಗ್ಗೆ ಚರ್ಚೆಯಾಗಿದೆ. ನಾವು ಕಳೆದ ನಾಲ್ಕು ವರ್ಷದಲ್ಲಿ ಕೊಟ್ಟ ಯೋಜನೆಗಳು ಜನರಿಗೆ ಒಪ್ಪಿಗೆಯಾಗಿವೆ. ಅಲ್ಲದೇ ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ, ರೇಸ್​​ನಲ್ಲೂ ಇಲ್ಲ. ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಒಳ್ಳೆಯ ರೀತಿಯಲ್ಲಿ ಮುಗಿಸುತ್ತೇನೆ. ನನಗೆ ರಾಜ್ಯ ರಾಜಕಾರಣಕ್ಕೆ ಬರುವ ಇಚ್ಛೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ನಿಯೋಗದಿಂದ ಚುನಾವಣಾ ಆಯೋಗಕ್ಕೆ ದೂರು

ಕರ್ನಾಟಕ ದಲ್ಲಿ ಕಾಂಗ್ರೆಸ್ ಪಕ್ಷ ನೀತಿ ಸಂಹಿತೆ ದುರುಪಯೋಗ ಪಡಿಸಿಕೊಂಡಿದೆ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ನೇತೃತ್ವದ ನಿಯೋಗದಿಂದ ದೂರು ನೀಡಿದೆ. ಸೋನಿಯಾ ಗಾಂಧಿ ಅವರ ಸಾರ್ವಭೌಮತೆ ಪದ ಉಲ್ಲೇಖಿಸಿ ಟ್ವೀಟ್ ಮಾಡಿರುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ,ದೇಶದ ಅಖಂಡತೆಗೆ ಬಳಸುವ ಪದವನ್ನು ಕಾಂಗ್ರೆಸ್ ಉದ್ದೇಶ ಪೂರ್ವವಾಗಿ ಟ್ವೀಟ್ ಮಾಡಿದೆ. ಇದು ಭಾರತದ ಅಖಂಡತೆಗೆ ಧಕ್ಕೆ ಬರಲಿದೆ ಚುನಾವಣಾ ಆಯೋಗಕ್ಕೆ  ದೂರು ನೀಡಿದ್ದರೂ ಈತನಕ ಯಾವುದೇ ಉತ್ತರ ನೀಡಿಲ್ಲ ಎಂದುಭೂಪೇಂದ್ರ ಯಾದವ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Mon, 8 May 23