ಕೋಲಾರ ಟಿಕೆಟ್​ ಸಿದ್ದರಾಮಯ್ಯ ಬಿಟ್ಟು ಬೇರೆಯವರ ಪಾಲಾಗುತ್ತಿದ್ದಂತೆಯೇ ಭುಗಿಲೆದ್ದ ಆಕ್ರೋಶ

ಕ್ಷೇತ್ರಕ್ಕೆ ಕಾಂಗ್ರೆಸ್​​​​ ಟಿಕೆಟ್ ಘೋಷಣೆ ಬೆನ್ನಲ್ಲೇ ಮಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರ ಹೊರವಲಯದ ವಡಗೂರು ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಎದುರೇ ಮುಸ್ಲಿಂ ಮುಖಂಡರು ಅಸಮಾಧಾನ ತೋಡಿಕೊಂಡಿದ್ದಾರೆ.

ಕೋಲಾರ ಟಿಕೆಟ್​ ಸಿದ್ದರಾಮಯ್ಯ ಬಿಟ್ಟು ಬೇರೆಯವರ ಪಾಲಾಗುತ್ತಿದ್ದಂತೆಯೇ ಭುಗಿಲೆದ್ದ ಆಕ್ರೋಶ
ಸಿದ್ದರಾಮಯ್ಯ
Follow us
|

Updated on:Apr 15, 2023 | 5:09 PM

ಕೋಲಾರ: ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಇದೀಗ 43 ಕ್ಷೇತ್ರಗಳಿಗೆ ಮೂರನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮುಖ್ಯವಾಗಿ ಸಿದ್ದರಾಮಯ್ಯ (Siddaramaiah) ಅವರಿಗೆ ಕೋಲಾರ ಟಿಕೆಟ್ ನೀಡಿಲ್ಲ. ಕೋಲಾರ ಟಿಕೆಟ್​ ಸಿದ್ದರಾಮಯ್ಯನವರನ್ನು ಬಿಟ್ಟು ಬೇರೆಯವರ ಪಾಲಾಗುತ್ತಿದ್ದಂತೆಯೇ ಕ್ಷೇತ್ರದಲ್ಲಿ ಆಕ್ರೋಶ ಭುಗಿಲೆದ್ದಿದೆ. ಕ್ಷೇತ್ರಕ್ಕೆ ಕಾಂಗ್ರೆಸ್​​​​ ಟಿಕೆಟ್ ಘೋಷಣೆ ಬೆನ್ನಲ್ಲೇ ಮುಸ್ಲಿಂ (muslim) ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರ ಹೊರವಲಯದ ವಡಗೂರು ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar)​ ಎದುರೇ ಮುಸ್ಲಿಂ ಮುಖಂಡರು ಅಸಮಾಧಾನ ತೋಡಿಕೊಂಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯಗೆ ಟಿಕೆಟ್​ ನೀಡದಿದ್ದರೆ ಮುಸ್ಲಿಮರಿಗೆ ನೀಡುವಂತೆ ಒತ್ತಾಯಿಸಿದ್ದಾರೆ. ಡಿಕೆ ಶಿವಕುಮಾರ್ ಮನವೊಲಿಸಲು ಯತ್ನಿಸಿದ್ದು, ಮಾತು ಕೇಳದೆ ಮನೆಯಿಂದ ಮುಸ್ಲಿಂ ಮುಖಂಡರು ಹೊರ ನಡೆದಿದ್ದಾರೆ.

ಸಿದ್ದರಾಮಯ್ಯಗೆ ಕೈ ತಪ್ಪಿದ ಕೋಲಾರ ಟಿಕೆಟ್​; ಕೋಲಾರ ಭಾಗದ ಶಾಸಕರಿಗೆ ಬೇಸರ

ಕಾಂಗ್ರೆಸ್​ ಮೂರನೇ ಪಟ್ಟಿಯಲ್ಲಿ ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ಘೋಷಣೆ ಮಾಡಲಾಗುತ್ತದೆ ಎಂಬ ಭರವಸೆ ಇತ್ತು. ಆದರೆ ಆ ಭರವಸೆ ಸುಳ್ಳಾಗಿದ್ದು, ಕೋಲಾರ ಟಿಕೆಟ್ ಕೈ ತಪ್ಪಿದೆ. ಈ ಹಿನ್ನೆಲೆ ಕೋಲಾರ ಭಾಗದ ಶಾಸಕರಿಗೆ ಬೇಸರವಾಗಿದೆ ಎನ್ನಲಾಗಿದೆ. ಜೊತೆಗೆ ಕೋಲಾರ ಜಿಲ್ಲಾ ರಾಜಕಾರಣದ ಮೇಲೆ ಇದರ ನೆಗೆಟಿವ್ ಇಂಪ್ಯಾಕ್ಟ್ ಆತಂಕ ಶುರುವಾಗಿದೆ. ಸಿದ್ದರಾಮಯ್ಯ ಕೋಲಾರಕ್ಕೆ ಬಂದರೆ ದೊಡ್ಡ ಮಟ್ಟಿನ ಗೆಲುವು ಸಾಧಿಸಬಹುದು ಎಂಬ ಲೆಕ್ಕದಲ್ಲಿ ಶಾಸಕರಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ನ 3 ಪಟ್ಟಿ ಬಿಡುಗಡೆ: ಒಟ್ಟು 209 ಕ್ಷೇತ್ರಗಳಿ ಅಭ್ಯರ್ಥಿಗಳ ಘೋಷಣೆ: ಬಾಕಿ ಉಳಿದ ಆ 15 ಕ್ಷೇತ್ರಗಳಾವುವು?

ಕೋಲಾರದಲ್ಲಿ ಸಿದ್ದು ಬಂದರೆ ಉಳಿದ ಐದು ಕ್ಷೇತ್ರಗಳ ಮೇಲೆ ಪಾಸಿಟಿವ್ ಪರಿಣಾಮ ಬೀರುತ್ತಿತ್ತು. ಶ್ರೀನಿವಾಸಪುರ, ಬಂಗಾರಪೇಟೆ, ಮಾಲೂರು ಗೆಲುವಿಗೂ ಸಿದ್ದು ಸ್ಪರ್ಧೆ ನೆರವುಂಟಾಗಲಿದೆ ಎನ್ನಲಾಗುತ್ತಿತ್ತು. ಅಹಿಂದ ಮತಗಳ ಸೆಳೆಯುವುದಕ್ಕೆ ಅನುಕೂಲ ಆಗುವ ನಿರೀಕ್ಷಿಸಲಾಗಿತ್ತು. ಕೋಲಾರ ನಾಯಕರಿಂದ ಇದೇ ಕಾರಣಕ್ಕೆ ಪದೇ ಪದೇ ಸಿದ್ದು ಸ್ಪರ್ಧೆಗೆ ಒತ್ತಡ ಸಹ ಹಾಕಲಾಗುತ್ತಿತ್ತು.

ಬಾಕಿ ಇರುವ 15 ಕ್ಷೇತ್ರಗಳು

ಪುಲಕೇಶಿ ನಗರ, ಸಿವಿ ರಾಮನ್ ನಗರ, ಮುಳಬಾಗಿಲು , ರಾಯಚೂರು ಸಿಟಿ, ಶಿಗ್ಗಾoವಿ, ಶ್ರವಣಬೆಳಗೊಳ, ಅರಕಲಗೂಡು, ಲಿಂಗಸೂರು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್, ಹುಬ್ಬಳ್ಳಿ-ಧಾರವಾಡ ದಕ್ಷಿಣ, ಮಂಗಳೂರು-ಉತ್ತರ, ಶಿಡ್ಲಘಟ್ಟ, ಕೆ ಆರ್ ಪುರಂ, ಚಿಕ್ಕಮಗಳೂರು, ಹರಿಹರ.

ಇದನ್ನೂ ಓದಿ: ಬಿಜೆಪಿಗೆ ಗುಡ್​ ಬೈ ಹೇಳಿ ಜೆಡಿಎಸ್​ ಸೇರ್ಪಡೆಯಾದ ಎಬಿ ಮಾಲಕರೆಡ್ಡಿ

ಹಾಲಿ 4 ಕ್ಷೇತ್ರಗಳ ಟಿಕೆಟ್ ಘೋಷಿಸದ ಕಾಂಗ್ರೆಸ್​​​​

3ನೇ ಪಟ್ಟಿಯಲ್ಲಿ 19 ಹೊಸ ಮುಖಗಳಿಗೆ ಮಣೆ ಹಾಕಿರುವ ಕಾಂಗ್ರೆಸ್​,  ಹಾಲಿ ಶಾಸಕರಿರುವ 4 ಕ್ಷೇತ್ರಗಳ ಟಿಕೆಟ್ ಘೋಷಿಸದಿರುವುದು ಅಚ್ಚರಿಗೆ ಕಾರಣವಾಗಿದೆ. ಶಿಡ್ಲಘಟ್ಟ(ವಿ.ಮುನಿಯಪ್ಪ), ಲಿಂಗಸೂಗೂರು( ಡಿಎಸ್‌ ಹೂಲಗೇರಿ), ಪುಲಿಕೇಶಿ ನಗರ(ಅಖಂಡ ಶ್ರೀನಿವಾಸ್ ಮೂರ್ತಿ), ಹರಿಹರ(ಎಸ್ ರಾಮಪ್ಪ) ಕ್ಷೇತ್ರಗಳ ಟಿಕೆಟ್ ಬಾಕಿ ಉಳಿಸಿಕೊಂಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Sat, 15 April 23

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!