ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣನಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸುಧಾಕರ್
ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಎಂದು ಟ್ವೀಟರ್ನಲ್ಲಿ ಟ್ವೀಟ್ ಮಾಡುವ ಮೂಲಕ ಸುಧಾಕರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರು: 2023ರ ಮೇ 13ರಂದು ಹೊರಬಿದ್ದ 16ನೇ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ(Karnataka Assembly Elections 2023 Result) ಹೀನಾಯವಾಗಿ ಸೋಲು ಕಂಡ ಮಾಜಿ ಸಚಿವ ಡಾ.ಕೆ.ಸುಧಾಕರ್(Dr K Sudhkar) ಅವರು ಸಮ್ಮಿಶ್ರ ಸರ್ಕಾರ ಪತನ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ(Siddaramaiah) ಕಾರಣ ಎಂಬಂತೆ ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಎಂದು ಟ್ವೀಟರ್ನಲ್ಲಿ ಸುಧಾಕರ್ ಪ್ರಶ್ನೆ ಮಾಡಿದ್ದಾರೆ.
JDS-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ನಮ್ಮ ಸಮಸ್ಯೆ ಬಗ್ಗೆ, ನಮಗೆ ಆಗುತ್ತಿದ್ದ ಅನ್ಯಾಯಗಳ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಬಳಿ ಪ್ರಸ್ತಾಪ ಮಾಡುತ್ತಿದ್ದೆವು. ಸಿದ್ದರಾಮಯ್ಯ ಆಗ ಈ ಸರ್ಕಾರದಲ್ಲಿ ನನ್ನ ಮಾತು ನಡೆಯುತ್ತಿಲ್ಲ. ನನ್ನ ಕ್ಷೇತ್ರ, ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭಾ ಚುನಾವಣೆವರೆಗೂ ಸಹಿಸಿಕೊಳ್ಳಿ. ಲೋಕಸಭಾ ಚುನಾವಣೆ ಮುಗಿದ ಬಳಿಕ ಮೈತ್ರಿ ಸರ್ಕಾರ ಇರಲ್ಲ. ಹೆಚ್ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಇರಲು ಬಿಡಲ್ಲ ಎಂದು ಹೇಳ್ತಿದ್ದರು. ಸಿದ್ದರಾಮಯ್ಯ ಶಾಸಕರಿಗೆ ಸಮಾಧಾನ ಹೇಳಿ ಕಳುಹಿಸುತ್ತಿದ್ದರು. ಕಾರ್ಯಕರ್ತರು, ಮುಖಂಡರನ್ನು ಉಳಿಸಿಕೊಳ್ಳಲು ರಿಸ್ಕ್ ತೆಗೆದುಕೊಂಡ್ವಿ. ರಾಜೀನಾಮೆ ನೀಡಿ ಮತ್ತೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ಈ ನಡೆಯಲ್ಲಿ ಸಿದ್ದರಾಮಯ್ಯ ಪ್ರೇರಣೆ ಇದೆ. ಇದನ್ನು ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲ ಎನ್ನಲು ಸಾಧ್ಯವೇ? ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಡಾ.ಸುಧಾಕರ್ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:Karnataka CM Race Live: ಕಗ್ಗಂಟು ಬಗೆ ಹರಿಸೋಕೆ ಕಾಂಗ್ರೆಸ್ ಹೈಕಮಾಂಡ್ ನಿಂದ 30:30 ಸೂತ್ರ
2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.
1/3
— Dr Sudhakar K (@mla_sudhakar) May 17, 2023
ಸುಧಾಕರ್ ಅವರ ಟ್ವೀಟ್ ಈ ರೀತಿ ಇದೆ
2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.
2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.
ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:40 am, Wed, 17 May 23