ಲಿಂಗಾಯತ ಸಿಎಂ ಹೇಳಿಕೆ: ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು

ಲಿಂಗಾಯತ ಸಿಎಂ ಭ್ರಷ್ಟಾಚಾರ ಎಸಗಿ, ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ಹಿನ್ನೆಲೆ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕದಿಂದ ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

Follow us
|

Updated on:Apr 23, 2023 | 7:11 PM

ಬೆಂಗಳೂರು: ಲಿಂಗಾಯತ ಸಿಎಂ ಭ್ರಷ್ಟಾಚಾರ ಎಸಗಿ, ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ಮಾಜಿ ಸಿಎಂ ಸಿದ್ಧರಾಮಯ್ಯ  (Siddaramaiah) ಹೇಳಿಕೆಗೆ ಸದ್ಯ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಈ ಕುರಿತಾಗಿ ಸಿದ್ಧರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ಮಾಡುತ್ತಿದ್ದಾರೆ. ಇವೆಲ್ಲದರ ನಡುವೆ ಸಿದ್ಧರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕದಿಂದ ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಲಿಂಗಾಯತ ಮುಖ್ಯಮಂತ್ರಿಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಲಿಂಗಾಯತ ಯುವ ವೇದಿಕೆ ಮುಖಂಡ ಬಸವರಾಜ್​ ಎನ್ನುವವರು ದೂರು ದಾಖಲಿಸಿದ್ದಾರೆ.

ಲಿಂಗಾಯತ ಯುವ ವೇದಿಕೆಯಿಂದ ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಆಗ್ರಹ 

ಆಯೋಗಕ್ಕೆ ದೂರು ಸಲ್ಲಿಕೆ ನಂತರ ಮುಖಂಡ ಬಸವರಾಜ್ ಮಾತನಾಡಿ, ಸಿದ್ದರಾಮಯ್ಯ ಇಡೀ ಲಿಂಗಾಯತ ಸಮುದಾಯವನ್ನು ನಿಂದಿಸಿದ್ದಾರೆ. ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಹೇಳಿಕೆ ನೀಡಿದ್ದು ಸರಿಯಲ್ಲ. ನಾವು ಯಾವುದೇ ಪಕ್ಷದ ಪರವಾಗಿ ಆಯೋಗಕ್ಕೆ ದೂರು ನೀಡಿಲ್ಲ. ಇಡೀ ಲಿಂಗಾಯತ ಸಮುದಾಯವನ್ನ ತೇಜೋವಧೆ ಮಾಡಿದ್ದಾರೆ. ಕೂಡಲೇ ಸಿದ್ದರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ: ಸಿದ್ದರಾಮಯ್ಯ ಸ್ಪಷ್ಟನೆ

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಸಿದ್ದರಾಮಯ್ಯಗೆ ಎಚ್ಚರಿಕೆ

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ಮಾತನಾಡಿ, ಇದು ವೀರಶೈವ ಲಿಂಗಾಯತ ಸಮುದಾಯಕ್ಕೆ ಧಕ್ಕೆ ತರುವಂತಹ ಕೆಲಸ. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಭಾರೀ ಆಕ್ರೋಶ ಉಂಟು ಮಾಡಿದೆ. ಈ ಹಿಂದೆ ವೀರಶೈವ ಲಿಂಗಾಯತ ಸಮುದಾಯ ಒಡೆಯಲು ಯತ್ನಿಸಿದ್ದರು.

ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದನ್ನು ನಾವು ಇನ್ನೂ ಮರೆತಿಲ್ಲ. ಈಗ ಚುನಾವಣೆ ವೇಳೆ ನಿಮ್ಮ ಮನಸ್ಸಿನಲ್ಲಿರುವ ಭಾವನೆ ಹೊರಹಾಕಿದ್ದೀರಿ. ಇದು ವೀರಶೈವ ಲಿಂಗಾಯತ ಸಮುದಾಯಕ್ಕೆ ಮಾಡಿದ ದೊಡ್ಡ ದ್ರೋಹ. ವರುಣ ಕ್ಷೇತ್ರದಲ್ಲಿ 70 ಸಾವಿರಕ್ಕೂ ಹೆಚ್ಚು ಲಿಂಗಾಯತ ಮತದಾರರಿದ್ದಾರೆ. ನಿಮ್ಮ ಹೇಳಿಕೆಯಿಂದ ವೀರಶೈವ ಲಿಂಗಾಯತರಿಗೆ ತೀವ್ರ ಬೇಸರವಾಗಿದೆ. ತಕ್ಷಣ ಕ್ಷಮೆಯಾಚಿಸಿ, ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಕ್ಷಮೆಯಾಚಿಸದಿದ್ದರೆ ನೀವು ತಕ್ಕ ಪಾಠ ಕಲಿಯಬೇಕಾಗುತ್ತೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಲಿಂಗಾಯತ ಡ್ಯಾಮ್​ನಲ್ಲಿದ್ದ ಕಾಂಗ್ರೆಸ್​​ ನೀರು ಸಮುದ್ರ ಸೇರಿದ ನೀರು ಉಪ್ಪು ಇರುತ್ತೆ, ಉಪಯೋಗಕ್ಕೆ ಬರಲ್ಲ; ಡಿಕೆ ಶಿವಕುಮಾರ್​ಗೆ ಪ್ರಹ್ಲಾದ್ ಜೋಶಿ ತಿರುಗೇಟು

ಸಿದ್ದರಾಮಯ್ಯ ಸ್ಪಷ್ಟನೆ 

ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಲಿಂಗಾಯತ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಗೆ ಸೀಮಿತವಾಗಿ ಮಾತ್ರ ನಾನು ಹೇಳಿಕೆ ನೀಡಿದ್ದೇನೆ.

ಈ ಹಿಂದೆ ಸಿಎಂ ಆಗಿದ್ದ ಲಿಂಗಾಯತ ಸಮಾಜದವರು ಪ್ರಮಾಣಿಕರಾಗಿದ್ದರು. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್‌, ಜೆ.ಹೆಚ್‌.ಪಟೇಲ್‌, S.R.ಕಂಠಿ ಸೇರಿ ಲಿಂಗಾಯತ ಸಮುದಾಯದ ಸಿಎಂಗಳು ಅತ್ಯಂತ ಹಾನೆಸ್ಟ್‌ ಆಗಿದ್ದರು. ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ. ಚುನಾವಣೆ ಹಿನ್ನೆಲೆ ನನ್ನ ಹೇಳಿಕೆ ತಿರುಚಿ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಲಿಂಗಾಯತರ ಮೇಲೆ ವಿಶ್ವಾಸ ಇಲ್ಲದಿದ್ದರೆ ಏಕೆ ಇಷ್ಟು ಸೀಟ್‌ ನೀಡುತ್ತಿದ್ದೆವು ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Sun, 23 April 23

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು