Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah First Cabinet Meeting: ಐದು ಗ್ಯಾರಂಟಿಗಳಿಗೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಅನುಮೋದನೆ; ಸಿದ್ದರಾಮಯ್ಯ

Karnataka Cabinet first meeting Announcements; ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಘೋಷಣೆ ಮಾಡಿದರು. ಹೆಚ್ಚಿನ ವಿವರಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಲಾಗುವುದು. ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.

Follow us
Ganapathi Sharma
|

Updated on:May 20, 2023 | 4:31 PM

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಘೋಷಣೆ ಮಾಡಿದರು. ಹೆಚ್ಚಿನ ವಿವರಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಲಾಗುವುದು. ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಅವರು, ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.. ಗೃಹಲಕ್ಷ್ಮೀ ಯೋಜನೆಯಡಿ ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂ. ನೀಡಲಾಗುವುದು. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

ಗ್ಯಾರಂಟಿಗಳಿಗೆ ಇರುವ ಷರತ್ತುಗಳು ಮತ್ತು ನಿಯಮಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಣಾಳಿಕೆಯಲ್ಲಿ ಜನರಿಗೆ ಅನೇಕ ಭರವಸೆಗಳನ್ನು ಕೊಟ್ಟಿದ್ದೆವು. ಆದರೆ, ಇವುಗಳು ಕೇವಲ ಒಂದು ವರ್ಷದಲ್ಲಿ ಈಡೇರಿಸುವ ಭರವಸೆಗಳಲ್ಲ. ಇವುಗಳ ಜತೆಗೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡಿದ್ದೆವು. ಮೊದಲ ಸಂಪುಟದಲ್ಲಿ 5 ಗ್ಯಾರಂಟಿ ಜಾರಿ ಬಗ್ಗೆ ಹೇಳಿದ್ದೆವು. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಕಳೆದ ಬಾರಿ ನಾವು 158 ಭರವಸೆಗಳನ್ನು ಈಡೇರಿಸಿದ್ದೆವು. ಹೆಚ್ಚುವರಿಯಾಗಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಇಂದಿರಾ ಕ್ಯಾಂಟೀನ್​ ಸೇರಿ ಅನೇಕ ಯೋಜನೆ ಜಾರಿ ಮಾಡಿದ್ದೆವು. ಆದರೆ, ಕೊಟ್ಟ ಮಾತಿನಂತೆ ನಾವು ನಡೆಯುತ್ತೇವೆ ಎಂಬ ವಿಶ್ವಾಸ ಜನರಲ್ಲಿದೆ ಎಂದು ಅವರು ಹೇಳಿದರು.

ನಾವು ಭರವಸೆಗಳನ್ನು ಈಡೇರಿಸುತ್ತೇವೆ. ಆದರೆ ಪ್ರತಿಪಕ್ಷಗಳು ತಪ್ಪು ಪ್ರಚಾರ ಮಾಡಿದವು. ನಾವು ಭರವಸೆ ಈಡೇರಿಸಲಾರೆವು ಎಂದು ಪ್ರಧಾನಿ ನರೇಂದ್ರ ಮೋದಿಯೇ ಅಪ ಪ್ರಚಾರ ಮಾಡಿದ್ದರು. ಮನ್​ ಕೀ ಬಾತ್​ನಲ್ಲೇ ಕಾಂಗ್ರೆಸ್ಸಿಗರಿಂದ ಸುಳ್ಳು ಭರವಸೆ ಎಂದಿದ್ದರು ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

5 ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರಬೇಕಿದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ನಮ್ಮ ರಾಜ್ಯದ ಬಜೆಟ್​ ಗಾತ್ರ 3.10 ಲಕ್ಷ ಕೋಟಿ ರೂ. ಇದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಸಿದ್ದರಾಮಯ್ಯ ದೂರಿದರು.

ಇದನ್ನೂ ಓದಿ: Karnataka CM Oath Taking: ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ

ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಎಸ್​ಟಿ ಕೌನ್ಸಿಲ್ ಸದಸ್ಯರಾಗಿದ್ದರು. ಆದರೂ ಪ್ರಯೋಜನವಾಗಲಿಲ್ಲ. ಕೇಂದ್ರ ಸರ್ಕಾರ ನಮ್ಮ ತೆರಿಗೆಯನ್ನೇ ವಾಪಸ್ ಕೊಡೋದು. 5 ಗ್ಯಾರಂಟಿ ಯೋಜನೆಯಾದ್ರೆ ರಾಜ್ಯ ದಿವಾಳಿ ಆಗುತ್ತೆ ಅಂತ ಬಿಜೆಪಿಯವರು ಹೇಳುತ್ತಾರೆ. ದೇಶವನ್ನು ಸಾಲಗಾರ ಮಾಡಿದ್ದು ಯಾರು? ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕೇವಲ ಬರೀ 53 ಲಕ್ಷ ಕೋಟಿ ರೂ. ಸಾಲ ಇತ್ತು. ಈಗ 155 ಲಕ್ಷ ಕೋಟಿ ರೂಪಾಯಿ ದೇಶದ ಮೇಲೆ ಸಾಲ ಇದೆ. ಈಗ ರಾಜ್ಯದ ಸಾಲ 3 ಲಕ್ಷದ 22 ಸಾವಿರ ಕೋಟಿ ರೂ. ಇದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಗೃಹಲಕ್ಷ್ಮೀ ಯೋಜನೆ ಮೂಲಕ ಬಡ ಕುಟುಂಬಗಳ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ, ಬಡವರಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಹಾಗೂ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,000 ರೂ, ಮಹಿಳೆಯರಿಗೆ ಸರ್ಕಾರಿ ಬಸ್​​ಗಳಲ್ಲಿ ಉಚಿತ ಪ್ರಯಾಣದ ಭರವಸೆಗಳನ್ನು ಕಾಂಗ್ರೆಸ್ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Sat, 20 May 23

ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ