ಬೆಂಗಳೂರು: ಸಿದ್ದರಾಮಯ್ಯ(Siddaramaiah) ಅವರು ಕರ್ನಾಟಕ ಮುಖ್ಯಮಂತ್ರಿ ಎಂದು ಖುದ್ದು ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಇದರೊಂದಿಗೆ ಕೊನೆಗೂ ಕರ್ನಾಟಕ ಸಿಎಂ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ. ಇನ್ನು ಸಿಎಂ ಘೋಷಣೆ ಮುನ್ನ ಕರ್ನಾಟಕದಲ್ಲಿ ಗ್ಯಾರಂಟಿಗಳ(Congress guaranty )ಬಗ್ಗೆ ನಾನಾ ಚರ್ಚೆಗ.ಳು ನಡೆಯುತ್ತಿವೆ. ಸಿಎಂ ಗ್ಯಾರಟಿಯೇ ಆಗಿಲ್ಲ. ಈ ಗ್ಯಾರಂಟಿಗಳು ಯಾವ ಜಾರಿ ಮಾಡುತ್ತಾರೆ ಎನ್ನುವ ವ್ಯಂಗ್ಯದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದೀಗ ಇವುಗಳಿಗೆ ಸಿದ್ದರಾಮಯ್ಯ ಒಂದೇ ಮಾತಿನಲ್ಲಿ ಖಡಕ್ ಆಗಿ ಹೇಳಿದ್ದಾರೆ. ಸಿಎಂ ಘೋಷಣೆ ಬಳಿಕ ಮೊದಲ ಬಾರಿಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡುತ್ತಿದ್ದವರಿಗೆ ಪರೋಕ್ಷವಾಗಿ ತಿವಿದಿದ್ದಾರೆ.
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ. pic.twitter.com/V0OoO7JUKQ
— Siddaramaiah (@siddaramaiah) May 18, 2023
ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ಬರೋಬ್ಬರಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ (BJP), ಜೆಡಿಎಸ್ (JDS) ಹಾಗೂ ಇತರರಿಗೂ ಬಿಸಿ ಮುಟ್ಟಿಸಿದೆ. ಈ ಅದ್ಭುತ ಗೆಲುವಿಗೆ ಕಾಂಗ್ರೆಸ್ ಘೋಷಿಸಿರುವ 5 ಗ್ಯಾರಂಟಿ (5 guarantee) ಯೋಜನೆಗಳ ಪಾಲೂ ದೊಡ್ಡದಿದೆ. ಚುನಾವಣೆಗೂ ಮುನ್ನವೇ ರಾಜ್ಯದ ಜನಸಾಮಾನ್ಯರು, ಗೃಹಿಣಿಯರು, ನಿರುದ್ಯೋಗಿಗಳು, ರೈತರು ಸೇರಿದಂತೆ ಹಲವು ವರ್ಗಗಳವನ್ನು ಗುರುಯಾಗಿಸಿಕೊಂಡು 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದ್ದು, ಇದೀಗ ಆ 5 ಗ್ಯಾರಂಟಿಗಳನ್ನು ಈಡೇರಿಸಬೇಕೆಂದು ರಾಜ್ಯಾದ್ಯಂತ ಜನಸಾಮಾನ್ಯರ ಕೂಗು ಜೋರಾಗುತ್ತಿದೆ.
ಅದರಲ್ಲೂ 200 ಯುನಿಟ್ ವಿದ್ಯುತ್ ಉಚಿತ ಗ್ಯಾರಂಟಿ ಬಗ್ಗೆನೇ ರಾಜ್ಯಾದ್ಯಂತ ಭಾರೀ ಚರ್ಚೆಯಾಗುತ್ತಿದೆ. ಅಲ್ಲದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ವಿದ್ಯುತ್ ಬಿಲ್ ಕಟ್ಟಲ್ಲ ಎನ್ನುವ ವಿಡಿಯೋ ಸಾಕಷ್ಟು ಹರಿದಾಡುತ್ತಿವೆ. ಇನ್ನು ಇದಕ್ಕೆ ಬಿಜೆಪಿ ಕಾರ್ಯಕರ್ತರು ನಾಯಕರು ವ್ಯಂಗ್ಯವಾಡುತ್ತಿದ್ದು, ಸಿಎಂ ಗ್ಯಾರಂಟಿ ಆಗಿಲ್ಲ. ಇನ್ನು ಈ ಗ್ಯಾರಂಟಿ ಯಾವಾಗ ಈಡೇರಿಸುತ್ತಾರೋ ಎನ್ನುವ ವ್ಯಂಗ್ಯಭರಿತ ಮಾತುಗಳನ್ನಾಡುತ್ತಿದ್ದಾರೆ. ಇದೀಗ ಸಿದ್ದರಾಮಯ್ಯ ಅವರು ಸಿಎಂ ಆಗಿ ಆಯ್ಕೆಯಾಗಿದ ಬೆನ್ನಲ್ಲೇ ಮೊದಲ ಪ್ರತಿಕ್ರಿಯೆಯಲ್ಲಿ ಗ್ಯಾರಂಟಿಗಳ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ವ್ಯಂಗ್ಯವಾಡುವವರಿಗೆ ಟಾಂಗ್ ಕೊಟ್ಟಿದ್ದಾರೆ.
Published On - 12:56 pm, Thu, 18 May 23