AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಹರೂ ಓಲೇಕರ್ ಹೇಳಿರುವುದನ್ನು ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ ಎಂದ ರಣದೀಪ್ ಸಿಂಗ್ ಸುರ್ಜೇವಾಲ

ನಿನ್ನೆ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಲಿಂಗಾಯತ ಸಿಎಂಗಳ ಬಗ್ಗೆ ನೀಡಿದ ಹೇಳಿಕೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರತಿಕ್ರಿಯೆ ನೀಡಿದ್ದಾರೆ.

ನೆಹರೂ ಓಲೇಕರ್ ಹೇಳಿರುವುದನ್ನು ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ ಎಂದ ರಣದೀಪ್ ಸಿಂಗ್ ಸುರ್ಜೇವಾಲ
ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೇವಾಲ
ಆಯೇಷಾ ಬಾನು
|

Updated on:Apr 23, 2023 | 2:07 PM

Share

ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ನಿನ್ನೆ (ಏಪ್ರಿಲ್ 22) ಪ್ರಚಾರ ನಡೆಸಿದ ಸಿದ್ದರಾಮಯ್ಯ, ಈ ವೇಳೆ ಲಿಂಗಾಯತರೇ ಸಿಎಂ ಆಗಿರುವುದು. ಇವಾಗ ಅವರೇ ಅಲ್ವ ಭ್ರಷ್ಟಾಚಾರ ಮಾಡಿ ಕೆಟ್ಟಹೆಸರು ತಂದಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಯಾವಾಗ ಸಿದ್ದರಾಮಯ್ಯ ಬಾಯಿಂದ ಈ ಮಾತು ಬಂತೋ ಬಿಜೆಪಿ ಟ್ವೀಟ್‌ ಮೂಲಕವೇ ಯುದ್ಧ ಸಾರಿತ್ತು. ವೀರಶೈವ ಲಿಂಗಾಯತ ಸಮಾಜ ಒಡೆಯಲು ಸಿದ್ದರಾಮಯ್ಯ ಈ ಹಿಂದೆ ಯತ್ನಿಸಿದ್ರು. ಲಿಂಗಾಯತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು. ಈ ಘಟನೆ ಸಂಬಂಧ ಬೆಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರತಿಕ್ರಿಯೆ ನೀಡಿದ್ದಾರೆ.

‘ಸಿದ್ದರಾಮಯ್ಯ ಅವರು ಬಹಳ ಸ್ಪಷ್ಟವಾಗಿ ತಮ್ಮ ಹೇಳಿಕೆ ನೀಡಿದ್ದು, ಲಿಂಗಾಯತ ಸಮುದಾಯದಿಂದ ಬಂದು ರಾಜ್ಯದ ಮುಖ್ಯಮಂತ್ರಿಯಾಗಿ ಅನೇಕ ಉತ್ತಮ ಕೊಡುಗೆಗಳನ್ನು ನೀಡಿರುವವರ ಬಗ್ಗೆ ನನಗೆ ಬಹಳ ಗೌರವವಿದೆ. ವೀರೇಂದ್ರ ಪಾಟೀಲ್, ಜೆ.ಹೆಚ್ ಪಟೇಲ್, ನಿಜಲಿಂಗಪ್ಪ ಅವರು ಲಿಂಗಾಯತ ಸಮುದಾಯದಿಂದ ಬಂದು ರಾಜ್ಯದ ಮುಖ್ಯಮಂತ್ರಿಗಳಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಆದರೆ ದುರಾದೃಷ್ಟವಶಾತ್, ಬಸವರಾಜ ಬೊಮ್ಮಾಯಿ ಅವರು ಅವರದೇ ಪಕ್ಷ ಶಾಸಕ ನೆಹರೂ ಓಲೇಕರ್ ಅವರ ಪ್ರಕಾರ 40% ಕಮಿಷನ್ ಏಜೆಂಟ್ ಆಗಿದ್ದಾರೆ. ಈ ಆರೋಪ ನಾವು ಮಾಡಿಲ್ಲ. ನೆಹರೂ ಓಲೇಕರ್ ಹೇಳಿರುವುದನ್ನು ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ, ಅದರಲ್ಲಿ ತಪ್ಪೇನಿದೆ? ಎಂದು ಸುರ್ಜೇವಾಲ ಅವರಿ ಸಿದ್ದರಾಮಯ್ಯರಿಗೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ವೀರಶೈವ ಲಿಂಗಾಯತರ ಬಗ್ಗೆ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ

ಬೊಮ್ಮಾಯಿ ಅವರು ತಾವೊಬ್ಬರೆ ಇಡೀ ಲಿಂಗಾಯತ ಸಮಾಜದ ಪ್ರತೀಕ ಎಂಬ ಭ್ರಮೆಯಿಂದ ಹೊರಬರಬೇಕು. ಬೊಮ್ಮಾಯಿ ಅವರು ತಮ್ಮ 40% ಕಮಿಷನ್ ಭ್ರಷ್ಟಾಚಾರದಿಂದ ರಾಜ್ಯಕ್ಕೆ ಕಳಂಕ ತಂದಿದ್ದಾರೆ. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್, ಜೆ.ಹೆಚ್ ಪಟೇಲ್ ಸೇರಿದಂತೆ ರಾಜ್ಯದ ಪ್ರಮುಖ ಮುಖ್ಯಮಂತ್ರಿಗಳು ತಮ್ಮ ಸಮುದಾಯಕ್ಕೆ ಮಾತ್ರವಲ್ಲ ರಾಜ್ಯಕ್ಕೆ ಕೀರ್ತಿ ತಂದಿದ್ದರು. ಬೊಮ್ಮಾಯಿ ಅವರು ಇವರುಗಳನ್ನು ನೋಡಿ ಶೇ.1 ರಷ್ಟಾದರೂ ಕಲಿತಿದ್ದರೆ ಸಾಕಿತ್ತು. ಇಂದು ಬಸವಣ್ಣ ಜಯಂತಿ. ಬಸವಣ್ಣನ ಸಿದ್ಧಾಂತ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಜಾತಿರಹಿತ ಸಮಾಜ, ಅಸಮಾನತೆ ರಹಿತ ಸಮಾಜ ನಿರ್ಮಾಣ ಬಸವಣ್ಣ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತವಾಗಿದೆ. ಬಸವಣ್ಣನವರು ಮನುಷ್ಯರಲ್ಲಿ ಸಮಾನತೆಯನ್ನು ಸಾರಲು ಮುಂದಾದವರು. ಅವರ ಮಾರ್ಗದರ್ಶನಗಳೇ ಭಾರತದ ಪ್ರಜಾಪ್ರಭುತ್ವದ ಅಡಿಪಾಯ.

ಇಂದು ದೇಶದಲ್ಲಿ ಕಾಣುತ್ತಿರುವ ಸಂಸತ್ ಪ್ರಜಾಪ್ರಭುತ್ವವನ್ನು ಬಸವಣ್ಣನವರು 900 ವರ್ಷಗಳ ಹಿಂದೆಯೇ ಅಳವಡಿಸಿಕೊಂಡಿದ್ದರು. ಕಾಂಗ್ರೆಸ್ ಸ್ವಾತಂತ್ರ್ಯ ಚಳುವಳಿ ಬಸವಣ್ಣನವರ ವಚನ, ಮಹಾತ್ಮಾ ಗಾಂಧಿ ಅವರ ಆದರ್ಶಗಳ ಮೇಲೆ ಸಾಗಿತ್ತು. ಬಸವರಾಜ ಬೊಮ್ಮಾಯಿಯಂತಹವರು ರಾಜ್ಯಕ್ಕೆ ಕಳಂಕ ತಂದಿದ್ದಾರೆ. ಬಿಜೆಪಿಯವರು ಈ ಸಮಾಜದ ಪ್ರಮುಖರಾದ ಯಡಿಯೂರಪ್ಪ ಅವರಂತಹ ಪ್ರಮುಖ ನಾಯಕರನ್ನು ಬಳಸಿ ಮೂಲೆಗೆ ಬಿಸಾಡಿದೆ. ಯಡಿಯೂರಪ್ಪ ಅವರ ಜೊತೆ ನಮಗೆ ಸಾಕಷ್ಟು ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿರಬಹುದು, ಆದರೆ ನಾವು ಯಡಿಯೂರಪ್ಪ ಅವರನ್ನು ಶೋಭಾ ಕರಂದ್ಲಾಜೆ ಅವರ ಕೆಳಗೆ ನೇಮಕ ಮಾಡುತ್ತಿರಲಿಲ್ಲ. ಜಗದೀಶ್ ಶೆಟ್ಟರ್ ಅವರನ್ನು ಅಪಮಾನ ಮಾಡಿದ್ದು ನಾವಲ್ಲ, ಬಿಜೆಪಿಯವರು. ಉಪಮುಖ್ಯಮಂತ್ರಿಯಾಗಿದ್ದ ಸವದಿ ಅವರನ್ನು ಮೂಲೆ ಗುಂಪು ಮಾಡಿದ್ದು ಬಿಜೆಪಿ. ಅನೇಕ ಲಿಂಗಾಯತ ನಾಯಕರನ್ನು ಅಪಮಾನ ಮಾಡಿದ್ದು ಬಿಜೆಪಿ. ಬಿಜೆಪಿ ಹಾಗೂ ಬೊಮ್ಮಾಯಿ ಅವರು ಎಸ್​ಸಿ, ಎಸ್​ಟಿ, ಒಬಿಸಿಗೆ ಮಾತ್ರ ಮೋಸ ಮಾಡಿಲ್ಲ, ಮೀಸಲಾತಿ ಹೆಸರಲ್ಲಿ ಲಿಂಗಾಯತರು ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಅಲ್ಪಸಂಖ್ಯಾತರ ಮೀಸಲಾತಿ ಕಿತ್ತು, ಅದನ್ನು ಒಕ್ಕಲಿಗರು, ಲಿಂಗಾಯತರಿಗೆ ನೀಡಿ, ಈ ತೀರ್ಮಾನವನ್ನು ಸುಪ್ರೀಂ ಕೋರ್ಟ್ ನಲ್ಲಿ ತಡೆ ಹಿಡಿದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:07 pm, Sun, 23 April 23

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ