ಕೊನೆಗೂ ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಮತ್ತೊಂದು ಕ್ಷೇತ್ರದ ಮೇಲೂ ಆಸೆ

ಕೊನೆಗೂ ಸಿದ್ದರಾಮಯ್ಯ ಅವರು ಅಂತಿಮವಾಗಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಆಸೆ ವ್ಯಕ್ತಪಡಿಸಿದ್ದಾರೆ.

ಕೊನೆಗೂ ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಮತ್ತೊಂದು ಕ್ಷೇತ್ರದ ಮೇಲೂ ಆಸೆ
ಸಿದ್ದರಾಮಯ್ಯ
Follow us
ರಮೇಶ್ ಬಿ. ಜವಳಗೇರಾ
|

Updated on:Mar 24, 2023 | 2:45 PM

ಚಿತ್ರದುರ್ಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಅಂತಿಮವಾಗಿ ವರುಣಾದಿಂದ ಸ್ಪರ್ಧಿಸುವ (varuna constituency) ಇಂಗಿತ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವರುಣಾ ಜೊತೆಗೆ ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆಯೂ ಹೇಳಿದ್ದಾರೆ. ಇಂದು(ಮಾರ್ಚ್ 24) ಚಿತ್ರದುರ್ಗದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಮನೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೇಳಿದ್ದಾರೆ. ವರುಣಾ ಜೊತೆಗೆ ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಹಾಗಾಗಿ ವರುಣಾ ಕ್ಷೇತ್ರದ ಟಿಕೆಟ್ ನೀಡುವಂತೆ ಕೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರು. ಆದ್ರೆ, ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯ ಬಾದಾಮಿಯಲ್ಲಿ ಅಲ್ಪಮತಗಳಿಂದ ಗೆದ್ದಿದ್ದರು. ಈ ಬಾರಿ ಸಹ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಆದ್ರೆ, ಸದ್ಯಕ್ಕೆ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಮನಸು ಮಾಡಿದ್ದಾರೆ.

ಇದನ್ನೂ ಓದಿ: ಕ್ಷೇತ್ರ ಗೊಂದಲ ನಡುವೆ ಸಿದ್ದರಾಮಯ್ಯ ಮತ್ತೊಂದು ಮೆಗಾ ಪ್ಲ್ಯಾನ್, ಆಪ್ತರ ಮೂಲಕ ಹೈಕಮಾಂಡ್​ಗೆ ಸಂದೇಶ

ವರುಣಾದಿಂದ ಸ್ಪರ್ಧಿಸಲು ಬಗ್ಗೆ ಸತಃ ಸಿದ್ದರಾಮಯ್ಯ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಕ್ಷೇತ್ರ ಯಾವುದು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಇನ್ನು ಇದರ ವರುಣಾ ಜೊತೆ ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮನೆಯಯಲ್ಲಿ ಹೇಳಿದ್ದಾರೆ ಎಂದು ಸಿದ್ದರಾಮಯ್ಯನವರ ಹೇಳಿಕೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಕಾಂಗ್ರೆಸ್​ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಂದರೆ ಸಿದ್ದರಾಮಯ್ಯ ಈ ಬಾರಿಯೂ ಸಹ ಎರಡು ಕ್ಷೇತ್ರದಿಂದ ಅಖಾಡಕ್ಕಿಳಿಯುವ ಪ್ಲ್ಯಾನ್ ಮಾಡಿದ್ದಾರೆ. ಹೀಗಾಗಿ ಈ ಮಾತುಗಳನ್ನಾಡಿದ್ದಾರೆ. ಆದ್ರೆ, ವರುಣಾ ಬಿಟ್ಟು ಇನ್ನೊಂದು ಯಾವ ಕ್ಷೇತ್ರ ಎನ್ನುವುದು ಮಾತ್ರ ಹೇಳಿಲ್ಲ.

ಈ ಮೊದಲ ಅಳೆದು ತೂಗಿ ಕೊನೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದ್ರೆ, ರಾಹುಲ್​ ಗಾಂಧಿ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡದಂತೆ ಸಲಹೆ ನೀಡಿದ್ದರಿಂದ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆನ್ನುವುದು ಸಿದ್ದರಾಮಯ್ಯಗೆ ದಿಕ್ಕುತೋಚದಂತಾಗಿತ್ತು. ಇದೀಗ ಅಂತಿಮವಾಗಿ ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಸಿದ್ದರಾಮಯ್ಯ ಅವರು ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಅಭಿಮಾನಿಗಳ ಗೊಂದಲಕ್ಕೆ ತೆರೆ ಬಿದ್ದಿದೆ.

Published On - 2:32 pm, Fri, 24 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ