ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎನ್ನುವವರಲ್ಲಿ ನಾನೂ ಒಬ್ಬ: ಮಾಜಿ ಶಾಸಕ ಬಸವರಾಜ ರಾಯರೆಡ್ಡಿ

ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎನ್ನುವವರಲ್ಲಿ ನಾನೂ ಒಬ್ಬ ಎಂದು ಮಾಜಿ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು.

Follow us
|

Updated on:May 14, 2023 | 3:53 PM

ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎನ್ನುವವರಲ್ಲಿ ನಾನೂ ಒಬ್ಬ ಎಂದು ಮಾಜಿ ಶಾಸಕ ಬಸವರಾಜ ರಾಯರೆಡ್ಡಿ (Basavaraj Rayareddy) ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೆ ಮುಂದೆ ಮಾತನಾಡಲ್ಲ. ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ನಾನು ಬದ್ಧ. ಡಿಕೆ ಶಿವಕುಮಾರ್​ ಪಕ್ಷ ಸಂಘಟನೆಗೆ ಹ್ಯಾಟ್ಸಾಫ್. ಸಿದ್ದರಾಮಯ್ಯಗೆ ಇಮೇಜ್ ಇದೆ, ಜನರ ಆಕರ್ಷಣೆ ಇದೆ. ಪಕ್ಷ ಯಾರನ್ನೇ ಸಿಎಂ ಮಾಡಿದರೂ ನಾವು ಒಪ್ಪಿಕೊಳ್ಳುತ್ತೇವೆ. ಲಿಂಗಾಯತ ನಾಯಕರಲ್ಲಿ ನಾನು ಅತಿ ಹೆಚ್ಚು ಬಾರಿ ಗೆದ್ದವನು. ಲಿಂಗಾಯತ ನಾಯಕರು ಸಿಎಂ ಆಗಲಿ ಅಂತಾ ಕೇಳೋದು ತಪ್ಪಿಲ್ಲ ಎಂದು ಹೇಳಿದರು.

50:50 ಅಧಿಕಾರ ಹಂಚಿಕೆ ಬಗ್ಗೆ ನನಗೆ ಗೊತ್ತಿಲ್ಲ. ಒಬ್ಬರೇ 5 ವರ್ಷ ಸಿಎಂ ಆದರೆ ಉತ್ತಮ ಆಡಳಿತ ನೀಡಲು ಸಾಧ್ಯ. ಒಬ್ಬರೇ 5 ವರ್ಷ ಆಗಲಿ ಅನ್ನೋದು ನನ್ನ ಅಭಿಪ್ರಾಯ. ಡಿಕೆ ಶಿವಕುಮಾರ್​ಗೆ ಅವಕಾಶ ಕೊಟ್ಟರೆ ಅವರೂ ಚೆನ್ನಾಗಿ ಆಡಳಿತ ಮಾಡಬಹುದು ಎಂದರು.

ಇದನ್ನೂ ಓದಿ: ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದಿದ್ದ ಯುವ ನಾಯಕ ಪ್ರಧಾನ ಕಾರ್ಯದರ್ಶಿ ಹುದ್ದಗೆ ರಾಜಿನಾಮೆ

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಮಾನ್ಯ ಭೇಟಿ, ಸಭೆಗಳನ್ನು ನಡೆಸುತ್ತಿದ್ದೇವೆ. ಯಾವುದೇ ಗೊಂದಲ, ಟೆನ್ಶನ್‌ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಸಿಎಂ ಆಗಲಿ ಅಂತಾ ಆಶೀರ್ವಾದ ಮಾಡೋಕೆ ನಾವೇನು ಹೈ ಕಮಾಂಡ್ ಅಲ್ಲ: ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ

ಡಿ.ಕೆ ಶಿವಕುಮಾರ್​ ನೊಣವಿನಕೆರೆ ಮಠಕ್ಕೆ ಭೇಟಿ ನೀಡಿದ್ದರು. ಈ ಬಗ್ಗೆ ಶ್ರೀ ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ರೈತರು ಏನು ಬೆಳೆದರೂ ಅದಕ್ಕೆ ಬೆಲೆ ಸಿಗದೇ ಪರದಾಡುತ್ತಿದ್ದಾರೆ. ಎಲ್ಲಾ ನ್ಯೂನತೆಯನ್ನ ಸರಿಪಡಿಸುವ ನಾಯಕ ಬೇಕಾಗಿದೆ. ಅವರ ಯೋಗಾಯೋಗ ಏನಿರುತ್ತೆ ಅದನ್ನ ಅವರು ಪಡೆಯುತ್ತಾರೆ. ಅವರೇ ಆಗುತ್ತಾರೆ ಅಂತಾ ಹೇಳೋಕೆ ನಾವೇನು ಭಗವಂತ ಅಲ್ಲ. ಸಿಎಂ ಆಗಲಿ ಅಂತಾ ಆಶೀರ್ವಾದ ಮಾಡೋಕೆ ನಾವೇನು ಹೈ ಕಮಾಂಡ್ ಅಲ್ಲ. ಶ್ರೀ ಮಠ ಸರ್ವೆ ಜನೋ ಸುಖಿನು ಭವಂತು ಅನ್ನುತ್ತೆ ಎಂದರು.

ಇದನ್ನೂ ಓದಿ: ಚುನಾವಣೆಯಲ್ಲಿ ಸೋತ ಸಿಟಿ ರವಿಗೆ ಧೈರ್ಯ ತುಂಬಿದ ಬಾಲಕ: ವಿಡಿಯೋ ವೈರಲ್

ಸಿಎಂ ಆಯ್ಕೆ ವಿಚಾರ ಹೈ ಕಮಾಂಡ್​ಗೆ ಬಿಟ್ಟಿದ್ದು

ದೇಶಕ್ಕೆ ಒಳ್ಳೆಯದನ್ನ ಮಾಡಲಿ. ಬಾರದು ಬಪ್ಪದು, ಬಪ್ಪದು ತಪ್ಪದು. ಸೋಮಣ್ಣ ಕೂಡ ಶ್ರೀ ಮಠದ ಮಗನೆ, ಶಿವಕುಮಾರ್ ಕೂಡ ಶ್ರೀ ಮಠದ ಮಗನೆ. ಸೋಮಣ್ಣ ಎರಡೂ ಕಡೆನೂ ಸೋತಿದ್ದಾರೆ. ಅಂದ ಮಾತ್ರಕ್ಕೆ ಸ್ವಾಮಿಗಳು ಸೋಮಣ್ಣಗೆ ಸರಿಯಾಗಿ ಆಶೀರ್ವಾದ ಮಾಡಲಿಲ್ಲ ಅಂತಾ ಅರ್ಥನಾ ಎಂದು ಪ್ರಶ್ನಿಸಿದರು.

ದೇನೇವಾಲಾ ಭಗವಾನ್ ಹೇ. ಜನರ ಅಪೇಕ್ಷೆಯಂತೆ ಬಹುಮತದ ಸರ್ಕಾರ ಬಂದಿದೆ. ಈಗ ಯಾರು ಸಿಎಂ ಆಗಬೇಕು ಅಂತಾ ಹೈ ಕಮಾಂಡ್​​ ನಿರ್ಧಾರ ಮಾಡುತ್ತೆಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:53 pm, Sun, 14 May 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ