ನಾವು ಅಧಿಕಾರಕ್ಕೆ ಬಂದರೆ 5 ವರ್ಷದಲ್ಲಿ 20 ಲಕ್ಷ ಮನೆ ಕಟ್ಟಿಸಿಕೊಡುತ್ತೇವೆ: ಭರವಸೆ ನೀಡಿದ ಸಿದ್ಧರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದು 4 ವರ್ಷ ಆದರೂ ಒಂದು ಮನೆ ಕಟ್ಟಿಸಿಕೊಟ್ಟಿಲ್ಲ. ಹಾಗಾಗಿ ನಾವು ಅಧಿಕಾರಕ್ಕೆ ಬಂದರೆ 5 ವರ್ಷದಲ್ಲಿ 20 ಲಕ್ಷ ಮನೆ ಕಟ್ಟಿಸಿಕೊಡುತ್ತೇವೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು.
ವಿಜಯನಗರ: ನಾವು ಅಧಿಕಾರಕ್ಕೆ ಬಂದರೆ 5 ವರ್ಷದಲ್ಲಿ 20 ಲಕ್ಷ ಮನೆ ಕಟ್ಟಿಸಿಕೊಡುತ್ತೇವೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ (Siddaramaiah) ಹೇಳಿದರು. ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, SC, STಯವರು ಆನ್ಲೈನ್ನಲ್ಲಿ ಅರ್ಜಿ ಹಾಕಿದ ತಕ್ಷಣ ಮನೆ ನೀಡುತ್ತೇವೆ. ಬಿಜೆಪಿ ಅಧಿಕಾರಕ್ಕೆ ಬಂದು 4 ವರ್ಷ ಆದರೂ ಒಂದು ಮನೆ ಕಟ್ಟಿಸಿಕೊಟ್ಟಿಲ್ಲ. ಬಿಜೆಪಿಯವರು 4 ವರ್ಷದಲ್ಲಿ ಲೂಟಿ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. 40 ಪರ್ಸೆಂಟ್ ಕಮಿಷನ್ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗಿದೆ. ಗುತ್ತಿಗೆದಾರರ ಸಂಘ ಪತ್ರ ಬರೆದರೂ ಇದುವರೆಗೂ ಕ್ರಮಕೈಗೊಂಡಿಲ್ಲ. ಸಿಎಂ ಬೊಮ್ಮಾಯಿ ದಾಖಲೆ ಇದ್ದರೆ ನೀಡಿ ಅಂತಾರೆ. ಬಿಜೆಪಿ ಶಾಸಕ ಮಾಡಾಳ್ ಪುತ್ರ ಲಂಚ ಪಡೆಯುವಾಗ ಸಿಕ್ಕಿಬಿದ್ದರು. ನಿಮಗೆ ಇದಕ್ಕಿಂತ ದಾಖಲೆ, ಸಾಕ್ಷಿ ಬೇಕಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಒಂದು ವೇಳೆ ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ದರೆ ಒಂದು ನಿಮಿಷವೂ ಅಧಿಕಾರದಲ್ಲಿರಲ್ಲ. ಜೆಡಿಎಸ್ಗೆ ಮತಹಾಕಿದರೆ ಬಿಜೆಪಿಗೆ ಹಾಕಿದಂತೆ. ಕಾಂಗ್ರೆಸ್ ವೋಟ್ ಡಿವೈಡ್ ಮಾಡಲು ಜೆಡಿಎಸ್ ಸ್ಪರ್ಧೆ ಮಾಡಿದ್ದಾರೆ. ಭೀಮಾನಾಯ್ಕ್ಗೆ ಮತ ಹಾಕಿ ಗೆಲ್ಲಿಸಿ ಎಂದು ಹೇಳಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯ ಉಳಿಯಲ್ಲ
ನಾನು ಸಿಎಂ ಆಗಿದ್ದ ವೇಳೆ ನುಡಿದಂತೆ ನಡೆದಿದ್ದೇವೆ. ಸಿಎಂ ಆಗಿದ್ದ ವೇಳೆ ನೀಡಿದ ಎಲ್ಲ ಭರವಸೆಗಳನ್ನ ಈಡೇರಿಸಿದ್ದೇವೆ. ಆದರೆ ಬಿಜೆಪಿಯವರು 600 ಭರವಸೆಗಳನ್ನ ನೀಡಿದ್ದರು. ಇಲ್ಲಿಯವರಿಗೆ 66 ಭರವಸೆಗಳನ್ನ ಈಡೇರಿಸಿಲ್ಲ. ಪ್ರಧಾನಿ ನರೇಂದ್ರ ಮೋದಿಯವರೇ ನಿಮ್ಮಗೆ ಕರ್ನಾಟಕದ ಪರಿಸ್ಥಿತಿ ಗೊತ್ತಿಲ್ಲ. ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ 5 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದ್ದರೆ ರಾಜ್ಯ, ಪ್ರಜಾಪ್ರಭುತ್ವ, ಸಂವಿಧಾನ ಉಳಿಯಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು.
ಇದನ್ನೂ ಓದಿ: ಈ ಚುನಾವಣೆ ನಂತರ ಕಾಂಗ್ರೆಸ್, ಜೆಡಿಎಸ್ ಪಕ್ಷ ಇರುವುದಿಲ್ಲ ಎಂದ ಸಚಿವ ಆರ್ ಅಶೋಕ್
ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಸಿದ್ದರಾಮಯ್ಯ ತಿರುಗೇಟು
ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಸಂವಿಧಾನಕ್ಕೆ ಅಪಮಾನ, ಅಪಚಾರ ಮಾಡಿದವರು ಯಾರು. ವಿರೋಧ ಮಾಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ. ಸಂವಿಧಾನವನ್ನ ಡಾ. ಅಂಬೇಡ್ಕರ್ ಅವರು ತಾನೇ ರಚನೆ ಮಾಡಿದ್ದು. ಮೋದಿ ನಮ್ಮಗೇನೂ ಪಾಠ ಹೇಳಿಕೊಡುವುದು? ಅನಂತಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾಡತ್ತೇನೆ ಅಂದ್ರು. ಇವರು ಮಾತನಾಡಿದ್ರಾ ಎಂದು ಕಿಡಿಕಾರಿದರು.
ಸೋಮಣ್ಣ ಬಗ್ಗೆ ನಾನು ಮಾತನಾಡಲ್ಲ ಎಂದ ಸಿದ್ಧರಾಮಯ್ಯ
ಮೋದಿ ವಿರುದ್ದ ಅಪ್ರಚಾರ ಮಾಡಿದಕ್ಕೆ ಬಿಜೆಪಿ ಗೆಲುವು ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಪಂಜಾಬ್, ಹಿಮಾಚಲಪ್ರದೇಶ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಯಾಕೆ ಅಧಿಕಾರಕ್ಕೆ ಬರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವರುಣಾದಲ್ಲಿ ಸೋಮಣ್ಣ ಸಿದ್ದರಾಮಯ್ಯಗೆ ಜಂಟಿ ಪ್ರಚಾರಕ್ಕೆ ಸವಾಲ್ ಹಿನ್ನಲೆ ಸೋಮಣ್ಣ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನಿಮ್ಮ ಜೀವನ ಸುಧಾರಿಸಲಿದೆ: ಪ್ರಿಯಾಂಕಾ ಗಾಂಧಿ
ಸುಳ್ಳು ಹೇಳುವುದು ಕಾಂಗ್ರೆಸ್ ಜಾಯಮಾನವಲ್ಲ
ಕಾಂಗ್ರೆಸ್ ಗ್ಯಾರಂಟಿಗೆ ಪ್ರಧಾನಿ ಮೋದಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಮೋದಿ ಗ್ಯಾರಂಟಿ ಯೋಜನೆ ಜಾರಿ ಮಾಡಲ್ಲ ಎಂದು ಹೇಳಿದ್ದಾರೆ. ಸುಳ್ಳು ಹೇಳುವುದು ಕಾಂಗ್ರೆಸ್ ಜಾಯಮಾನವಲ್ಲ. ಗ್ಯಾರಂಟಿ ಯೋಜನೆಯಿಮದ ರಾಜ್ಯ ಸಾಲಗಾರ ಆಗುತ್ತೆ ಅಂತಿದ್ದಾರೆ. ನಾನು 12 ವರ್ಷ ಹಣಕಾಸು ಸಚಿವನಾಗಿ ಕೆಲಸ ಮಾಡಿದ್ದೇನೆ. ಹಣವನ್ನು ಹೇಗೆ ಹೊಂದಿಸಿಕೊಳ್ಳಬೇಕು ಅಂತಾ ನನಗೆ ಗೊತ್ತಿದೆ. ಮೋದಿ ಅವಧಿಯಲ್ಲಿ ಮಾಡಿದಷ್ಟು ಸಾಲ ಯಾರ ಕಾಲದಲ್ಲೂ ಆಗಿಲ್ಲ ಎಂದು ವಾಗ್ದಾಳಿ ಮಾಡಿದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:33 pm, Sat, 29 April 23