ಇವರೆಲ್ಲಾ ಲಂಚ ಕೊಟ್ಟು ಬಂದಿದ್ದಾರೆ ಎಂದು ಪೊಲೀಸರ ಕಡೆ ಕೈ ಮಾಡಿ ಸರ್ಕಾರದ ವಿರುದ್ಧ ಸಿದ್ಧರಾಮಯ್ಯ ಕಿಡಿ

ರಾಜ್ಯ ಬಿಜೆಪಿ ಸರ್ಕಾರ ಈಗಾಗಲೇ ಭ್ರಷ್ಟ ಸರ್ಕಾರ ಎಂಬುದು ರಾಜ್ಯದ ಜನತೆಗೆ ತಿಳಿದಿದೆ. ಎಲ್ಲಿ ಹೋದರು ಲಂಚ ಲಂಚ. ಪೊಲೀಸ್​ರ ಕಡೆ ಕೈ ಮಾಡಿ ಇವರೆಲ್ಲಾ ಲಂಚಾಕೊಟ್ಟು ಬಂದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು.

ಇವರೆಲ್ಲಾ ಲಂಚ ಕೊಟ್ಟು ಬಂದಿದ್ದಾರೆ ಎಂದು ಪೊಲೀಸರ ಕಡೆ ಕೈ ಮಾಡಿ ಸರ್ಕಾರದ ವಿರುದ್ಧ ಸಿದ್ಧರಾಮಯ್ಯ ಕಿಡಿ
ಮಾಜಿ ಸಿಎಂ ಸಿದ್ಧರಾಮಯ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on: Apr 30, 2023 | 4:41 PM

ದಾವಣಗೆರೆ: ರಾಜ್ಯ ಬಿಜೆಪಿ ಸರ್ಕಾರ ಈಗಾಗಲೇ ಭ್ರಷ್ಟ ಸರ್ಕಾರ ಎಂಬುದು ರಾಜ್ಯದ ಜನತೆಗೆ ತಿಳಿದಿದೆ. ಎಲ್ಲಿ ಹೋದರು ಲಂಚ ಲಂಚ. ಪೊಲೀಸರ ಕಡೆ ಕೈ ಮಾಡಿ ಇವರೆಲ್ಲಾ ಲಂಚಾಕೊಟ್ಟು ಬಂದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಬಿಜೆಪಿ ವಿರುದ್ಧ ಕಿಡಿಕಾರಿದರು. ಜಿಲ್ಲೆಯ ಜಗಳೂರಿನ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ 15 ರಿಂದ 20 ಲಕ್ಷ ರೂ. ವರ್ಗಾವಣೆಗೆ ಲಂಚ ಕೊಡಬೇಕು.  ಬೆಂಗಳೂರಿನಂತಹ ನಗರಗಳಿಗೆ 30 ರಿಂದ 40 ಲಕ್ಷ ರೂ. ಲಂಚ ಕೊಡಬೇಕು. ಬಿಜೆಪಿ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ನಿರ್ಮಿಸಿದೆ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಬಸವರಾಜ ಬೊಮ್ಮಾಯಿ ಅಲ್ಲಾ. ಸಿದ್ದರಾಮಯ್ಯ ನರೇಂದ್ರ ಮೋದಿ ಅಲ್ಲಾ. ಗ್ಯಾರೆಂಟಿಗಳ ಬಗ್ಗೆ ಬಿಜೆಪಿ ವ್ಯಂಗ್ಯವಾಡುತ್ತದೆ. ಹಣ ಎಲ್ಲಿದೆ ಎನ್ನುತ್ತಾರೆ. ನಾವು ನುಡಿದಂತೆ ನಡೆಯುವ ಜನ. ನೀಡಿದ ಎಲ್ಲ ಗ್ಯಾರೆಂಟಿಗಳನ್ನು ಪೂರೈಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: ತಲೆಕೆಳಗಾದ ಬಿಜೆಪಿ ಅಭ್ಯರ್ಥಿ ಯತ್ನಾಳ್​ ಲೆಕ್ಕಾಚಾರ

ಪ್ರಧಾನಿ ಮೋದಿ ವಿರುದ್ಧ ಸಿದ್ಧರಾಮಯ್ಯ ವಾಗ್ದಾಳಿ

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರದಿಂದ ಗೊಂದಲ ಸೃಷ್ಟಿ ಮಾಡಿದೆ. SC, ST ಮೀಸಲಾತಿ ಹೆಚ್ಚಳದ ಬಗ್ಗೆ ಕೋರ್ಟ್​ಗೆ ಹೋದರೆ ತಡೆಯಾಜ್ಞೆ ಸಿಗುವಂತೆ ಮಾಡಿ ಬಿಜೆಪಿ ವಂಚಿಸಿದೆ. ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಿದ್ದು ನಾವು. 2016ರಲ್ಲಿ ಕಾಂಗ್ರೆಸ್​ ಸರ್ಕಾರ ಕಂದಾಯ ಗ್ರಾಮಗಳಾಗಿ ಮಾಡಿತ್ತು. ಈಗ ಮೋದಿ ಬಂದು ಹಕ್ಕುಪತ್ರ ನೀಡಿ ರಾಜಕೀಯ ಲಾಭ ಪಡೆದರು. ದೇಶದಲ್ಲಿ ಮೋದಿಯಂತೆ ಸುಳ್ಳು ಹೇಳುವವರು ಯಾರೂ ಇಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ಮಾಡಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಃಸಿದ್ಧ. ನಾವು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ 20 ಲಕ್ಷ ಮನೆ ನಿರ್ಮಾಣ ಮಾಡುತ್ತೇವೆ. ಬಡವರು ಅರ್ಜಿ ಸಲ್ಲಿಸಿದ ಕೂಡಲೇ ಮನೆ ಮಂಜೂರು ಮಾಡುತ್ತೇವೆ ಎಂದು ಸಿದ್ಧರಾಮಯ್ಯ ಭರವಸೆ ನೀಡಿದರು.

ಸಬಕಾ ಸಾಥ್ ಸಬಕಾ ವಿಕಾಸ ಬರೀ ಭಾಷಣ

ಅಚ್ಚೇ ದಿನ ಆಯೇಗಾ ಅಂತ್ತಾರೆ ಒಳ್ಳೆ ದಿನ ಬಂತಾ ಎಂದು ಪ್ರಶ್ನಿಸಿದರು. 224 ಕ್ಷೇತ್ರಗಳಲ್ಲಿ ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ. ಒಬ್ಬ ಕ್ರಿಶ್ಚನ್‌ಗೂ ಟಿಕೆಟ್ ಕೊಟ್ಟಿಲ್ಲ. ಸಬಕಾ ಸಾಥ್ ಸಬಕಾ ವಿಕಾಸ ಇದು ಭಾಷಣ ಮಾಡುವುದಕ್ಕೆ ಮಾತ್ರನಾ ಎಂದರು. ಕ್ರಿಶ್ಚನ್ ಹಿಂದಿಳಿದವರನ್ನ ಹೊರಗಿಟ್ಟಿದ್ದೀರಾ ಇದೇನಾ ಸಬಕಾ ಸಾಥ್ ಸಬಕಾ ವಿಕಾಸ್. ಕೈ ಮುಗಿದು ಕೇಳುತ್ತೇನೆ ನರೇಂದ್ರ ಮೋದಿ ಮಾತು ನಂಬಬೇಡಿ ಎಂದು ಹೇಳಿದರು.

ಇದನ್ನೂ ಓದಿ: ಟಗರು ವಿರುದ್ಧ ರಾಜಹುಲಿ ಘರ್ಜನೆ: ವರುಣಾದಲ್ಲಿ ಸಿದ್ದರಾಮಯ್ಯ ಸೋಲಿಸುವ ಜವಾಬ್ದಾರಿ ನನ್ನದು ಎಂದ ಬಿಎಸ್ ಯಡಿಯೂರಪ್ಪ

ಮಿಸ್ಟರ್ ಬೊಮ್ಮಾಯಿ‌ ಇದಕ್ಕಿಂತ ಸಾಕ್ಷಿ ಬೇಕಾ?

ಬಸವರಾಜ ಬೊಮ್ಮಾಯಿ 40 ಪರ್ಸೆಂಟ್ ಬಗ್ಗೆ ಮಾತನಾಡಿದ್ದಾಗ ದಾಖಲೆ ಕೊಡಿ ಎಂದರು. ಬಿಜೆಪಿ ಕಾರ್ಯಕರ್ತನೆ ಆದ ಸಂತೋಷ ಎಂಬ ಸಣ್ಣ ಗುತ್ತಿಗೆದಾರ ಇದ್ದ. ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಗುತ್ತಿಗೆ ಕೆಲಸ ಮಾಡಿದ್ದ. ಗ್ರಾಮೀಣ ಅಭಿವೃದ್ಧಿ ಇಲಾಖೆಯಲ್ಲಿ ಈಶ್ವರಪ್ಪನಂಥ ಪೆದ್ದ ಮಂತ್ರಿ ಇದ್ದ. 40% ಕಮೀಷನ್ ಕೇಳಿದ್ರು ಸಣ್ಣ ಕಂಟ್ರ್ಯಾಕ್ಟರ್ ಹಣ ಕೊಡಲಿಕ್ಕಾಗಲಿಲ್ಲ.

ಸಂತೋಷ ಪಾಟೀಲ್ ಸಾವಿಗೆ ಈಶ್ವರಪ್ಪ ನೇರ ಕಾರಣ. ನಾವು ಈಶ್ವರಪ್ಪ ರಾಜೀನಾಮೆ ಕೊಡಬೇಕು ಎಂದಾಗ ರಾಜೀನಾಮೆ‌ಕೊಡಲಿಲ್ಲ. ರಾತ್ರಿ ಹಗಲು ಧರಣಿ ಮಾಡಿದ್ವಿ ಈಶ್ವರಪ್ಪ ರಾಜೀನಾಮೆ‌ ಕೊಟ್ಟರು. ಮಿಸ್ಟರ್ ಬೊಮ್ಮಾಯಿ‌ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್