ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಕಾಂಗ್ರೆಸ್ ನಾಯಕರ ನಿಯೋಗ

|

Updated on: May 18, 2023 | 10:07 PM

ರಾಜ್ಯಪಾಲರನ್ನು ಭೇಟಿಯಾದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಕಾಂಗ್ರೆಸ್ ನಾಯಕರ ನಿಯೋಗ
ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ
Follow us on

ಬೆಂಗಳೂರು: ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಭೇಟಿಯಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ನೇತೃತ್ವದ ನಿಯೋಗವು ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್​, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಇದ್ದರು.

ಇದಕ್ಕೂ ಮುನ್ನ, ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಲ್​ಪಿ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ನಿರ್ಣಯ ಮಂಡನೆ ಮಾಡಿದರು. ಈ ನಿರ್ಣಯಕ್ಕೆ ಶಾಸಕರೆಲ್ಲರೂ ಅನುಮೋದಿಸಿದ್ದಾರೆ. ಬಳಿಕ ಸಿದ್ದರಾಮಯ್ಯ ಅವರಿಗೆ ನಾಯಕರು ಹೂಗುಚ್ಛ ನೀಡಿ ಅಭಿನಂದಿಸಿದರು.

ಇದನ್ನೂ ಓದಿ: CLP Meeting: ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ ಇದೀಗ ಅಧಿಕೃತ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿಕೆ ಶಿವಕುಮಾರ್ ಅವರ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಇದಕ್ಕಾಗಿ ಬೆಂಗಳೂರು ನಗರದಲ್ಲಿರುವ ಕಂಠೀರವಣ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಕರ್ನಾಟಕದ ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ನಾಯಕರಿಗೆ ಆಹ್ವಾನ ನೀಡಲಾಗಿದೆ.

ಪದಗ್ರಹಣ ಸಮಾರಂಭಕ್ಕೆ ಒಟ್ಟು 8 ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ. ಪಶ್ಚಿಮಬಂಗಾಳ ಸಿಎಂ ಮಮತಾ, ರಾಜಸ್ಥಾನ ಸಿಎಂ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಹಿಮಾಚಲಪ್ರದೇಶದ ಸಿಎಂ ಸುಖ್‌ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಆಗಮಿಸಲಿದ್ದಾರೆ.

28 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಮುಖ್ಯಮಂತ್ರಿ ಹಾಗೂ ಡಿಸಿಎಂ ಪದಗ್ರಹಣದ ನಂತರ 28 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಕಂಠೀರವ ಸ್ಟೇಡಿಯಂನಲ್ಲಿ ನಡೆಯುವ ಪದಗ್ರಹಣ ಕಾರ್ಯಕ್ರಮದ ನಂತರ ಸಮಾವೇಶದ ಮಾದರಿಯಲ್ಲಿ ಕಾರ್ಯಕ್ರಮ ಮಾಡಲು ಪ್ಲ್ಯಾನ್ ಮಾಡಲಾಗುತ್ತಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ತೆರಳಿದ ಬಳಿಕ ಸಮಾವೇಶ ನಡೆಸುವ ಉದ್ದೇಶವನ್ನು ಪಕ್ಷದ ನಾಯಕರು ಹೊಂದಿದ್ದಾರೆ. ಆದರೆ ಎಷ್ಟು ಮಂದಿ ಸಚಿವರು ಪದಗ್ರಹಣ ಎಂಬುದು ನಾಳೆ ತೀರ್ಮಾನವಾಗಲಿದೆ. ಸಂಭಾವ್ಯ ಸಚಿವರ ಪಟ್ಟಿ ಜೊತೆ ನಾಳೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದು, ಅಲ್ಲಿ ಅಂತಿಮಗೊಳ್ಳಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Thu, 18 May 23