AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ಧತೆ: ಎರಡು ಕಡೆ ಪ್ರಮಾಣವಚನಕ್ಕೆ ಪ್ಲ್ಯಾನ್, ಹಾಗಾದ್ರೆ ಸಿಎಂ ಯಾರು?

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ನಡುವೆ ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮತ್ತೊಂದೆಡೆ ಇತ್ತ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಪ್ರಮಾಣಚವಚನ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ.

ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ಧತೆ: ಎರಡು ಕಡೆ ಪ್ರಮಾಣವಚನಕ್ಕೆ ಪ್ಲ್ಯಾನ್, ಹಾಗಾದ್ರೆ ಸಿಎಂ ಯಾರು?
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on:May 17, 2023 | 11:31 AM

Share

ಬೆಂಗಳೂರು: ಈ ಬಾರಿ ಕಾಂಗ್ರೆಸ್​ ಕರ್ನಾಟಕದಲ್ಲಿ (Karnataka Congress) 135 ವಿಧಾನಸಭೆ ಸೀಟು ಗೆಲ್ಲುವ ಮೂಲಕ ಮ್ಯಾಜಿಕ್‌ ನಂಬರ್‌ ದಾಟಿ ಬಹುಮತ ಪಡೆದುಕೊಂಡಿದೆ. ಆದರೆ, ಫಲಿತಾಂಶ ಪ್ರಕಟಗೊಂಡು ಮೂರು ದಿನಗಳು ಕಳೆದರೂ ಸಿಎಂ ಯಾರು ಎನ್ನುವುದು ಮಾತ್ರ ಇನ್ನೂ ಘೋಷಣೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸಿದ್ದಾರೆ. ಇದರ ಮಧ್ಯೆ ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಮಾಣ ವಚನ ಕಾರ್ಯಕ್ರಮವನ್ನು ವಿಧಾನಸೌಧ ಮುಂಭಾಗ ಹಾಗೂ ಕಠೀರವ ಸ್ಟೇಡಿಯಂನಲ್ಲಿ ಆಯೋಜಿಸಲು ಚಿಂತನೆಗಳು ನಡೆದಿವೆ.

ಇದನ್ನೂ ಓದಿ: Karnataka CM Race: ತಾರಕಕ್ಕೇರಿದ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬೆಂಬಲಿಗರ ಜಟಾಪಟಿ, ಮುಸಿಮುಸಿ ನಗುತ್ತಿರುವ ಬಿಜೆಪಿ ಕಾರ್ಯಕರ್ತರು

ಹೌದು…ಇನ್ನೂ ಅಧಿಕೃತವಾಗಿ ಸಿಎಂ ಯಾರು ಎನ್ನುವುದೇ ಘೋಷಣೆ ಮಾಡಿಲ್ಲ. ಆಗಲೇ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ತಯಾರಿಗಳು ಆರಂಭವಾಗಿವೆ. ಹಲವು ವರ್ಷಗಳ ಬಳಿಕ ಕಾಂಗ್ರೆಸ್​ಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸೀಟು ಬಂದಿವೆ. ಹೀಗಾಗಿ ಸಿಎಂ ಪ್ರಮಾಣವಚನ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಹೀಗಾಗಿ ವಿಧಾನಸೌಧ ಮುಂಭಾಗ ಅಥವಾ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮಾಡಲು ಚಿಂತನೆಗಳು ನಡೆದಿವೆ.

ನಾಳೆ(ಮೇ 18) ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆದಿದೆ. ಒಂದು ವೇಳೆ ನಾಳೆ ತಪ್ಪಿದರೆ ಶನಿವಾರ ಅಂದರೆ ಮೇ 20ರಂದು ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆ ನಡೆದಿದೆ. ಶುಕ್ರವಾರ(ಮೇ 19) ಅಮಾವಾಸ್ಯೆ ಇರುವ ಹಿನ್ನಲೆ ಪ್ರಮಾಣ ವಚನ ಬೇಡ ಎಂಬ ಬಗ್ಗೆ ಕೆಲವರ‌ ಸಲಹೆ ನೀಡಿದ್ದಾರೆ. ಹೀಗಾಗಿ ಮೇ 18 ಇಲ್ಲ ಮೇ 20ರಂದು ಪ್ರಮಾಣ ವಚನ ಸ್ವೀಕಾರವಾಗಲಿದೆ ಎಂದು ಹೇಳಿದ್ದಾರೆ. ಹೀಗಾಗಿ ಬಹುತೇಕ ನಾಳೆಯೇ ಪ್ರಮಾಣವಚನ ಕಾರ್ಯಕ್ರಮ ನಡೆಯುಸ ಸಾಧ್ಯತೆಗಳು ಹೆಚ್ಚಿವೆ.

ನಾಳೆಯೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸಾಧ್ಯತೆ

ಇದೀಗ ಬಂದ ಸುದ್ದಿ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಹುತೇಕ ಪಕ್ಕಾ ಎನ್ನಲಾಗುತ್ತಿದ್ದು, ರಾಹುಲ್ ಗಾಂಧಿ ಸಭೆ ಬಳಿಕ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಒಮದು ವೇಳೆ ಅದು ಹಾಗೇ ಆದರೆ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ನಾಳೆ(ಮೇ 18) ಮಧ್ಯಾಹ್ನ 3:30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ. ಆದ್ರೆ, ವಿಧಾನಸೌಧ ಬಳಿ

ಇನ್ನು ಅಧಿಕೃತವಾಗಿ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಘೋಷಣೆಯಾದರೆ ಅವರ ನಿವಾಸದ ಬಳಿ ಅಭಿಮಾನಿಗಳು ನಬರುವ ಮುನ್ಸೂಚನೆ ಹಿನ್ನಲೆ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಶಿವಾನಂದ ಸರ್ಕಲ್ ಸಮೀಪ ಇರುವ ಸಿದ್ದರಾಮಯ್ಯನವರ ಸರ್ಕಾರಿ ನಿವಾಸದ ಬಳಿ ಒಂದು ಕೆಎಸ್ಆರ್ ಪಿ ವ್ಯಾನ್, 70ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಡಿಕೆ ಶಿವಕುಮಾರ್​ಗೆ ಉಪಮುಖ್ಯಮಂತ್ರಿ ಪಟ್ಟ?

ಇನ್ನು ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಸಿದ ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಜೊತೆ ಎರಡು ಪ್ರಮುಖ ಖಾತೆಗಳನ್ನು ನೀಡಲಾಗುತ್ತದೆ. ಇನ್ನು ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ ಎನ್ನಲಾಗಿದ್ದು, ನಾಳೆಯೇ ಸಿದ್ದರಾಮಯ್ಯನವರ ಜೊತೆಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ ಸಚಿವ ಸಂಪುಟ ರಚನೆ ಮಾಡಲಾಗಿ್ತತೆ ಎನ್ನುವ ಮಾಹಿತಿ ಲಭ್ಯವಾಗಿದೆ.

Published On - 11:30 am, Wed, 17 May 23

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್