ಬೆಂಗಳೂರು: ಈ ಬಾರಿ ಕಾಂಗ್ರೆಸ್ ಕರ್ನಾಟಕದಲ್ಲಿ (Karnataka Congress) 135 ವಿಧಾನಸಭೆ ಸೀಟು ಗೆಲ್ಲುವ ಮೂಲಕ ಮ್ಯಾಜಿಕ್ ನಂಬರ್ ದಾಟಿ ಬಹುಮತ ಪಡೆದುಕೊಂಡಿದೆ. ಆದರೆ, ಫಲಿತಾಂಶ ಪ್ರಕಟಗೊಂಡು ಮೂರು ದಿನಗಳು ಕಳೆದರೂ ಸಿಎಂ ಯಾರು ಎನ್ನುವುದು ಮಾತ್ರ ಇನ್ನೂ ಘೋಷಣೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸಿದ್ದಾರೆ. ಇದರ ಮಧ್ಯೆ ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಮಾಣ ವಚನ ಕಾರ್ಯಕ್ರಮವನ್ನು ವಿಧಾನಸೌಧ ಮುಂಭಾಗ ಹಾಗೂ ಕಠೀರವ ಸ್ಟೇಡಿಯಂನಲ್ಲಿ ಆಯೋಜಿಸಲು ಚಿಂತನೆಗಳು ನಡೆದಿವೆ.
ಹೌದು…ಇನ್ನೂ ಅಧಿಕೃತವಾಗಿ ಸಿಎಂ ಯಾರು ಎನ್ನುವುದೇ ಘೋಷಣೆ ಮಾಡಿಲ್ಲ. ಆಗಲೇ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ತಯಾರಿಗಳು ಆರಂಭವಾಗಿವೆ. ಹಲವು ವರ್ಷಗಳ ಬಳಿಕ ಕಾಂಗ್ರೆಸ್ಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸೀಟು ಬಂದಿವೆ. ಹೀಗಾಗಿ ಸಿಎಂ ಪ್ರಮಾಣವಚನ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಹೀಗಾಗಿ ವಿಧಾನಸೌಧ ಮುಂಭಾಗ ಅಥವಾ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮಾಡಲು ಚಿಂತನೆಗಳು ನಡೆದಿವೆ.
ನಾಳೆ(ಮೇ 18) ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆದಿದೆ. ಒಂದು ವೇಳೆ ನಾಳೆ ತಪ್ಪಿದರೆ ಶನಿವಾರ ಅಂದರೆ ಮೇ 20ರಂದು ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆ ನಡೆದಿದೆ. ಶುಕ್ರವಾರ(ಮೇ 19) ಅಮಾವಾಸ್ಯೆ ಇರುವ ಹಿನ್ನಲೆ ಪ್ರಮಾಣ ವಚನ ಬೇಡ ಎಂಬ ಬಗ್ಗೆ ಕೆಲವರ ಸಲಹೆ ನೀಡಿದ್ದಾರೆ. ಹೀಗಾಗಿ ಮೇ 18 ಇಲ್ಲ ಮೇ 20ರಂದು ಪ್ರಮಾಣ ವಚನ ಸ್ವೀಕಾರವಾಗಲಿದೆ ಎಂದು ಹೇಳಿದ್ದಾರೆ. ಹೀಗಾಗಿ ಬಹುತೇಕ ನಾಳೆಯೇ ಪ್ರಮಾಣವಚನ ಕಾರ್ಯಕ್ರಮ ನಡೆಯುಸ ಸಾಧ್ಯತೆಗಳು ಹೆಚ್ಚಿವೆ.
ಇದೀಗ ಬಂದ ಸುದ್ದಿ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಹುತೇಕ ಪಕ್ಕಾ ಎನ್ನಲಾಗುತ್ತಿದ್ದು, ರಾಹುಲ್ ಗಾಂಧಿ ಸಭೆ ಬಳಿಕ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಒಮದು ವೇಳೆ ಅದು ಹಾಗೇ ಆದರೆ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ನಾಳೆ(ಮೇ 18) ಮಧ್ಯಾಹ್ನ 3:30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ. ಆದ್ರೆ, ವಿಧಾನಸೌಧ ಬಳಿ
ಇನ್ನು ಅಧಿಕೃತವಾಗಿ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಘೋಷಣೆಯಾದರೆ ಅವರ ನಿವಾಸದ ಬಳಿ ಅಭಿಮಾನಿಗಳು ನಬರುವ ಮುನ್ಸೂಚನೆ ಹಿನ್ನಲೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಶಿವಾನಂದ ಸರ್ಕಲ್ ಸಮೀಪ ಇರುವ ಸಿದ್ದರಾಮಯ್ಯನವರ ಸರ್ಕಾರಿ ನಿವಾಸದ ಬಳಿ ಒಂದು ಕೆಎಸ್ಆರ್ ಪಿ ವ್ಯಾನ್, 70ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇನ್ನು ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಸಿದ ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಜೊತೆ ಎರಡು ಪ್ರಮುಖ ಖಾತೆಗಳನ್ನು ನೀಡಲಾಗುತ್ತದೆ. ಇನ್ನು ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ ಎನ್ನಲಾಗಿದ್ದು, ನಾಳೆಯೇ ಸಿದ್ದರಾಮಯ್ಯನವರ ಜೊತೆಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ ಸಚಿವ ಸಂಪುಟ ರಚನೆ ಮಾಡಲಾಗಿ್ತತೆ ಎನ್ನುವ ಮಾಹಿತಿ ಲಭ್ಯವಾಗಿದೆ.
Published On - 11:30 am, Wed, 17 May 23