AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಯಾವನೋ ನಮಗೆ ಮುಖ್ಯ ಅಲ್ಲ, ಜಿಟಿ ದೇವೇಗೌಡ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಜಿ.ಟಿ.ದೇವೇಗೌಡ ನಮಗೆ ಮುಖ್ಯ ಅಲ್ಲ. ನನ್ನ ಮೇಲೆ ಗೌರವ ಇದ್ದರೆ ಜಿಟಿಡಿಗೆ ಒಂದು ಮತ ಹಾಕಬೇಡಿ. ಈ ಬಾರಿ ಎಲ್ಲರೂ ಒಗ್ಗಟ್ಟಾಗಿ ಅವರನ್ನು ಸೋಲಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಗಂಗಾಧರ​ ಬ. ಸಾಬೋಜಿ
|

Updated on:Apr 13, 2023 | 4:21 PM

Share

ಮುಖ್ಯಾಂಶಗಳು

  • ಜಿ.ಟಿ.ದೇವೇಗೌಡ ನಮಗೆ ಮುಖ್ಯ ಅಲ್ಲ ಎಂದ ಸಿದ್ಧರಾಮಯ್ಯ
  • ಇದು ನನ್ನ ಕೊನೆ ಚುನಾವಣೆ ಎಂದ ಸಿದ್ಧರಾಮಯ್ಯ
  • ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ, ಜೆಡಿಎಸ್ ಟಾರ್ಗೆಟ್​

ಮೈಸೂರು: ಜಿ.ಟಿ.ದೇವೇಗೌಡ (GT Devegowda) ನಮಗೆ ಮುಖ್ಯ ಅಲ್ಲ. ನನ್ನ ಮೇಲೆ ಗೌರವ ಇದ್ದರೆ ಜಿಟಿಡಿಗೆ ಒಂದು ಮತ ಹಾಕಬೇಡಿ. ಈ ಬಾರಿ ಎಲ್ಲರೂ ಒಗ್ಗಟ್ಟಾಗಿ ಅವರನ್ನು ಸೋಲಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ನನಗೆ ರಾಜಕೀಯವಾಗಿ ಜನ್ಮ ನೀಡಿದ್ದು ಚಾಮುಂಡೇಶ್ವರಿ ಕ್ಷೇತ್ರ. ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಜನರು ಸೋಲಿಸಿದರು. ಇಂದಿನಿಂದ ನಾವೆಲ್ಲಾ ಒಂದೇ ತಾಯಿ ಮಕ್ಕಳು ಎಂದರು. ಬಿಜೆಪಿಯವರ ಮನೆ ಹಾಳಾಗ ಒಂದು ಮನೆ ಸಹ ಕೊಡಲಿಲ್ಲ. ಜೆಡಿಎಸ್, ಬಿಜೆಪಿ ಯಾರೇ ಬಂದರೂ ಭ್ರಷ್ಟಾಚಾರ ನಿಲ್ಲುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಮಾತ್ರ ಭ್ರಷ್ಟಾಚಾರ ನಿಯಂತ್ರಣವಾಗುತ್ತದೆ. ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್ ಗೆಲ್ಲಬೇಕೆಂದು ನನಗೆ ಆಸೆ ಇದೆ ಎಂದು ಹೇಳಿದರು.

ಯಾರೇ ನಿಂತರೂ ವರುಣ ಜನರ ತೀರ್ಪು ಅಂತಿಮ

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಮಾಹಿತಿ ನೀಡಿದ ಸಿದ್ಧರಾಮಯ್ಯ ಗ್ಯಾರಂಟಿ ಕಾರ್ಡ್ ಭರವಸೆ ಈಡೇರಿಸದೇ ಇದ್ದರೆ, ರಾಜ್ಯದ ಜನರ ಕ್ಷಮೆ ಕೋರಿ ಸರ್ಕಾರ ವಿಸರ್ಜನೆ ಮಾಡುತ್ತೇವೆ. ನನಗೆ ಒಂದೇ ಒಂದು ಆಸೆ ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕು. ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ. ನನಗೆ ವರುಣದಿಂದ ಟಿಕೆಟ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಇದ್ದವನನ್ನು ತಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ಅವನು ಬೇಡ ಬೇಡ ಅಂದರು ತಂದು ನಿಲ್ಲಿಸಿದ್ದಾರೆ. ಪಾಪ ಯಾರಾದರೂ ಬರಲಿ ವರುಣ ಜನ ತಾನೇ ಆಶೀರ್ವಾದ ಮಾಡೋದು. ನೂರಕ್ಕೆ ನೂರು ವರುಣ ಜನ ಆಶೀರ್ವಾದ ಮಾಡುತ್ತಾರೆ. ಇದು ನನ್ನ ಅಂತಿಮ ಚುನಾವಣೆ ಎಂದರು.

ಇದನ್ನೂ ಓದಿ: ಹಾಸನ ಜೆಡಿಎಸ್ ಟಿಕೆಟ್ ತಿಕ್ಕಾಟಕ್ಕೆ ಹೊಸ ಸೂತ್ರ: ಭವಾನಿ ರೇವಣ್ಣಗೆ ಬೇರೆ ಕ್ಷೇತ್ರದ ಟಿಕೆಟ್​ ನೀಡುವ ಬಗ್ಗೆ ಚರ್ಚೆ

ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ, ಜೆಡಿಎಸ್ ಟಾರ್ಗೆಟ್​

ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ, ಜೆಡಿಎಸ್ ಟಾರ್ಗೆಟ್​ ಮಾಡಿದೆ.​ ರಾಜ್ಯದ ಜನರ ಆಶೀರ್ವಾದ ಇರುವವರೆಗೂ ನನ್ನ ಮುಗಿಸಲು ಅಸಾಧ್ಯ. ಪಕ್ಷದಲ್ಲಿ ಗುಂಪುಗಾರಿಕೆ ಇದೆ, ಅದೆಲ್ಲವೂ ಮರೆತು ಕೆಲಸ ಮಾಡಬೇಕು. ಸಿದ್ದರಾಮಯ್ಯ ನೋಡಿ ನೀವೆಲ್ಲ ಕೆಲಸ ಮಾಡಿ ಪಕ್ಷ ಗೆಲ್ಲಿಸಬೇಕು. ರಾಜ್ಯದಲ್ಲಿ 200 ಪರ್ಸೆಂಟ್​​​ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ. ರಾಜ್ಯವನ್ನು ಬಿಜೆಪಿ ಸರ್ಕಾರ ಸಂಪೂರ್ಣ ಹಾಳುಮಾಡಿದೆ. ಕರ್ನಾಟಕದ ಅಭಿವೃದ್ಧಿಯನ್ನು ಬಿಜೆಪಿ ಸರ್ಕಾರ ಕಡೆಗಣಿಸಿದೆ. ರಾಜ್ಯದಲ್ಲಿ 40 ಪರ್ಸೆಂಟ್​ ಕಮಿಷನ್ ಸರ್ಕಾರ ಇದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಬಹುಮತದ ಸರ್ಕಾರ ಬರಬೇಕು, ಹಿಂದೂ ಧರ್ಮ ಉಳಿಯಬೇಕು: ಕಟೀಲು ದೇವಸ್ಥಾನದ ಅರ್ಚಕರ ಮಾತಿಗೆ ಮುಗುಳ್ನಕ್ಕ ಸಿಎಂ ಬೊಮ್ಮಾಯಿ

ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡಿದ ಸಿದ್ದರಾಮಯ್ಯ, ಹೆಚ್​ಡಿಕೆ ಎಷ್ಟೇ ಪಂಚರತ್ನ ಯಾತ್ರೆ ಮಾಡಿದರೂ ಅಧಿಕಾರಕ್ಕೆ ಬರಲ್ಲ. ಹೆಚ್​ಡಿಕೆ ಅವಕಾಶವಾದಿ ರಾಜಕಾರಣ ಮಾಡುತ್ತಾರೆ. ಜೆಡಿಎಸ್​​ ಸ್ವಂತಶಕ್ತಿಯಿಂದ ಅಧಿಕಾರಕ್ಕೆ ಬರುವುದಿಲ್ಲ. ಜೆಡಿಎಸ್​ನವರಿಗೆ ಬಿಜೆಪಿ, ಕಾಂಗ್ರೆಸ್​​ಗೆ ಸಿಗಬಾರದು ಅನ್ನೋ ಉದ್ದೇಶವಿದೆ. ಅತಂತ್ರ ಬಂದರೆ ತಮ್ಮ ಬೇಳೆ ಬೇಯಿಸುಕೊಳ್ಳುವ ಕೆಲಸ ಮಾಡುತ್ತೆ. ಅಮೆರಿಕಕ್ಕೆ ಹೋಗಬೇಡ ಎಂದು ಹೆಚ್​ಡಿಕೆಗೆ ಹೇಳಿದರೂ ಕೇಳಲಿಲ್ಲ. 1 ವರ್ಷ 2 ತಿಂಗಳಿಗೆ ಸಿಎಂ ಸ್ಥಾನ ಕಳೆದುಕೊಂಡರು ಎಂದು ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:20 pm, Thu, 13 April 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!