AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ಮಿಸ್: ಹೇಳದೆ ಕೇಳದೆ ಹೈಕಮಾಂಡ್ ಪಟ್ಟಿ ಬಿಡುಗಡೆ ಮಾಡಿದೆ: ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್

ಎರಡನೇ ಕ್ಷೇತ್ರವಾಗಿ ಕೋಲಾರದ ಮೇಲೆ ಕಣ್ಣಿಟ್ಟಿದ್ದ ಸಿದ್ದರಾಮಯ್ಯಗೆ ಟಿಕೆಟ್ ಮಿಸ್ ಆಗಿದ್ದು, ತಾಲೂಕಿನಲ್ಲಿ ಕೊತ್ತೂರು ಮಂಜುನಾಥ್​ಗೆ ಹೈಕಮಾಂಡ್ ಮಣೆಹಾಕಿದೆ. ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ಮಿಸ್: ಹೇಳದೆ ಕೇಳದೆ ಹೈಕಮಾಂಡ್ ಪಟ್ಟಿ ಬಿಡುಗಡೆ ಮಾಡಿದೆ: ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್
ಕೊತ್ತೂರು ಮಂಜುನಾಥ್ ಮತ್ತು ಸಿದ್ದರಾಮಯ್ಯ
Rakesh Nayak Manchi
|

Updated on: Apr 15, 2023 | 5:19 PM

Share

ಕೋಲಾರ: ಪ್ರಸಕ್ತ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ವರುಣಾ ಕ್ಷೇತ್ರದ ಟಿಕೆಟ್ ಘೋಷಣೆಯಾಗಿದ್ದರೂ ಎರಡನೇ ಕ್ಷೇತ್ರವಾಗಿ ಕೋಲಾರದ ಮೇಲೆ ಕಣ್ಣಿಟ್ಟಿದ್ದ ಸಿದ್ದರಾಮಯ್ಯ (Siddaramaiah) ಬದಲಾಗಿ ಕ್ಷೇತ್ರದಲ್ಲಿ ಕೊತ್ತೂರು ಮಂಜುನಾಥ್​ಗೆ (Kothur Manjunath) ಮಣೆ ಹಾಕಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್, ಸಿದ್ದರಾಮಯ್ಯ ಅವರೇ ಕೋಲಾರಕ್ಕೆ ಬರಬೇಕು ಅನ್ನೋದೆ ನನ್ನ ವಾದ. ಅವರೇ ಕೋಲಾರದ (Kolar) ಅಭ್ಯರ್ಥಿಯಾಗಬೇಕು. ಪಕ್ಷ ಹಾಗೂ ಹೈಕಮಾಂಡ್ ಹೇಳದೆ ಕೇಳದೆ ಪಟ್ಟಿ ಬಿಡುಗಡೆ ಮಾಡಿದೆ ಎಂದರು.

ಜಿಲ್ಲೆಯ ಎಲ್ಲಾ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡಬೇಕಿತ್ತು. ಈಗಲೂ ಹೈಕಮಾಂಡ್​ಗೆ ಕೇಳಿಕೊಳ್ಳುವುದು ಇಷ್ಟೆ ಸಿದ್ದರಾಮಯ್ಯ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಿ. ಒಂದು ವೇಳೆ ಹೈಕಮಾಂಡ್ ನೀನೆ ಹೋಗಿ ಪ್ರಚಾರ ಮಾಡು ಅಂದರೆ ಜಿಲ್ಲೆಯ ಎಲ್ಲಾ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಿದೆ. ಕಾಂಗ್ರೇಸ್ ಪಕ್ಷಕ್ಕೆ ಶಕ್ತಿ ಇದೆ ಹಾಗಾಗಿ ಇಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೋಲಾರ ಟಿಕೆಟ್​ ಸಿದ್ದರಾಮಯ್ಯ ಬಿಟ್ಟು ಬೇರೆಯವರ ಪಾಲಾಗುತ್ತಿದ್ದಂತೆಯೇ ಭುಗಿಲೆದ್ದ ಆಕ್ರೋಶ

ಕಾಂಗ್ರೇಸ್ ಪಕ್ಷ ಒಳ್ಳೆಯ ಅಭ್ಯರ್ಥಿಯನ್ನ ಬಿಟ್ಟು ಕೊಡಲ್ಲ ಅನ್ನೋ ನಂಬಿಕೆ ಬಂದಿದೆ. ಆದರೂ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಬರಬೇಕು ಅನ್ನೋದು ನನ್ನ ಅಭಿಪ್ರಾಯ. ಎಲ್ಲರನ್ನ ಕರೆದು ವಿಶ್ವಾಸಕ್ಕೆ ಪಡೆದು ಸ್ಪರ್ಧೆಗೆ ಸೂಚಿಸಿದರೆ ನಾನು ಒಪ್ಪುತ್ತೇನೆ. ನನ್ನ ಬಳಿ ಯಾರೂ ಸಹ ಯಾವದೇ ಮಾತುಕತೆ ಮಾಡಿಲ್ಲ, ಆದರೂ ನನ್ನ ಹೆಸರು ಘೋಷಣೆ ಮಾಡಿದೆ. ನಾನು ಸಹ ತಯಾರಿಯಲ್ಲಿದ್ದೇನೆ, ಆದರೂ ನನಗೂ ಗೊಂದಲ ಇದೆ. ಕೋಲಾರದ ಸ್ಥಳೀಯ ಹೈ ಕಮಾಂಡ್ ಹೇಳಿದರೆ ನಾನು ಸ್ಪರ್ಧೆ ಮಾಡುತ್ತೇನೆ. ರಮೇಶ್ ಕುಮಾರ್, ಶ್ರೀನಿವಾಸಗೌಡ, ಅನಿಲ್ ಕುಮಾರ್ ಒಪ್ಪಿಕೊಳ್ಳಬೇಕು ಎಂದರು.

ನನ್ನ ಮುಳಬಾಗಲು ಕ್ಷೇತ್ರಕ್ಕೂ ಇನ್ನೂ ಅಭ್ಯರ್ಥಿ ಮಾಡಿಲ್ಲ. ಮುಳಬಾಗಲು ಕ್ಷೇತ್ರಕ್ಕೆ ತಮ್ಮನ ಹೆಂಡತಿ ಹೆಸರನ್ನ ನಾನು ಸೂಚಿಸಿದ್ದೇನೆ. – ಕೊತ್ತೂರು ಮಂಜುನಾಥ್, ಕೋಲಾರ ಕಾಂಗ್ರೆಸ್ ಅಭ್ಯರ್ಥಿ

ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ತಪ್ಪಿಸಿದ್ದು ಯಾರು?

ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಇದೀಗ 43 ಕ್ಷೇತ್ರಗಳಿಗೆ ಮೂರನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮುಖ್ಯವಾಗಿ ಸಿದ್ದರಾಮಯ್ಯ ಅವರಿಗೆ ಕೋಲಾರ ಟಿಕೆಟ್ ನೀಡಿಲ್ಲ. ಕೋಲಾರ ಟಿಕೆಟ್​ ಸಿದ್ದರಾಮಯ್ಯನವರನ್ನು ಬಿಟ್ಟು ಕೊತ್ತೂರು ಮಂಜುನಾಥ್​ಗೆ ಘೋಷಣೆಯಾಗಿದೆ. ಸಿದ್ದರಾಮಯ್ಯ ಅವರಿಗೆ ಕೋಲಾರದ ಟಿಕೆಟ್ ಕೂಡ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ ಕೊನೆಗೆ ಟಿಕೆಟ್ ಮಂಜುನಾಥ್ ಪಾಲಾಗಿದೆ. ಅಲ್ಲದೆ, ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ತಪ್ಪಿಸುವಲ್ಲಿ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಡಾ.ಜಿ.ಪರಮೇಶ್ವರ್​ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ  ಮಾಜಿ ಸಿಎಂ ಸಿದ್ದರಾಮಯ್ಯಗೆ ಟಿಕೆಟ್​ ನೀಡದಿದ್ದರೆ ಮುಸ್ಲಿಮರಿಗೆ ನೀಡುವಂತೆ ಮುಸ್ಲಿಂ ಮುಖಂಡರು ಒತ್ತಾಯಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?