ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮುಂದಾದ ಸಿದ್ದರಾಮಯ್ಯ, ವರುಣಾ ಜೊತೆ 2ನೇ ಕ್ಷೇತ್ರ ಯಾವುದು?

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ಚಿಂತನೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಹಾಗಾದ್ರೆ ವರುಣಾ ಜೊತೆಗೆ ಸಿದ್ದರಾಮಯ್ಯನವರ ಎರಡನೇ ಕ್ಷೇತ್ರ ಆಯ್ಕೆ ಯಾವುದು?

ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮುಂದಾದ ಸಿದ್ದರಾಮಯ್ಯ, ವರುಣಾ ಜೊತೆ 2ನೇ ಕ್ಷೇತ್ರ ಯಾವುದು?
ಸಿದ್ದರಾಮಯ್ಯ
Follow us
ರಮೇಶ್ ಬಿ. ಜವಳಗೇರಾ
|

Updated on: Mar 26, 2023 | 8:39 AM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Kaarnatak Assembly Elections 2023) ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಯಾವುದೇ ಕ್ಷಣದಲ್ಲಿಯಾದರೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​​ನ(C0ngress) ಅಭ್ಯರ್ಥಿಗಳ ಮೊದಲ ಲಿಸ್ಟ್ ಬಿಡುಗಡೆ ಆಗಿದೆ. ರಣರಂಗಕ್ಕೆ ಧುಮುಕಲು 124 ಕಾಂಗ್ರೆಸ್ ಅಭ್ಯರ್ಥಿಗಳ ಹೆಸರಿನ ಫೈನಲ್ ಲಿಸ್ಟ್ ಹೊರ ಬಂದಿದೆ. ವಿಶೇಷ ಅಂದರೆ ಕ್ಷೇತ್ರ ಗೊಂದಲದಲ್ಲಿದ್ದ ಸಿದ್ದರಾಮಯ್ಯ(Siddaramaiah) ಹೆಸರು ಮೊದಲನೇ ಲಿಸ್ಟ್​ನಲ್ಲಿ ಪ್ರಕಟವಾಗಿದೆ. ಸಿದ್ದರಾಮಯ್ಯಗೆ ವರುಣಾದಿಂದಲೇ ಟಿಕೆಟ್ ಅನೌನ್ಸ್ ಆಗಿದೆ. ಕೋಲಾರದಿಂದಲೇ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಬಹುತೇಕ ಅಂತಿಮವಾಗಿತ್ತಾದರೂ ಹೈಕಮಾಂಡ್‌ನ ಅಣತಿಯಂತೆ ಕೊನೆಯಲ್ಲಿ ಕೋಲಾರವನ್ನು ಸಿದ್ದರಾಮಯ್ಯ ಕೈಬಿಟ್ಟಿದ್ದಾರೆ. ಆದ್ರೆ, ಸಿದ್ದರಾಮಯ್ಯ ಈ ಬಾರಿಯೂ ಸಹ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮಾತುಗಳನ್ನಾಡುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ ಫಿಕ್ಸ್ ಆಗಿದೆ. ಹಾಗಾದ್ರೆ, ಸಿದ್ದರಾಮಯ್ಯ ಸ್ಪರ್ಧಿಸುವ ಎರಡನೇ ಕ್ಷೇತ್ರ ಯಾವುದು ಎನ್ನುವುದು ಮಾತ್ರ ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: Congress Candidates List: ಕಾಂಗ್ರೆಸ್ ಮೊದಲ ಪಟ್ಟಿ; 9 ಪ್ರಮುಖ ಅಂಶಗಳುವ ಇಲ್ಲಿವೆ ನೋಡಿ

ಹೌದು…ಕಳೆದ 2018ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಹಾಗೂ ಬಾದಾಮಿಯಿಂದ ಸ್ಪರ್ಧೆ ಮಾಡಿದ್ದರು. ಆದ್ರೆ, ಚಾಮುಂಡೇಶ್ವರಿ ಸೋಲು ಕಂಡಿದ್ದರೆ, ಬಾದಾಮಿಯಲ್ಲಿ ಅಲ್ಪಮತಗಳಿಂದ ಗೆಲುವು ಸಾಧಿಸಿದ್ದರು. ಈ ಬಾರಿಯೂ ಸಹ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆ. ಇದು ಸಿದ್ದರಾಮಯ್ಯನವರಿಗೆ ಕೊನೆ ಚುನಾವಣೆ ಆಗಿದ್ದರಿಂದ ಇದೊಂದು ಬಾರಿ ಮುಖ್ಯಮಂತ್ರಿ ಆಗಲೇಬೇಕೆಂದು ಕಸರತ್ತು ನಡೆಸಿದ್ದಾರೆ. ಇದರ ಜೊತೆಗೆ ತಮ್ಮ ಪುತ್ರ ಯತೀಂದ್ರ ಅವರನ್ನು ಸಹ ರಾಜಕೀಯದಲ್ಲಿ ಬೆಳೆಸಲು ಆಲೋಚನೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ವರುಣಾ ಜೊತೆಗೆ ಕೋಲಾರ ಇಲ್ಲ ಬಾದಾಮಿಯಲ್ಲಿ ಕಣಕ್ಕಳಿಯುವ ತಂತ್ರ ರೂಪಿಸುತ್ತಿದ್ದಾರೆ. ಒಂದು ವೇಳೆ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಗೆದ್ದರೆ ವರುಣಾಗೆ ರಾಜೀನಾಮೆ ನೀಡಿ ಪುತ್ರನಿಗೆ ಅವಕಾಶ ಮಾಡಿಕೊಡುವ ಚಿಂತನೆಯಲ್ಲಿದ್ದಾರೆ. ಈ ಹಿನ್ನೆಲೆ ಮತ್ತೆ 2 ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಆಸಕ್ತಿ ತೋರಿಸಿದ್ದಾರೆ.

ಈಗಾಗಲೇ ತಮ್ಮ ಇಚ್ಛೆಯನ್ನು ಮಾಜಿ ಸಚಿವ ಕೆಜೆ ಜಾರ್ಜ್ ಮೂಲಕ ಹೈಕಮಾಂಡ್‌ ಮುಂದೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರವನ್ನು ಕೆಜೆ ಜಾರ್ಜ್ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಮುಂದಿಟ್ಟಿದ್ದಾರೆ. ಇಂಟ್ರೆಸ್ಟಿಂಗ್ ಅಂದ್ರೆ ಸಿದ್ದರಾಮಯ್ಯ ಕೋಲಾರ ಜಿಲ್ಲೆಯ 6 ಕ್ಷೇತ್ರದ ಪೈಕಿ ನಾಲ್ಕರಲ್ಲಿ ಟಿಕೆಟ್ ಘೋಷಣೆ ಮಾಡಿದ್ದು, ಕೋಲಾರ ವಿಧಾನಸಭಾ ಕ್ಷೇತ್ರದ ಟಿಕೆಟ್ ಇನ್ನೂ ಅನೌನ್ಸ್ ಆಗಿಲ್ಲ. ಇದರ ಜೊತೆಗೆ ಬಾದಾಮಿ ಕ್ಷೇತ್ರದ ಟಿಕೆಟ್ ಕೂಡಾ ಮೊದಲ ಲಿಸ್ಟ್​ನಲ್ಲಿ ಹೊರ ಬಂದಿಲ್ಲ. ಹೀಗಾಗಿ ಸಿದ್ದರಾಮಯ್ಯ ಎರಡನೇ ಆಯ್ಕೆಯಲ್ಲಿ ಕೋಲಾರ ಮತ್ತು ಬಾದಾಮಿ ಇದೆ. ಈ ಎರಡರಲ್ಲಿ ಯಾವ ಕ್ಷೇತ್ರ ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.

ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಇನ್ನು ಈ ಬಗ್ಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹೈಕಮಾಂಡ್ ಕೋಲಾರ ಬೇಡ ವರುಣಾದಲ್ಲಿ ಸ್ಪರ್ಧಿಸಿ ಎಂದು ಹೇಳಿತ್ತು. ಈ ಸಮಯದಲ್ಲಿ ಕೋಲಾರ ಕ್ಷೇತ್ರದಿಂದ ಹಿಂದೆ ಸರಿದರೆ ಕಾಂಗ್ರೆಸ್‌ಗೆ ಹಿನ್ನಡೆಯಾಗುತ್ತೆ ಎಂದು ನಾಯಕರು ಹೇಳಿದ್ದಾರೆ. ಇವತ್ತಿನ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಕೋಲಾರ ಬಿಡುವಂತಿಲ್ಲ. ಹೈಕಮಾಂಡ್ ಸೂಚನೆಯಂತೆ ವರುಣಾ ಕ್ಷೇತ್ರ ಬಿಡಲೂ ಆಗಲ್ಲ. ಹೀಗಾಗಿ ಸಿದ್ದರಾಮಯ್ಯ ಅವರು ಕೋಲಾರ – ವರುಣಾ ಎರಡೂ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ಭವಿಷ್ಯ ನುಡಿದಿದ್ದ ಮನೆ ದೇವರು!

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿಯಲ್ಲಿರುವ ಚಿಕ್ಕಮ್ಮ ತಾಯಿ ಸಿದ್ದರಾಮಯ್ಯನವರ ಮನೆ ದೇವರಾಗಿದ್ದು, ಆ ದೇವರು ಈ ಹಿಂದೆಯೇ ಒಂದು ಕ್ಷೇತ್ರದಲ್ಲಿ ನಿಂತರೆ ಕಷ್ಟ ಎಂದು ಭವಿಷ್ಯ ನುಡಿದಿತ್ತು. ಒಂದೇ ಕಡೆ ನಿಂತರೆ ಗೆಲುವು ಕಷ್ಟ, ಪ್ರಬಲ ಶಕ್ತಿಗಳ ವಿರೋಧವಿದೆ. ಎರಡು ಕಡೆ ಬಾಹುಬಲ ಚಾಚಬೇಕು ಎರಡು ಭುಜಬಲದಲ್ಲಿ ನಿಲ್ಲಬೇಕು, ಒಂದೇ ಕಡೆ ನಿಂತರೆ ರಾಜಕೀಯ ಭವಿಷ್ಯಕ್ಕೆ ಕುತ್ತು ಎಂದು ಹೇಳಿತ್ತು. ಈಗ ಮನೆ ದೇವರ ಮಾತಿನಂತೆ ಸಿದ್ದರಾಮಯ್ಯ ದ್ವಿಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಆದ್ರೆ, ಹೈಕಮಾಂಡ್​ ಇದಕ್ಕೆ ಗ್ರೀನ್​ ಸಿಗ್ನಲ್​ ನೀಡುತ್ತಾ ಎನ್ನುವುದು ಕಾದುನೋಡಬೇಕಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ