ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ: ಸಿದ್ದರಾಮಯ್ಯಗೆ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ವರುಣಾ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಸಿದ್ದರಾಮನ ಹುಂಡಿ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಶ್ ಅವರ ಆರೋಗ್ಯವನ್ನು ಅಭ್ಯರ್ಥಿ ವಿ.ಸೋಮಣ್ಣ ಮತ್ತು ಸಂಸದ ಪ್ರತಾಪಸಿಂಹ ವಿಚಾರಿಸಿದ್ದಾರೆ.
ಮೈಸೂರು: ವರುಣಾ ವಿಧಾನಸಭಾಕ್ಷೇತ್ರ (Varuna Assembly Constituency) ವ್ಯಾಪ್ತಿಯ ಸಿದ್ದರಾಮನ ಹುಂಡಿ ಗ್ರಾಮದಲ್ಲಿ (Siddaramana hundi Village) ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಕಾರ್ಯಕರ್ತರ ನಡುವೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಗಲಾಟೆಯಲ್ಲಿ ಗಾಯಗೊಂಡು ಮೈಸೂರಿನ (Mysore) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತ ನಾಗೇಶ್ ಅವರ ಆರೋಗ್ಯವನ್ನು ಅಭ್ಯರ್ಥಿ ವಿ.ಸೋಮಣ್ಣ (V Somanna) ಮತ್ತು ಸಂಸದ ಪ್ರತಾಪ್ ಸಿಂಹ (Pratap Simha) ವಿಚಾರಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿ. ಸೋಮಣ್ಣ ಅವರು ವರುಣಾ ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರನ್ನು ಭಯಪಡಿಸುವ ಕೆಲಸ ಆಗುತ್ತಿದೆ ಎಂದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿ. ಸೋಮಣ್ಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ. ನನ್ನ ಕ್ಷೇತ್ರದಲ್ಲಿ ಎಲ್ಲಾ ಸಮುದಾಯಕ್ಕೆ ಕೊಡುಗೆ ಕೊಟ್ಟಿದ್ದೇನೆ ಎಂದು ಹೇಳಿದರು.
ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ
ಬಳಿಕ ಸಂಸದ ಪ್ರತಾಪ್ ಸಿಂಹ ಮಾತನಾಡಿ ಸಿದ್ದರಾಮಯ್ಯ ಒಬ್ಬ ಜಾತಿವಾದಿ ಸಿದ್ದರಾಮಯ್ಯ ಅವರಿಗೆ ಸ್ವಜಾತಿ ಮಾತ್ರ ಮುಖ್ಯ ಅನ್ನೋದು ವರುಣಾ ಜನರಿಗೆ ಗೊತ್ತಿದೆ. ಸಿದ್ದರಾಮಯ್ಯ ಜಾತಿವಾದಿಯಾಗಿರುವುದರಿಂದ ಎಲ್ಲಾ ವರ್ಗದ ಜನ ಸೋಮಣ್ಣ ಪರವಾಗಿ ನಿಂತಿದ್ದಾರೆ. ಸೋಮಣ್ಣ ಒಂದು ಕರೆ ಕೊಟ್ಟರೆ ನಿಮಗು, ಎಲ್ಲಾ ಊರುಗಳಲ್ಲೂ ಇದೇ ಆಗಬಹುದು ಆಗ ಪರಿಸ್ಥಿತಿ ಏನಾಗುತ್ತದೆ ಊಹಿಸಿ. ಇದನ್ನು ನೀವು ಮುಂದುವರಿಸಿದರೆ ನಮಗೂ ಶಕ್ತಿ ಇದೆ. ಅದನ್ನು ನಾವು ಸಾಬೀತು ಮಾಡಬೇಕಾಗುತ್ತೆ ಆಗ ವರುಣಾ ಶಾಂತಿ ಕೆಡುತ್ತದೆ ಎಂದು ಎಚ್ಚರಿಕೆ ಕೊಟ್ಟರು.
ಇದನ್ನೂ ಓದಿ: ಸೋಮಣ್ಣ ಬೆಂಬಲಿಗರ ಮೇಲೆ ಕಾಂಗ್ರೆಸ್ ಮುಖಂಡರ ಹಲ್ಲೆ ಪ್ರಕರಣ: ಸಿದ್ದರಾಮಯ್ಯ ಅಣ್ಣನ ಮಕ್ಕಳ ವಿರುದ್ಧ ಕೇಸ್ ದಾಖಲು
ಸಿದ್ದರಾಮಯ್ಯ ಪಾಳಯದಲ್ಲಿ ಹತಾಶೆ ಮತ್ತು ಸೋಲಿನ ಭಯ ಶುರುವಾಗಿದೆ. ಬಿಜೆಪಿ ಅವರು ಪ್ರಚಾರಕ್ಕೆ ಹೋದ ಕಡೆಯಲೆಲ್ಲಾ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸಿದ್ದರಾಮಯ್ಯ ಈ ರೀತಿ ಸಣ್ಣತನ ಯಾಕೆ ಮಾಡುತ್ತಿದ್ದಾರೆ ಗೊತ್ತಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಿನ್ನೆ ನಮ್ಮ ಪ್ರಚಾರದ ಮೆರವಣಿಗೆ ಮೇಲೆ ಕಲ್ಲಲ್ಲಿ ಹೊಡೆದಿದ್ದಾರೆ. ಬಕೆಟ್ಗಳಲ್ಲಿ ಕಲ್ಲು ಇಟ್ಟುಕೊಂಡಿದ್ದರು. ಗಲಾಟೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಸೋಲಿನ ಭಯದಿಂದ ಈ ರೀತಿ ಸಿದ್ದರಾಮಯ್ಯ ಟೀಂ ಮಾಡುತ್ತಿದೆ. ಸಿದ್ದರಾಮನ ಹುಂಡಿಯೇನೂ ಸಿದ್ದರಾಮಯ್ಯ ಸಂಸ್ಥಾನನಾ? ಸಿದ್ದರಾಮಯ್ಯ ಏನೂ ಪಾಳೇಗಾರಿಕೆ ಮಾಡುತ್ತಿದ್ದಾರಾ? ಸಿದ್ದರಾಮಯ್ಯ ಅವರು ತಮ್ಮ ಸ್ವಜಾತಿಗೆ ಚಿತಾವಣೆ ಕೊಟ್ಟು ಈ ರೀತಿ ತೊಂದರೆ ಕೊಡಿಸುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:23 am, Fri, 28 April 23