Sirsi Election Results: ಶಿರಸಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ವಿಶ್ವೇಶ್ವರ ಹೆಗಡೆ ಕಾಗೇರಿ, ಭೀಮಣ್ಣ ನಾಯ್ಕ್ ಮಧ್ಯೆ ಪೈಪೋಟಿ
Sirsi Assembly Election Result 2023 Live Counting Updates: ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ನಿಂದ ಭೀಮಣ್ಣ ನಾಯ್ಕ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.
Sirsi Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಬಿಜೆಪಿಯ ಭದ್ರಕೋಟೆಯಾಗಿರುವ ಶಿರಸಿ ವಿಧಾನಸಭಾ ಕ್ಷೇತ್ರದಿಂದ ( Sirsi Assembly Constituency)ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿ, ಸ್ಪೀಕರ್ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪರ್ಧಿಸಿದ್ದಾರೆ. ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 70,595 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಇವರು ಮತ್ತೊಮ್ಮೆ ಗೆಲ್ಲುವ ಭರವಸೆಯಲ್ಲಿದ್ದಾರೆ. ಸದ್ಯ ಮುನ್ನಡೆ ಕೂಡ ಸಾಧಿಸಿದ್ದಾರೆ.
ಕಾಂಗ್ರೆಸ್ನಿಂದ ಭೀಮಣ್ಣ ನಾಯ್ಕ್ ಸ್ಪರ್ಧಿಸಿದ್ದಾರೆ. ಇನ್ನು ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕಣದಲಿದ್ದು, 53,134 ಮತಗಳನ್ನ ಪಡೆದು17,461ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಭೀಮಣ್ಣ ನಾಯ್ಕ್ ಹೇಗಾದರೂ ಮಾಡಿ ಗೆಲುವು ಸಾಧಿಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಜೆಡಿಎಸ್ನಿಂದ ಉಪೇಂದ್ರ ಪೈ ಕಣಕ್ಕಿಳಿದಿದ್ದಾರೆ. ಶಿರಸಿ ಕ್ಷೇತ್ರ 1999ರಿಂದ ಬಿಜೆಪಿಯೇ ಗೆದ್ದಿದ್ದು, ಈ ಬಾರಿ ಮತದಾರ ಯಾರ ಕೈಹಿಡಿಯಲಿದ್ದಾರೆ ಕಾದು ನೋಡಬೇಕಿದೆ. ಅದರಂತೆ ಈ ಬಾರಿ ಕೂಡ ಶಿರಸಿ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ನೇರಾನೇರ ಸ್ಪರ್ಧೆ ಏರ್ಪಟಿದೆ. ಈ ಬಾರಿ ಮತ್ತೊಮ್ಮೆ ಗೆಲ್ಲುವ ಭರವಸೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಇದ್ದಾರೆ, ಇತ್ತ ಭೀಮಣ್ಣ ನಾಯ್ಕ್ ಕೂಡ ಈ ಬಾರಿಯಾದರೂ ಗೆಲ್ಲಬೇಕೆಂಬ ನಿರೀಕ್ಷೆಯಲ್ಲಿದ್ದಾರೆ.
Published On - 4:19 am, Sat, 13 May 23