Siruguppa Election 2023 Winner: ಸಿರುಗುಪ್ಪ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ ಅವರಿಗೆ ಬಾರಿ ಗೆಲುವು
BM Nagaraja: ಸಿರುಗುಪ್ಪ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ ಅವರಿಗೆ ಬಾರಿ ಗೆಲುವು

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಹೊರಬಿದ್ದಿದೆ. ಸಿರುಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ (Siruguppa Assembly Constituency) ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ ಅವರು ಬಾರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ, ಜೆಡಿಎಸ್ ನಿಂದ ಪರಮೇಶ್ವರ್ ನಾಯ್ಕ್ ವಿರುದ್ಧ ಎಂಎಸ್ ಸೋಮಲಿಂಗಪ್ಪ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ.
2018 ರಲ್ಲಿ, ಭಾರತೀಯ ಜನತಾ ಪಕ್ಷದ ಸೋಮಲಿಂಗಪ್ಪ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಬಿ. ಮುರಳಿ ಕೃಷ್ಣ ಅವರನ್ನು 21271 ಮತಗಳ ಅಂತರದಿಂದ ಸೋಲಿಸುವ ಮೂಲಕ ಸ್ಥಾನ ಗಳಿಸಿದರು.
2008ರ ಚುನಾವಣೆಯಲ್ಲೂ ಎಂ.ಎಸ್.ಸೋಮಲಿಂಗಪ್ಪ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್‌ನ ಬಿ.ಎಂ.ನಾಗರಾಜ್ ವಿರುದ್ಧ 4824 ಮತಗಳ ಅಂತರದಲ್ಲಿ ಗೆಲುವು ಪಡೆಯುತ್ತಾರೆ. 2013ರಲ್ಲಿ ಮತ್ತೆ ಈ ಕ್ಷೇತ್ರದ ಮತದಾರ ಕೈ ಪಕ್ಷದ ಅಭ್ಯರ್ಥಿ ಬಿ.ಎಂ.ನಾಗರಾಜ್‌ರನ್ನು ಚುನಾಯಿಸಿಕೊಳ್ಳುತ್ತಾರೆ. ಬಿಜೆಪಿ ಅಭ್ಯರ್ಥಿ ಸೋಮಲಿಂಗಪ್ಪ 21814 ಮತಗಳ ಭಾರೀ ಅಂತರದ ಸೋಲುಣ್ಣುತ್ತಾರೆ. 2018ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸ್ಪರ್ಧಿಸುವ ಅವಕಾಶ ಪಡೆದ ಎಂ.ಎಸ್.ಸೋಮಲಿಂಗಪ್ಪ ಅವರು ಕಾಂಗ್ರೆಸ್‌ನ ಮುರುಳಿಕೃಷ್ಣ ವಿರುದ್ಧ ಗೆಲುವು ದಾಖಲಿಸಿದ್ದರು