ನನ್ನ ಕ್ಷೇತ್ರ ಚಿನ್ನದಂತೆ ಇತ್ತು, ಹೈಕಮಾಂಡ್ ಹೇಳಿತೆಂದು ಹೋದೆ: ಅಸಮಾಧಾನ ಹೊರಹಾಕಿದ ಸೋಮಣ್ಣ

ಮೇ.10 ರಂದು ನಡೆದಿದ್ದ ವಿಧಾನಸಭೆ ಚುನಾವಣೆ ಮತದಾನದ ಫಲಿತಾಂಶ ನಿನ್ನೆ(ಮೇ.13) ಬಂದಿದ್ದು, ರಾಜ್ಯದಲ್ಲಿ ಸಂಪೂರ್ಣ ಬಹುಮತದಿಂದ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿದೆ. ಇನ್ನು ಬಿಜೆಪಿಯಿಂದ ಸ್ಪರ್ಧಿಸಿ, ಸೋತಿದ್ದ ವಿ.ಸೋಮಣ್ಣ ಮಾತನಾಡಿ ‘ಸೋತಾಗಿದೆ, ಏನು ಮಾತಾಡಲಿ? ಮಾತಾಡೋದು ಅಗತ್ಯ ಇಲ್ಲ. ಸೋತಿದ್ದೇನೆ ಅಷ್ಟೇ ಎಂದಿದ್ದಾರೆ.

ನನ್ನ ಕ್ಷೇತ್ರ ಚಿನ್ನದಂತೆ ಇತ್ತು, ಹೈಕಮಾಂಡ್ ಹೇಳಿತೆಂದು ಹೋದೆ: ಅಸಮಾಧಾನ ಹೊರಹಾಕಿದ ಸೋಮಣ್ಣ
ವಿ ಸೋಮಣ್ನ
Follow us
|

Updated on: May 14, 2023 | 10:41 AM

ಬೆಂಗಳೂರು: ಮೇ.10 ರಂದು ನಡೆದಿದ್ದ ವಿಧಾನಸಭೆ ಚುನಾವಣೆ ಮತದಾನದ ಫಲಿತಾಂಶ(Karnataka Assembly Elections 2023 Result) ನಿನ್ನೆ(ಮೇ.13) ಬಂದಿದ್ದು, ರಾಜ್ಯದಲ್ಲಿ ಸಂಪೂರ್ಣ ಬಹುಮತದಿಂದ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿದೆ. ಇನ್ನು ಬಿಜೆಪಿಯಿಂದ ಸ್ಪರ್ಧಿಸಿ, ಸೋತಿದ್ದ ವಿ.ಸೋಮಣ್ಣ(V Somanna) ಮಾತನಾಡಿ ‘ಸೋತಾಗಿದೆ, ಏನು ಮಾತಾಡಲಿ? ಮಾತಾಡೋದು ಅಗತ್ಯ ಇಲ್ಲ. ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಇದನ್ನ ಚಾಲೆಂಜ್ ಆಗಿ ತೆಗೆದುಕೊಂಡೆ, ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತದೆ. ನನ್ನ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳಿತೆಂದು ಹೋದೆ. ಇದೀಗ ಜನ ತೀರ್ಮಾನ ಮಾಡಿದ್ದಾರೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು, ಪಕ್ಷದ ಮಾತು ಕೇಳಿದೆ ಅಷ್ಟೇ ಎಂದಿದ್ದಾರೆ.

ಬಿಜೆಪಿ, ಯಡಿಯೂರಪ್ಪರನ್ನ ಮೂಲೆಗುಂಪು ಮಾಡಿದ್ಯಾ ಎಂಬ ಕುರಿತು ಮಾತನಾಡಿದ ಅವರು ‘ಯಡಿಯೂರಪ್ಪ ಅವರನ್ನು ಪಕ್ಷ ಮೂಲೆಗುಂಪು ಮಾಡಿಲ್ಲ. ಅವರ ನಾಯಕತ್ವದಲ್ಲಿ ಚುನಾವಣೆ ಮಾಡಿದ್ದೀವಲ್ಲ? ಯಡಿಯೂರಪ್ಪ ಹೇಳಿದ್ದಾರಾ ಮೂಲೆಗುಂಪು ಮಾಡಿದ್ದಾರೆ ಅಂತ. ಸೋತ ತಕ್ಷಣ ಎಲ್ಲವೂ ಮುಗಿದು ಹೋಯ್ತಾ? ಪಕ್ಷಕ್ಕೂ ಹಿನ್ನಡೆ ಆಗಿದ್ದು ನಮಗೆಲ್ಲ ಎಚ್ಚರಿಕೆ ಗಂಟೆ, ಜನರ ತೀರ್ಮಾನ ಇದು, ಬದ್ಧರಾಗಬೇಕು. ದೇಶಕ್ಕೆ ಮೋದಿ ಪ್ರಶ್ನಾತೀತ ನಾಯಕರು, ಅವರ ಕೆಲಸಗಳು ಅವಿಸ್ಮರಣೀಯವಾದದ್ದು, ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಸ್ಕೀಮ್​ಗಳೇ ಅವರ ಗೆಲುವಿಗೆ ಕಾರಣ ಎಂದಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ಹಿಂದೆ ಮಾಸ್ಟರ್‌ ಮೈಂಡ್‌ ಸುನಿಲ್ ಕುನಗೋಳು: ಯಾರು ಈ ಸ್ಟ್ರ್ಯಾಟಜಿ ಸ್ಟಾರ್?

ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿಕೆಶಿ ಪೈಪೋಟಿ

ಇನ್ನು ಇದೇ ವೇಳೆ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿಕೆಶಿ ನಡುವೆ ಪೈಪೋಟಿ ಕುರಿತು ‘ಅದು ಅವರ ಪಕ್ಷದ ನಿರ್ಧಾರ. ಡಿ.ಕೆ. ಶಿವಕುಮಾರ್ ನಮ್ಮ ತಾಲ್ಲೂಕಿನವರು. ಸಿದ್ದರಾಮಯ್ಯ ಹಿರಿಯ ನಾಯಕರು, ಜೊತೆಗೆ ಈಗಾಗಲೇ ಒಮ್ಮೆ ಮುಖ್ಯಮಂತ್ರಿ ಆಗಿದ್ದಾರೆ. ಈಗ ಡಿಕೆ ಶಿವಕುಮಾರ್​ ಮುಖ್ಯಮಂತ್ರಿ ಆಗಬೇಕಾಗಿರುವವರು. ಯಾರನ್ನ ಸಿಎಂ ಮಾಡಬೇಕೆಂದು ಅವರ ಪಕ್ಷ ನಿರ್ಧಾರ ಕೈಗೊಳ್ಳುತ್ತೆ ಎನ್ನುವ ಮೂಲಕ ಪರೋಕ್ಷವಾಗಿ ಡಿಕೆ ಶಿವಕುಮಾರ್​ ಸಿಎಂ ಆಗಲಿ ಎಂದು ವಿ.ಸೋಮಣ್ಣ ಹೇಳಿದ್ದಾರೆ.

ಚಾಮರಾಜನಗರ ವರುಣಾದಲ್ಲೂ ಸೋಲು ಕಂಡ ವಿ ಸೋಮಣ್ಣ

ಬೆಂಗಳೂರಿನಿಂದ ವಲಸೆ ಹೋಗಿ ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ವಿ ಸೋಮಣ್ಣ ಅವರಿಗೆ ಸೋಲಾಗಿದೆ. ಕಾಂಗ್ರೆಸ್ ಅಭ್ಯೆರ್ಥಿ ಪುಟ್ಟರಂಗಶೆಟ್ಟಿ ಅವರು ಸತತ ಮೂರನೇ ಬಾರಿಗೆ ಗೆದ್ದು ಹ್ಯಾಟ್ರಿಕ್​ ಸಾಧಿಸಿದ್ದಾರೆ. ಗಡಿ ಜಿಲ್ಲೆ ಕಾರಣಕ್ಕೆ ಸಾಧಾರಣ ಕ್ಷೇತ್ರಗಳ ಪಟ್ಟಿಯಲ್ಲಿದ್ದ ಚಾಮರಾಜನಗರವು ರಾತ್ರೋರಾತ್ರಿ ಹೈವೋಲ್ಟೇಜ್‌ ಕ್ಷೇತ್ರವಾಗಿ ಹೊರಹೊಮ್ಮಿತ್ತು. ರಾಜಧಾನಿ ಹೃದಯ ಭಾಗದ ಸ್ವಕ್ಷೇತ್ರ ಗೋವಿಂದರಾಜನಗರವನ್ನ ಬಿಟ್ಟು ಚಾಮರಾಜನಗರ ಕ್ಷೇತ್ರದಲ್ಲಿ ಕಮಲ ಅರಳಿಸಲು ಸಚಿವ ವಿ ಸೋಮಣ್ಣ ಅಖಾಡಕ್ಕಿಳಿದಿದ್ದರು. ಆದರೆ ಸೋಲುಂಡಿದ್ದಾರೆ. ಇನ್ನು ವರುಣಾದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಸ್ಪರ್ಧಿಸಿದ್ದ ವಿ ಸೋಮಣ್ಣ50,122 ಮತಗಳನ್ನ ಪಡೆದು ಸೋತಿದ್ದಾರೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ