AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Soraba Election Result: ಸೊರಬ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಂಗಾರಪ್ಪರ ಕರ್ಮಭೂಮಿ ಸೊರಬದಲ್ಲಿ ಸಹೋದರರ ಸವಾಲ್

Soraba Assembly Election Result 2023 Live Counting Updates: ಹುಟ್ಟೂರು ಸೊರಬದಲ್ಲಿ ಸೋಲಿಲ್ಲದ ಸರದಾರನಂತೆ ಸತತ 7 ಬಾರಿ ಶಾಸಕರಾಗಿ ಎಸ್​. ಬಂಗಾರಪ್ಪ ಮೆರೆದಿದ್ದರು. ಮಾಜಿ ಮುಖ್ಯಮಂತ್ರಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿಂದು ಬಂಗಾರಪ್ಪರವರ ಮಕ್ಕಳಿಬ್ಬರ ದಾಯಾದಿ ಕಲಹ ನಡೆಯುತ್ತಿದೆ.

Soraba Election Result: ಸೊರಬ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಂಗಾರಪ್ಪರ ಕರ್ಮಭೂಮಿ ಸೊರಬದಲ್ಲಿ ಸಹೋದರರ ಸವಾಲ್
ಕುಮಾರ್ ಬಂಗಾರಪ್ಪ, ಮಧು ಬಂಗಾರಪ್ಪ
ನಯನಾ ರಾಜೀವ್
| Edited By: |

Updated on:May 13, 2023 | 1:49 AM

Share

Soraba Assembly Election Results 2023: ಹುಟ್ಟೂರು ಸೊರಬದಲ್ಲಿ ಸೋಲಿಲ್ಲದ ಸರದಾರನಂತೆ ಸತತ 7 ಬಾರಿ ಶಾಸಕರಾಗಿ ಎಸ್​. ಬಂಗಾರಪ್ಪ ಮೆರೆದಿದ್ದರು. ಮಾಜಿ ಮುಖ್ಯಮಂತ್ರಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿಂದು ಬಂಗಾರಪ್ಪರವರ ಮಕ್ಕಳಿಬ್ಬರ ದಾಯಾದಿ ಕಲಹ ನಡೆಯುತ್ತಿದೆ. 1994ರವರೆಗೆ ಸತತ ಏಳು ಬಾರಿ ಎಸ್ ಬಂಗಾರಪ್ಪ ಅವರು, ಸೊರಬವನ್ನು ಪ್ರತಿನಿಧಿಸಿದ್ದರು. ಇದಾದ ಬಳಿಕ 2008ರಲ್ಲಿ ಒಮ್ಮೆ ಬಂಗಾರಪ್ಪ ಕುಟುಂಬದ ಹೊರತಾಗಿ ಹಾಲಪ್ಪ ಈ ಕ್ಷೇತ್ರದ ಶಾಸಕರಾಗಿದ್ದರು.

ಉಳಿದಂತೆ ಈ ಕ್ಷೇತ್ರವು ಬಂಗಾರಪ್ಪ ಕುಟುಂಬದ ಕೈಯಲ್ಲಿಯೇ ಇದೆ. ಈಗ ಮೂರನೇ ಬಾರಿಗೆ ಅಣ್ಣ, ತಮ್ಮ ಪರಸ್ಪರ ಹೋರಾಟಕ್ಕೆ ನಿಂತಿದ್ದಾರೆ. ಈ ಹಿಂದಿನ ಅಣ್ಣ-ತಮ್ಮಂದಿರ ನಡುವಿನ ಎರಡೂ ಚುನಾವಣೆಯಲ್ಲಿ ಕುಮಾರ ಬಂಗಾರಪ್ಪ ಗೆಲುವು ಸಾಧಿಸಿದ್ದರು. ಹಾಗೆಯೇ ಈಗಾಗಲೇ ಮೂರು ಬಾರಿ ಸೊರಬದಲ್ಲಿ ಕುಮಾರ್ ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ ಸುಮಾರು 13 ಸಾವಿರ ಮತಗಳಿಂದ ಕುಮಾರ ಬಂಗಾರಪ್ಪ ಗೆಲುವು ಸಾಧಿಸಿದ್ದರೆ, 2004ರಲ್ಲಿ ಸುಮಾರು 12 ಸಾವಿರ ಮತಗಳಿಂದ ವಿಜಯಿಯಾಗಿದ್ದರು.

ಈ ಕ್ಷೇತ್ರದಲ್ಲಿ ಬಂಗಾರಪ್ಪ ಕುಟುಂಬದ ಪ್ರಭಾವ ಹೆಚ್ಚಿದ್ದು, ಮಾಜಿ ಮುಖ್ಯಮಂತ್ರಿ ಪ್ರತಿನಿಧಿಸುತ್ತಿದ್ದಾಗ, ಕ್ಷೇತ್ರದ ನಾಮಪತ್ರ ಸಲ್ಲಿಕೆ ಹಾಗೂ ಮತದಾನ ಬಿಟ್ಟರೆ ಅವರಿಗೆ ಪ್ರಚಾರದ ಅಗತ್ಯವಿರಲಿಲ್ಲ ಎನ್ನುವಷ್ಟು ಜನಪ್ರಿಯತೆ ಇತ್ತು. ಈ ಬಾರಿ ಅಣ್ಣ ತಮಗಮದಿರ ಜತೆಗೆ ಜೆಡಿಎಸ್​ನಿಂದ ಬಿ. ಚಂದ್ರೇಗೌಡ ಹಾಗೂ ಆಪ್​ನಿಂದ ಚಂದ್ರಶೇಖರ್ ಸ್ಪರ್ಧಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ ಲೈವ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:12 am, Sat, 13 May 23

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್