AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Soraba Election 2023 Winner: ಸೊರಬದಲ್ಲಿ ಮಧು ಬಂಗಾರಪ್ಪ ಗೆಲುವು, ಕುಮಾರ್ ಬಂಗಾರಪ್ಪಗೆ ಹೀನಾಯ ಸೋಲು

Madhu Bangarappa: ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ.

Soraba Election 2023 Winner: ಸೊರಬದಲ್ಲಿ ಮಧು ಬಂಗಾರಪ್ಪ ಗೆಲುವು, ಕುಮಾರ್ ಬಂಗಾರಪ್ಪಗೆ ಹೀನಾಯ ಸೋಲು
ಮಧು ಬಂಗಾರಪ್ಪ
ನಯನಾ ರಾಜೀವ್
|

Updated on:May 13, 2023 | 11:57 AM

Share

ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಹುಟ್ಟೂರು ಸೊರಬದಲ್ಲಿ ಸೋಲಿಲ್ಲದ ಸರದಾರನಂತೆ ಸತತ 7 ಬಾರಿ ಶಾಸಕರಾಗಿ ಎಸ್​. ಬಂಗಾರಪ್ಪ ಮೆರೆದಿದ್ದರು. ಮಾಜಿ ಮುಖ್ಯಮಂತ್ರಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿಂದು ಬಂಗಾರಪ್ಪರವರ ಮಕ್ಕಳಿಬ್ಬರ ದಾಯಾದಿ ಕಲಹ ನಡೆಯುತ್ತಿದೆ.

1994ರವರೆಗೆ ಸತತ ಏಳು ಬಾರಿ ಎಸ್ ಬಂಗಾರಪ್ಪ ಅವರು, ಸೊರಬವನ್ನು ಪ್ರತಿನಿಧಿಸಿದ್ದರು. ಇದಾದ ಬಳಿಕ 2008ರಲ್ಲಿ ಒಮ್ಮೆ ಬಂಗಾರಪ್ಪ ಕುಟುಂಬದ ಹೊರತಾಗಿ ಹಾಲಪ್ಪ ಈ ಕ್ಷೇತ್ರದ ಶಾಸಕರಾಗಿದ್ದರು.

ಉಳಿದಂತೆ ಈ ಕ್ಷೇತ್ರವು ಬಂಗಾರಪ್ಪ ಕುಟುಂಬದ ಕೈಯಲ್ಲಿಯೇ ಇದೆ. ಈಗ ಮೂರನೇ ಬಾರಿಗೆ ಅಣ್ಣ, ತಮ್ಮ ಪರಸ್ಪರ ಹೋರಾಟಕ್ಕೆ ನಿಂತಿದ್ದಾರೆ. ಈ ಹಿಂದಿನ ಅಣ್ಣ-ತಮ್ಮಂದಿರ ನಡುವಿನ ಎರಡೂ ಚುನಾವಣೆಯಲ್ಲಿ ಕುಮಾರ ಬಂಗಾರಪ್ಪ ಗೆಲುವು ಸಾಧಿಸಿದ್ದರು. ಹಾಗೆಯೇ ಈಗಾಗಲೇ ಮೂರು ಬಾರಿ ಸೊರಬದಲ್ಲಿ ಕುಮಾರ್ ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ ಸುಮಾರು 13 ಸಾವಿರ ಮತಗಳಿಂದ ಕುಮಾರ ಬಂಗಾರಪ್ಪ ಗೆಲುವು ಸಾಧಿಸಿದ್ದರೆ, 2004ರಲ್ಲಿ ಸುಮಾರು 12 ಸಾವಿರ ಮತಗಳಿಂದ ವಿಜಯಿಯಾಗಿದ್ದರು.

ಈ ಕ್ಷೇತ್ರದಲ್ಲಿ ಬಂಗಾರಪ್ಪ ಕುಟುಂಬದ ಪ್ರಭಾವ ಹೆಚ್ಚಿದ್ದು, ಮಾಜಿ ಮುಖ್ಯಮಂತ್ರಿ ಪ್ರತಿನಿಧಿಸುತ್ತಿದ್ದಾಗ, ಕ್ಷೇತ್ರದ ನಾಮಪತ್ರ ಸಲ್ಲಿಕೆ ಹಾಗೂ ಮತದಾನ ಬಿಟ್ಟರೆ ಅವರಿಗೆ ಪ್ರಚಾರದ ಅಗತ್ಯವಿರಲಿಲ್ಲ ಎನ್ನುವಷ್ಟು ಜನಪ್ರಿಯತೆ ಇತ್ತು. ಈ ಬಾರಿ ಅಣ್ಣ ತಮಗಮದಿರ ಜತೆಗೆ ಜೆಡಿಎಸ್​ನಿಂದ ಬಿ. ಚಂದ್ರೇಗೌಡ ಹಾಗೂ ಆಪ್​ನಿಂದ ಚಂದ್ರಶೇಖರ್ ಸ್ಪರ್ಧಿಸಿದ್ದರು.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:55 am, Sat, 13 May 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್