AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sowmya Reddy: ಸೌಮ್ಯಾ ರೆಡ್ಡಿಯಿಂದ ಮತದಾರರಿಗೆ ಆಮಿಷ; ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ ಸೇರಿದ ಕಾರಿನಲ್ಲಿ ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ ವಸ್ತುಗಳು ಸಿಕ್ಕಿದ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

Sowmya Reddy: ಸೌಮ್ಯಾ ರೆಡ್ಡಿಯಿಂದ ಮತದಾರರಿಗೆ ಆಮಿಷ; ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಸೌಮ್ಯಾ ರೆಡ್ಡಿImage Credit source: Facebook
ಗಣಪತಿ ಶರ್ಮಾ
|

Updated on: Apr 07, 2023 | 2:44 PM

Share

ಮುಖ್ಯಾಂಶಗಳು

  • ಸೌಮ್ಯಾ ರೆಡ್ಡಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು.
  • ರಾಜಕೀಯ ಒತ್ತಡದಿಂದ ಕಾರಿನ ಮಾಲೀಕರ ವಿರುದ್ಧ ದೂರು ದಾಖಲಾಗಿಲ್ಲ ಎಂದು ಆರೋಪ.
  • ದೂರು ದಾಖಲಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟದ ಎಚ್ಚರಿಕೆ.

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ (Sowmya Reddy) ಸೇರಿದ ಕಾರಿನಲ್ಲಿ ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ ವಸ್ತುಗಳು ಸಿಕ್ಕಿದ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಬಿಜೆಪಿ ಮುಖಂಡರಾದ ಎನ್​ಆರ್ ರಮೇಶ್, ಭಾಸ್ಕರ್ ರಾವ್​ ದೂರು ನೀಡಿದ್ದಾರೆ. ಶಾಸಕಿ ಸೌಮ್ಯಾ ರೆಡ್ಡಿ ಮಾಲೀಕತ್ವದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆ ಕಾರಿನಲ್ಲಿ ಮೊಬೈಲ್​​ಗಳು ಸೇರಿದಂತೆ ಇತರೆ ವಸ್ತುಗಳು ಸಿಕ್ಕಿವೆ. ಆದರೆ, ಕಾರು ಚಾಲಕ ರಾಮಚಂದ್ರ ವಿರುದ್ಧ ಮಾತ್ರ ದೂರು ಹಾಕಲಾಗಿದೆ. ರಾಜಕೀಯ ಒತ್ತಡದಿಂದ ಮಾಲೀಕರ ವಿರುದ್ಧ ದೂರು ದಾಖಲಾಗಿಲ್ಲ ಎಂದು ಬಿಜೆಪಿ ನಾಯಕರು ದೂರಿದ್ದಾರೆ.

ಸೌಮ್ಯಾ ರೆಡ್ಡಿ ವಿರುದ್ಧ ಕೇಸ್​ ದಾಖಲಿಸದಿದ್ದರೆ ಹೋರಾಟ ಮಾಡುತ್ತೇವೆ ಎಂದು ಆಯೋಗಕ್ಕೆ ದೂರು ನೀಡಿದ ಬಳಿಕ ಬಿಜೆಪಿ ಮುಖಂಡ ಎನ್​ಆರ್ ರಮೇಶ್ ಎಚ್ಚರಿಕೆ ನೀಡಿದ್ದಾರೆ.

ನಮ್ಮ ದೂರಿಗೆ ಚುನಾವಣಾ ಆಯೋಗ ಸಕಾರಾತ್ಮಕವಾಗಿ ಸ್ಪಂದನೆ ನೀಡಿದೆ. ಒಂದು ವೇಳೆ ಸೌಮ್ಯ ರೆಡ್ಡಿ ವಿರುದ್ಧ ದೂರು ದಾಖಲಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Sowmya Reddy: ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಇನೋವಾ ಕಾರು ಜಪ್ತಿ; ಏನೇನು ಸಿಕ್ತು ನೋಡಿ

ಸೌಮ್ಯಾ ರೆಡ್ಡಿ ಅವರಿಗೆ ಸೇರಿದ ಇನೋವಾ ಕಾರನ್ನು ಫ್ಲೈಯಿಂಗ್ ಸ್ಕ್ವಾಡ್ ಹಾಗೂ ತಿಲಕನಗರ ಪೊಲೀರು ಗುರುವಾರ ವಶಕ್ಕೆ ಪಡೆದಿದ್ದರು. ಅದರಲ್ಲಿ ಮತದಾರರಿಗೆ ಹಂಚಲು ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿರುವುದು ಚೆಕ್​ಪೋಸ್ಟ್​ನಲ್ಲಿ ತಪಾಸಣೆ ವೇಳೆ ಪೊಲೀಸರ ಗಮನಕ್ಕೆ ಬಂದಿತ್ತು. ಮೊಬೈಲ್​ಗಳು, 23 ಸೀರೆಗಳು, 23 ಬ್ಲೌಸ್ ಪೀಸ್, 16 ಶಾಲು, 150 ಪ್ರೋಗ್ರೆಸ್ ರಿಪೋರ್ಟ್ ಇರುವ ಬುಕ್​ಲೆಟ್ಸ್, ಸ್ಯಾಮ್ಸಂಗ್, ನೋಕಿಯಾ ಆ್ಯಂಡ್ರಾಯ್ಡ್ ಮೊಬೈಲ್​ಗಳನ್ನು ಮತದಾರರಿಗೆ ಹಂಚಲು ಕಾರಿನಲ್ಲಿ ಕೊಂಡೊಯ್ಯಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದರು.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡುವ, ಉಡುಗೊರೆ, ನಗದು ಹಂಚುವ ಕೃತ್ಯಗಳು ಎಗ್ಗಿಲ್ಲದೇ ನಡೆಯುತ್ತಿವೆ. ಬೆಂಗಳೂರಿನ ಆರ್​ಟಿ ನಗರದಲ್ಲಿ ಚುನಾವಣಾಧಿಕಾರಿಗಳು ಬುಧವಾರ ದಾಳಿ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 231 ಕುಕ್ಕರ್​​ಗಳ ಜಪ್ತಿ ಮಾಡಿದ್ದರು. ಇವುಗಳನ್ನು ಮತದಾರರಿಗೆ ಹಂಚುವುದಕ್ಕಾಗಿ ಖಾಲಿ ಮನೆಯಲ್ಲಿ ಸಂಗ್ರಹಿಸಿಡಲಾಗಿತ್ತು. ಈ ಪೈಕಿ ಪುಲಿಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಭಾವಚಿತ್ರವಿರುವ 60 ಕುಕ್ಕರ್​​ಗಳನ್ನೂ​ ಜಪ್ತಿ ಮಾಡಲಾಗಿತ್ತು.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್