Sringeri Election Result: ಶೃಂಗೇರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಐತಿಹಾಸಿಕ ಕ್ಷೇತ್ರ ಶೃಂಗೇರಿಯಲ್ಲಿ ಮಾಜಿ-ಹಾಲಿಗಳ ರಣಕಣ

| Updated By: Digi Tech Desk

Updated on: May 13, 2023 | 1:50 AM

Sringeri Assembly Election Results 2023 Live Counting Updates: ಕರ್ನಾಟಕದ ಮೂರನೇ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಈ ರಾಜ್ಯ ಕಂಡ ಅತ್ಯಂತ ಜನಪ್ರಿಯ ಶಿಕ್ಷಣ ಸಚಿವ ಗೋವಿಂದೇಗೌಡರು ಪ್ರತಿನಿಧಿಸುವ ಐತಿಹಾಸಿಕ ಶೃಂಗೇರಿ ವಿಧಾನಸಭಾ ಕ್ಷೇತ್ರವು ಈ ಬಾರಿ ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಹಣಾಹಣಿಗೆ ಸಾಕ್ಷಿಯಾಗುತ್ತಿದೆ.

Sringeri Election Result: ಶೃಂಗೇರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಐತಿಹಾಸಿಕ ಕ್ಷೇತ್ರ ಶೃಂಗೇರಿಯಲ್ಲಿ ಮಾಜಿ-ಹಾಲಿಗಳ ರಣಕಣ
ಟಿಡಿ ರಾಜೇಗೌಡ, ಜೀವರಾಜ್
Follow us on

Sringeri Assembly Election Results 2023: ಕರ್ನಾಟಕದ ಮೂರನೇ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಈ ರಾಜ್ಯ ಕಂಡ ಅತ್ಯಂತ ಜನಪ್ರಿಯ ಶಿಕ್ಷಣ ಸಚಿವ ಗೋವಿಂದೇಗೌಡರು ಪ್ರತಿನಿಧಿಸುವ ಐತಿಹಾಸಿಕ ಶೃಂಗೇರಿ ವಿಧಾನಸಭಾ ಕ್ಷೇತ್ರವು ಈ ಬಾರಿ ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಹಣಾಹಣಿಗೆ ಸಾಕ್ಷಿಯಾಗುತ್ತಿದೆ. ಹಾಲಿ ಶಾಸಕ ಟಿಡಿ ರಾಜೇಗೌಡ ಅವರಿಗೆ ಕಾಂಗ್ರೆಸ್ ಮೂರನೇ ಬಾರಿಗೆ ಟಿಕೆಟ್ ನೀಡಿದೆ. ಇತ್ತ ಆರನೇ ಬಾರಿಗೆ ಬಿಎಂ ದೇವರಾಜ್ ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಜೀವರಾಜ್ ಮೂರು ಬಾರಿ ಗೆಲುವು ಸಾಧಿಸಿದ್ದರೆ ರಾಜೇಗೌಡ 2018ರಲ್ಲಿ ಗೆದ್ದಿದ್ದರು. ಇವರ ಜತೆಗೆ ಈ ಬಾರಿ ಜೆಡಿಎಸ್​ನಿಂದ ಸುಧಾಕರ್ ಶೆಟ್ಟಿ, ಎಎಪಿಯಿಂದ ರಂಜನ್ ಗೌಡ ಕಣದಲ್ಲಿದ್ದಾರೆ.

ಈ ಕ್ಷೇತ್ರದಲ್ಲಿ 1957ರಲ್ಲಿ ಕಡಿದಾಳ್ ಮಂಜಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದು ವಿಶೇಷವಾಗಿತ್ತು. 1962ರಲ್ಲೂ ಅವರೇ ಗೆಲುವು ಸಾಧಿಸಿದ್ದರು. ಇದಾದ ಬಳಿಕ ಮೂರು ಬಾರಿ ಗೋವಿಂದೇಗೌಡರು ಶೃಂಗೇರಿಯನ್ನು ಪ್ರತಿನಿಧಿಸಿದ್ದರು.

ವಿಧಾನಸಭೆ ಚುನಾವಣೆ ಲೈವ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:24 am, Sat, 13 May 23