AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sullia Election Results: ಸುಳ್ಯ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಭಾಗೀರಥಿ ಮುರುಳ್ಯ​ ಮುಂದೆ ಗೆಲ್ಲಬಹುದ ಕಾಂಗ್ರೆಸ್​​ ಅಭ್ಯರ್ಥಿ ಜಿ.ಕೃಷ್ಣಪ್ಪ

Sullia Assembly Election Result 2023 Live Counting Updates: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ​ ​​ ಹಾಗೂ ಕಾಂಗ್ರೆಸ್​​ ಜಿ.ಕೃಷ್ಣಪ್ಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Sullia Election Results: ಸುಳ್ಯ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಭಾಗೀರಥಿ ಮುರುಳ್ಯ​ ಮುಂದೆ ಗೆಲ್ಲಬಹುದ ಕಾಂಗ್ರೆಸ್​​ ಅಭ್ಯರ್ಥಿ ಜಿ.ಕೃಷ್ಣಪ್ಪ
ಭಾಗೀರಥಿ ಮುರುಳ್ಯ, ಜಿ.ಕೃಷ್ಣಪ್ಪ
TV9 Web
| Edited By: |

Updated on: May 13, 2023 | 2:49 AM

Share

Sullia Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ (Sullia Assembly Constituency) ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಟ್​ ನಡೆಯಲಿದೆ, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ​ ಕಣಕ್ಕಿಳಿದಿದ್ದು. ಭಾಗೀರಥಿ ಮುರುಳ್ಯ ಅವರು ಆದಿದ್ರಾವಿಡ ಸಮುದಾಯದವರು. ಈ ಪ್ರದೇಶದಲ್ಲಿ ಆದಿದ್ರಾವಿಡ ಸಮುದಾಯದವರು ಹೆಚ್ಚು, ಜತೆಗೆ ಇಲ್ಲಿ ಬಿಜೆಪಿಯ ಮೇಲೆ ಹೆಚ್ಚು ಒಲವು ಇದೆ. ಈ ಕಾರಣಕ್ಕೆ ಈ ಭಾಗದಲ್ಲಿ ಹಿಂದುಳಿದ ಸಮುದಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ಈ ಹಿಂದೆ ಮಾಜಿ ಸಚಿವರಾಗಿದ್ದ ಎಸ್​​.ಅಂಗಾರ ಅವರು 6 ಬಾರಿ ಸುಳ್ಯ ಕ್ಷೇತ್ರದಿಂದ ಆಯ್ಕೆಯಾಗಿದ್ದರು, ಆದರೆ ಈ ಬಾರಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರಿಂದ ಅವರು ವಿರುದ್ಧ ಅನೇಕ ವಿರೋಧಗಳು ವ್ಯಕ್ತವಾಗಿತ್ತು. ಆ ಕಾರಣಕ್ಕೆ ಈ ಬಾರಿ ಅವರಿಗೆ ಟಿಕೇಟ್​​ ಕೈತಪ್ಪಿತ್ತು. ಎಸ್​​, ಅಂಗಾರ ಅವರು ಕೂಡ ಬಿಜೆಪಿ ನಾಯಕರ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದರು, ನಂತರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಹೇಳಿಕೊಂಡಿದ್ದರು, ಇದೀಗ ಬಿಜೆಪಿಯ ಅಭ್ಯರ್ಥಿ ಭಾಗೀರಥಿ ಮುರುಳ್ಯ​ ಅವರು ಪ್ರಬಲ ಅಭ್ಯರ್ಥಿಯಾಗಿ ಸುಳ್ಯದಲ್ಲಿ ಹೊರಹೊಮ್ಮುತ್ತಿದ್ದಾರೆ. ಶಿಕ್ಷಕಿಯಾಗಿ, ಟೈಲರಿಂಗ್ ಮತ್ತು ಹೈನುಗಾರಿಕೆ ಉದ್ಯಮವನ್ನು ಮಾಡಿಕೊಂಡಿದ್ದ ಭಾಜಪದ ಸಾಮಾನ್ಯ ಕಾರ್ಯಕರ್ತೆಯಾಗಿ ದುಡಿದ ಭಾಗೀರಥಿ ಮುರುಳ್ಯಗೆ ಈ ಬಾರಿ ಟಿಕೇಟ್​ ನೀಡದ್ದು, ಇದೀಗ ಬಹುಮತ ಸಾಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನೂ ಭಾಗೀರಥಿ ಮುರುಳ್ಯ ಅವರಿಗೆ ಪೈಪೋಟಿ ನೀಡುತ್ತಿರುವುದು ಕಾಂಗ್ರೆಸ್​​ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು. ಇವರು ಭಾಗೀರಥಿ ಮುರುಳ್ಯ ಪ್ರಬಲ ಪೈಪೋಟಿ ಅಲ್ಲ, ಆದರೆ ಜಿ.ಕೃಷ್ಣಪ್ಪ ಅವರ ಬಗ್ಗೆ ಸುಳ್ಯದಲ್ಲಿ ಒಂದು ರೀತಿಯ ಒಲವು ಇದೆ. ಆ ಕಾರಣದಿಂದ ಗೆಲ್ಲುವ ಸಾಧ್ಯತೆಗಳು ಇರಬಹುದು ಎಂದು ಹೇಳಲಾಗಿದೆ. ಜಿ.ಕೃಷ್ಣಪ್ಪ ಅವರ ಬಗ್ಗೆ ಸ್ವಪಕ್ಷದ ಕಾರ್ಯಕರ್ತರಲ್ಲೇ ವಿರೋಧ ಇತ್ತು. ಇದೀಗ ಯಾರಿಗೆ ವಿಜಯಮಾಲೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನೂ ಸುಳ್ಯದಲ್ಲಿ ಜೆಡಿಎಸ್​ ಅಭ್ಯರ್ಥಿ ವೆಂಕಟೇಶ್ ಎಚ್​​.ಎನ್ ಅವರು ಪ್ರಬಲ ಪೈಪೋಟಿ ನೀಡದಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್​ ಮತಗಳು ಹಂಚಿ ಹೋಗಬಹುದು. ಇನ್ನೂ ಎಎಪಿಯಿಂದ ಸುಮನ ಅವರು ಸ್ಪರ್ಧಿಸುತ್ತಿದ್ದಾರೆ. ಇದರ ಜತೆಗೆ ಇತರೇ ಅಭ್ಯರ್ಥಿಗಳು ಪೈಪೋಟಿ ನೀಡುತ್ತಿದ್ದಾರೆ.

ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್​, ಬಿಜೆಪಿ ನಡುವೆ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ, ಪಕ್ಷೇತರ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
TV9 Web
TV9 Web

TV9 Kannada

Read More
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ