
Sullia Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ (Sullia Assembly Constituency) ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಟ್ ನಡೆಯಲಿದೆ, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಕಣಕ್ಕಿಳಿದಿದ್ದು. ಭಾಗೀರಥಿ ಮುರುಳ್ಯ ಅವರು ಆದಿದ್ರಾವಿಡ ಸಮುದಾಯದವರು. ಈ ಪ್ರದೇಶದಲ್ಲಿ ಆದಿದ್ರಾವಿಡ ಸಮುದಾಯದವರು ಹೆಚ್ಚು, ಜತೆಗೆ ಇಲ್ಲಿ ಬಿಜೆಪಿಯ ಮೇಲೆ ಹೆಚ್ಚು ಒಲವು ಇದೆ. ಈ ಕಾರಣಕ್ಕೆ ಈ ಭಾಗದಲ್ಲಿ ಹಿಂದುಳಿದ ಸಮುದಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ಈ ಹಿಂದೆ ಮಾಜಿ ಸಚಿವರಾಗಿದ್ದ ಎಸ್.ಅಂಗಾರ ಅವರು 6 ಬಾರಿ ಸುಳ್ಯ ಕ್ಷೇತ್ರದಿಂದ ಆಯ್ಕೆಯಾಗಿದ್ದರು, ಆದರೆ ಈ ಬಾರಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರಿಂದ ಅವರು ವಿರುದ್ಧ ಅನೇಕ ವಿರೋಧಗಳು ವ್ಯಕ್ತವಾಗಿತ್ತು. ಆ ಕಾರಣಕ್ಕೆ ಈ ಬಾರಿ ಅವರಿಗೆ ಟಿಕೇಟ್ ಕೈತಪ್ಪಿತ್ತು. ಎಸ್, ಅಂಗಾರ ಅವರು ಕೂಡ ಬಿಜೆಪಿ ನಾಯಕರ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದರು, ನಂತರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಹೇಳಿಕೊಂಡಿದ್ದರು, ಇದೀಗ ಬಿಜೆಪಿಯ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಪ್ರಬಲ ಅಭ್ಯರ್ಥಿಯಾಗಿ ಸುಳ್ಯದಲ್ಲಿ ಹೊರಹೊಮ್ಮುತ್ತಿದ್ದಾರೆ. ಶಿಕ್ಷಕಿಯಾಗಿ, ಟೈಲರಿಂಗ್ ಮತ್ತು ಹೈನುಗಾರಿಕೆ ಉದ್ಯಮವನ್ನು ಮಾಡಿಕೊಂಡಿದ್ದ ಭಾಜಪದ ಸಾಮಾನ್ಯ ಕಾರ್ಯಕರ್ತೆಯಾಗಿ ದುಡಿದ ಭಾಗೀರಥಿ ಮುರುಳ್ಯಗೆ ಈ ಬಾರಿ ಟಿಕೇಟ್ ನೀಡದ್ದು, ಇದೀಗ ಬಹುಮತ ಸಾಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇನ್ನೂ ಭಾಗೀರಥಿ ಮುರುಳ್ಯ ಅವರಿಗೆ ಪೈಪೋಟಿ ನೀಡುತ್ತಿರುವುದು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು. ಇವರು ಭಾಗೀರಥಿ ಮುರುಳ್ಯ ಪ್ರಬಲ ಪೈಪೋಟಿ ಅಲ್ಲ, ಆದರೆ ಜಿ.ಕೃಷ್ಣಪ್ಪ ಅವರ ಬಗ್ಗೆ ಸುಳ್ಯದಲ್ಲಿ ಒಂದು ರೀತಿಯ ಒಲವು ಇದೆ. ಆ ಕಾರಣದಿಂದ ಗೆಲ್ಲುವ ಸಾಧ್ಯತೆಗಳು ಇರಬಹುದು ಎಂದು ಹೇಳಲಾಗಿದೆ. ಜಿ.ಕೃಷ್ಣಪ್ಪ ಅವರ ಬಗ್ಗೆ ಸ್ವಪಕ್ಷದ ಕಾರ್ಯಕರ್ತರಲ್ಲೇ ವಿರೋಧ ಇತ್ತು. ಇದೀಗ ಯಾರಿಗೆ ವಿಜಯಮಾಲೆ ಎಂಬುದನ್ನು ಕಾದು ನೋಡಬೇಕಿದೆ.
ಇನ್ನೂ ಸುಳ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ವೆಂಕಟೇಶ್ ಎಚ್.ಎನ್ ಅವರು ಪ್ರಬಲ ಪೈಪೋಟಿ ನೀಡದಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಮತಗಳು ಹಂಚಿ ಹೋಗಬಹುದು. ಇನ್ನೂ ಎಎಪಿಯಿಂದ ಸುಮನ ಅವರು ಸ್ಪರ್ಧಿಸುತ್ತಿದ್ದಾರೆ. ಇದರ ಜತೆಗೆ ಇತರೇ ಅಭ್ಯರ್ಥಿಗಳು ಪೈಪೋಟಿ ನೀಡುತ್ತಿದ್ದಾರೆ.
ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ, ಪಕ್ಷೇತರ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು.