ಮಂಡ್ಯ ಜಿಲ್ಲೆ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ: ಸಂಸದೆ ಸುಮಲತಾ

|

Updated on: Apr 20, 2023 | 7:02 PM

ಮಂಡ್ಯ ಜಿಲ್ಲೆ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ. ಯಾರ‍್ಯಾರೋ ಹೋಗಿದ್ದಾರೆಂದು ಇತಿಹಾಸ ನೋಡಿದರೆ ತಿಳಿಯುತ್ತೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.

ಮಂಡ್ಯ: ಮಂಡ್ಯ ಜಿಲ್ಲೆ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ. ಯಾರ‍್ಯಾರೋ ಹೋಗಿದ್ದಾರೆಂದು ಇತಿಹಾಸ ನೋಡಿದರೆ ತಿಳಿಯುತ್ತೆ ಎಂದು ಸಂಸದೆ ಸುಮಲತಾ (Sumalatha) ಹೇಳಿದ್ದಾರೆ. ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಟಾರ್ಗೆಟ್ ಇರುವುದು ಭ್ರಷ್ಟ ರಾಜಕಾರಣದ ವಿರುದ್ಧ ಮಾತ್ರ. ಜೆಡಿಎಸ್​ ಶಾಸಕ ಸಿ.ಎಸ್.ಪುಟ್ಟರಾಜು ವಿರುದ್ಧ ಸಿಬಿಐ ಪ್ರಕರಣವಿದೆ. ಜೇಬಲ್ಲಿ ಕೆಂಡ ಇಟ್ಟುಕೊಂಡು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಮಂಡ್ಯಕ್ಕೆ JDS ನಾಯಕರ ಕೊಡುಗೆ ಏನಿದೆ ಎಂದು ತೋರಿಸಲಿ. ಅಶೋಕ್ ಜಯರಾಮ್​ಗೆ ಜೆಡಿಎಸ್​ನಿಂದ ಅನ್ಯಾಯ ಆಗಿದೆ. ನನ್ನ ಮಗ ಬೇರೆ ಅಲ್ಲ ಎಸ್.ಟಿ ಜಯರಾಮ್​ ಮಗ ಬೇರೆ ಅಲ್ಲ. ಆದರೆ ಕುಮಾರಸ್ವಾಮಿಯವರು ಏನು ಮಾಡಿದರು. ಈ ಬಾರಿ ಜಯರಾಮ್​ಗೆ ಜನ ಆಶೀರ್ವದಿಸುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.

ಮಂಡ್ಯಕ್ಕೆ ಈ ನಾಯಕರ ಕೊಡುಗೆ ಏನು: ಸುಮಲತಾ ಪ್ರಶ್ನೆ 

ಅಂಬರೀಶ್​​ಯಿಂದ ಏನು ಪ್ರಯೋಜನವಿಲ್ಲವೆಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, 2018ರಲ್ಲಿ ಕುಮಾರಸ್ವಾಮಿ ಸಿಎಂ ಆಗೋಕೆ ಕಾರಣ ಯಾರು ಎಂದು ಪ್ರಶ್ನಿಸಿದರು. ಅಪಮಾನ ಆಗಿದ್ದಕ್ಕೆ ಅಂಬರೀಶ್​ ಅಭಿಮಾನಿಗಳಿಂದ ತಕ್ಕ ಪಾಠ ಮಾಡಲಾಯಿತು. ಕಾಂಗ್ರೆಸ್​ಗೆ ಅಂಬರೀಶ್​ ಅಭಿಮಾನಿಗಳು ತಕ್ಕ ಪಾಠ ಕಲಿಸಿದ್ದಾರೆ. ಹಾಗಾಗಿಯೇ 2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆದರು.  ಆಗ ಮೊದಲನೇ ದಿನವೇ ನಮ್ಮ ಮನೆಗೆ ಬಂದು ಊಟ ಮಾಡಿಕೊಂಡು ಹೋದರು. ಮಂಡ್ಯಕ್ಕೆ ಈ ನಾಯಕರ ಕೊಡುಗೆ ಏನಿದೆ ಎಂದು ತೋರಿಸಲಿ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಇದನ್ನೂ ಓದಿ: Karnataka Assembly Elections 2023: ಬಿಜೆಪಿ ಘೋಷಣೆ ಮಾಡಿರುವ ಅಭ್ಯರ್ಥಿಗಳ ವಿಶೇಷತೆಗಳಿವು

ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ

ಇತ್ತೀಚೆಗೆ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸುಮಲತಾ ಅಂಬರೀಶ್, ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಅಚ್ಚರಿ ಹೇಳಿಕೆ ನೀಡಿದ್ದರು. ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವದಂತಿ ಇದೆ. ಪಕ್ಷ ಸೂಚನೆ ನೀಡಿದರೆ ನನ್ನ ಸ್ಪರ್ಧೆ ಇರಲಿದೆ. ಈವರೆಗೆ ಪಕ್ಷ ನನಗೆ ಯಾವುದೇ ಸೂಚನೆಯನ್ನು ನೀಡಿಲ್ಲ. ಮಂಡ್ಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತುಕಡೇ ತುಕಡೇ ಗ್ಯಾಂಗ್‌: ಅರುಣ್ ಸಿಂಗ್ ವಾಗ್ದಾಳಿ

ಜೆಡಿಎಸ್ ಭದ್ರಕೋಟೆ ಭೇದಿಸಲು ಅಭಿಷೇಕ್ ರೆಡಿ

ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಲತಾ ಅಂಬರೀಷ್ ಗೆದ್ದಿದ್ದರು. ಜೆಡಿಎಸ್​ ಅಭ್ಯರ್ಥಿ ನಿಖಿಲ್ ಕುಮಾರ್ ಅವರು ಸೋತಿದ್ದರು. ಸ್ಟಾರ್​ಗಳ ಪ್ರಚಾರ ಅವರಿಗೆ ಸಹಕಾರಿ ಆಗಿತ್ತು. ಈಗ ಮಂಡ್ಯ ರಣಾಂಗಣದಲ್ಲಿ ಜೂನಿಯರ್ ರೆಬೆಲ್​ ಸ್ಟಾರ್ ಎಂಟ್ರಿ ಆಗುತ್ತಿದೆ. ಜೆಡಿಎಸ್ ಭದ್ರಕೋಟೆ ಭೇದಿಸಲು ಅಭಿಷೇಕ್ ರೆಡಿ ಆಗಿದ್ದಾರೆ.


ಅಭಿಷೇಕ್ ಅಂಬರೀಷ್ ಅವರು ಪ್ರಚಾರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಏಳೂ ಕ್ಷೇತ್ರದಲ್ಲೂ ಅಭಿ ಪ್ರಚಾರ ಮಾಡಲಿದ್ದಾರೆ. ಮುಖ್ಯವಾಗಿ ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ್ಣದಲ್ಲಿ ಅವರು ಮತ ಕೇಳಲಿದ್ದಾರೆ. ಇಂಡವಾಳು ಸಚ್ಚಿದಾನಂದ, ಅಶೋಕ್ ಜಯರಾಂ, ಎಸ್.ಪಿ.ಸ್ವಾಮಿ ಪರ ಅಭಿಷೇಕ್ ಪ್ರಚಾರ ಮಾಡಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Thu, 20 April 23