ಸಚಿವ ಸೋಮಣ್ಣಗೆ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ನೀಡದಿದ್ದರೆ ಪಕ್ಷಕ್ಕೆ ನಷ್ಟ; ಬೆಂಬಲಿಗರಿಂದ ನಳಿನ್ ಕುಮಾರ್ ಕಟೀಲ್​ಗೆ ಎಚ್ಚರಿಕೆ

ಈ ಬಾರಿಯ ಚುನಾವಣೆಗೆ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಲಾಗಿದೆ. ಈ ನಡುವೆ ಸೋಮಣ್ಣ ಅವರಿಗೆ ಬೇರೆ ಕ್ಷೇತ್ರ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇದನ್ನು ವಿರೋಧಿಸುತ್ತಿರುವ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.

ಸಚಿವ ಸೋಮಣ್ಣಗೆ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ನೀಡದಿದ್ದರೆ ಪಕ್ಷಕ್ಕೆ ನಷ್ಟ; ಬೆಂಬಲಿಗರಿಂದ ನಳಿನ್ ಕುಮಾರ್ ಕಟೀಲ್​ಗೆ ಎಚ್ಚರಿಕೆ
ಸಚಿವ ವಿ ಸೋಮಣ್ಣಗೆ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ಗೆ ಪತ್ರ ಬರೆದ ಬೆಂಬಲಿಗರು
Follow us
Rakesh Nayak Manchi
|

Updated on:Apr 10, 2023 | 10:25 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಲಾಗಿದೆ. ಈ ನಡುವೆ ಸಚಿವ ವಿ. ಸೋಮಣ್ಣ (V Somanna) ಅವರಿಗೆ ಬೇರೆ ಕ್ಷೇತ್ರ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇದನ್ನು ಖಂಡಿಸಿದ ಸೋಮಣ್ಣ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel)​ ಅವರಿಗೆ ಪತ್ರ ಬರೆದಿದ್ದು, ಗೋವಿಂದರಾಜನಗರ ಕ್ಷೇತ್ರದಿಂದ ಸೋಮಣ್ಣ ಬದಲಿಸದಂತೆ ಮನವಿ ಮಾಡಿದ್ದಾರೆ. ಕ್ಷೇತ್ರ ಬದಲಿಸುವುದಾದಲ್ಲಿ ಅವರ ಪುತ್ರ ಅರುಣ್ ಸೋಮಣ್ಣ ಅವರಿಗೆ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ನೀಡುವಂತೆ ಕ್ಷೇತ್ರದ ಬಿಜೆಪಿ ಅಧ್ಯಕ್ಷರು, ಮಾಜಿ ಕಾರ್ಪೊರೇಟರ್​ಗಳು, ಮೋರ್ಚಾಗಳ ಅಧ್ಯಕ್ಷರು ಸೇರಿದಂತೆ 30 ಕಾರ್ಯಕರ್ತರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಗೋವಿಂದರಾಜನಗರಕ್ಕೆ ಸೋಮಣ್ಣ ಅಥವಾ ಅರುಣ್ ಸೋಮಣ್ಣ ಹೊರತುಪಡಿಸಿ ಬೇರೆಯವರನ್ನು ಅಭ್ಯರ್ಥಿ ಮಾಡಿದರೆ ಕ್ಷೇತ್ರವು ಪಕ್ಷದ ಕೈ ತಪ್ಪಲಿದೆ. ಮಾತ್ರವಲ್ಲದೆ ವಿಜಯನಗರ, ರಾಜಾಜಿನಗರ, ಚಿಕ್ಕಪೇಟೆ ಮತ್ತು ಮಹಾಲಕ್ಷ್ಮೀ ಲೇಔಟ್ ಕ್ಷೇತ್ರಗಳ ಮೇಲೂ ಪರಿಣಾಮ ಬೀರಲಿದೆ. ಮುಖಂಡರು ಮತ್ತು ಕಾರ್ಯಕರ್ತರು ಬಂಡಾಯ ಏಳುವ ಸಾಧ್ಯತೆ ಇದೆ. ಇದರಿಂದ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಲಿದೆ ಎಂದು ಪತ್ರದ ಮೂಲಕ ಎಚ್ಚರಿಕೆ ನೀಡಲಾಗಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ವಿಶ್ವನಾಥ್ ಗೌಡ ನೇತೃತ್ವದಲ್ಲಿ ಪತ್ರ ಬರೆಯಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ದೆಹಲಿಯಿಂದಲೇ ಸ್ಪಷ್ಟನೆ ಕೊಟ್ಟ ಸೋಮಣ್ಣ

ಸೋಮಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲದೆ, ಅವರು ಗೋವಿಂದರಾಜನಗರ ಬಿಟ್ಟು, ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಅನುಮಾನಗಳು ಮೂಡಿದ್ದವು. ಹೈಕಮಾಂಡ್​ ಕೂಡ ಚಾಮರಾಜನಗರದಲ್ಲೇ ಸೆಟಲ್​ ಆಗಿ ಎಂದು ಸೋಮಣ್ಣ ಅವರಿಗೆ ಸಂದೇಶ ರವಾನಿಸಿದ್ದು, ಬಹುತೇಕ ಸ್ಪರ್ಧಿಸುವುದು ಪಕ್ಕಾ ಎನ್ನುವಂತಾಗಿತ್ತು. ಈ ನಡುವೆ ಸ್ಪಷ್ಟನೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ, ಸೋಮಣ್ಣ, ಗೋವಿಂದರಾಜನಗರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದಿದ್ದರು.

ಇದಕ್ಕೂ ಮುನ್ನ, ಸಿದ್ದರಾಮಯ್ಯ ಸ್ಪರ್ಧಿಸುವ ವರುಣಾ ಕ್ಷೇತ್ರದ ಟಿಕೆಟ್ ಸೋಮಣ್ಣ ಅವರಿಗೆ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆರಂಭದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿವೈ ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಬಳಿಕ ಶಿಕಾರಿಪುರ ಕ್ಷೇತ್ರದಿಂದಲೇ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ನಂತರದ ರಾಜಕೀಯ ಬೆಳವಣಿಗೆಯಲ್ಲಿ ಸೋಮಣ್ಣ ವರುಣಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಅದರ ದೃಡೀಕರಣಕ್ಕಾಗಿ ಮಾಧ್ಯಮ ಪ್ರತಿನಿಧಿಗಳು ಯಡಿಯೂರಪ್ಪರನ್ನು ಪ್ರಶ್ನಿಸಿದಾಗ ಅವರಿಂದ ಸ್ಪಷ್ಟ ಉತ್ತರ ಸಿಗಲಿಲ್ಲ. ಕೇಂದ್ರದ ನಾಯಕರು ಅಂತಿಮ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:25 pm, Mon, 10 April 23

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ