Tarikere Election 2023 Winner: ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿಎಚ್​​ ಶ್ರೀನಿವಾಸ್ ಗೆಲುವು

GH Srinivas: ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿಎಸ್​ ಶ್ರೀನಿವಾಸ್ ಗೆಲುವು ಸಾಧಿಸಿದ್ದಾರೆ. ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಚ್. ಶ್ರೀನಿವಾಸ (62413) ಅವರು ಬಿಜೆಪಿಯ ಡಿ.ಎಸ್.ಸುರೇಶ್(50385) ವಿರುದ್ಧ ಗೆಲುವು ಸಾಧಿಸಿದ್ದಾರೆ.

Tarikere Election 2023 Winner: ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿಎಚ್​​ ಶ್ರೀನಿವಾಸ್ ಗೆಲುವು
ಜಿಎಚ್​ ಶ್ರೀನಿವಾಸ

Updated on: May 13, 2023 | 5:33 PM

ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿಎಚ್​​ ಶ್ರೀನಿವಾಸ್ ಗೆಲುವು ಸಾಧಿಸಿದ್ದಾರೆ. ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಚ್. ಶ್ರೀನಿವಾಸ (62413) ಅವರು ಬಿಜೆಪಿಯ ಡಿ.ಎಸ್.ಸುರೇಶ್(50385) ವಿರುದ್ಧ ಗೆಲುವು ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ(ಕಾಂಗ್ರೆಸ್ ಬಂಡಾಯ) ಎಚ್.ಎಂ. ಗೋಪಿಕೃಷ್ಣ ಹುಣಸಗಟ್ಟ ಅವರು 35266 ಮತಗಳನ್ನು ಪಡೆದು ತ್ರಿಕೋನ ಸ್ಪರ್ಧೆಯನ್ನು ನೀಡಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜಕೀಯವಾಗಿ ಅಷ್ಟೇನು ಸದ್ದು ಮಾಡದ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಮತ್ತೊಮ್ಮೆ ಹಾಲಿ ಹಾಗೂ ಮಾಜಿಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು.

ಬಿಜೆಪಿಯಿಂದ ಹಾಲಿ ಶಾಸಕ ಡಿಎಸ್​ ಸುರೇಶ್​ಗೆ ನಾಲ್ಕನೇ ಬಾರಿಗೆ ಟಿಕೆಟ್ ನಿಡಲಾಗಿದೆ. 2008 ಹಾಗೂ 2018ರಲ್ಲಿ ಸುರೇಶ್​ ಗೆಲುವು ಸಾಧಿಸಿದ್ದರು. ಇತ್ತ ಕಾಂಗ್ರೆಸ್​ನಿಂದ ಜಿಎಚ್​​ ಶ್ರೀನಿವಾಸ್ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ, ಈ ಹಿಂದೆ 2013ರಲ್ಲಿ ಅವರು 900 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಡಿಎಸ್​ ಸುರೇಶ್​ ಅವರು 2018ರಲ್ಲಿ 11 ಸಾವಿರ ಮತಗಳಿಂದ ಗೆದ್ದಿದ್ದರೆ, 2008ರಲ್ಲಿ ಸುಮಾರು 8 ಸಾವಿರ ಮತಗಳಿಂದ ವಿಜಯ ಸಾಧಿಸಿದ್ದರು.

ಈ ಕ್ಷೇತ್ರದಲ್ಲಿ ಮೊದಲು ಜನತಾದಳವು ಪ್ರಾಬಲ್ಯ ಹೊಂದಿದ್ದರೂ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಡಿಎಸ್ ಸುರೇಶ್ ಹಾಗೂ ಶ್ರೀನಿವಾಸ್ ನಡುವಿನ ಹಾವು ಏಣಿ ಆಟದಲ್ಲಿ ಈಗ ಶ್ರೀನಿವಾಸ್ ಗೆಲುವು ಸಾಧಿಸಿದ್ದಾರೆ.

 

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us