AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terdal Election Result: ತೇರದಾಳ ವಿಧಾನಸಭಾ ಎಲೆಕ್ಷನ್​ 2023 ರಿಸಲ್ಟ್: ಖಾದಿಗಳನ್ನು ಮಣಿಸಿ ವಿಧಾನಸಭೆ ಪ್ರವೇಶಿಸುತ್ತಾರಾ ಖಾವಿ ತೊಟ್ಟ ಸ್ವಾಮೀಜಿ?

Terdal Assembly Election Result 2023 Live Counting Updates: ನಾಲ್ಕನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ತೇರದಾಳ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗೇರಿದ್ದು, ಸ್ವಾಮೀಜಿ ಕಣದಲ್ಲಿರುವುದು ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ.

Terdal Election Result: ತೇರದಾಳ ವಿಧಾನಸಭಾ ಎಲೆಕ್ಷನ್​ 2023 ರಿಸಲ್ಟ್: ಖಾದಿಗಳನ್ನು ಮಣಿಸಿ ವಿಧಾನಸಭೆ ಪ್ರವೇಶಿಸುತ್ತಾರಾ ಖಾವಿ ತೊಟ್ಟ ಸ್ವಾಮೀಜಿ?
ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​
ರಮೇಶ್ ಬಿ. ಜವಳಗೇರಾ
| Edited By: |

Updated on: May 13, 2023 | 2:22 AM

Share

Terdal Assembly Election Result 2023: ‌ಜೈನರ ಪ್ರಮುಖ ಕೇಂದ್ರವಾಗಿರುವ ತೇರದಾಳ, ರಾಜ್ಯದಲ್ಲಿ ಅತಿಹೆಚ್ಚು ನೇಕಾರರನ್ನು ಹೊಂದಿರುವ ವಿಧಾನಸಭಾ ಕ್ಷೇತ್ರ. ನಾಲ್ಕನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ತೇರದಾಳ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗೇರಿದೆ.

2008ರಿಂದ ಕಾಂಗ್ರೆಸ್‌ನಿಂದ ತೇರದಾಳ ಕ್ಷೇತ್ರವನ್ನು ಪ್ರತಿನಿಧಿಸುತ್ತ ಬಂದ ನಟಿ ಉಮಾಶ್ರೀ 2013ರಲ್ಲಿ ಶಾಸಕಿಯಾಗಿ ಆಯ್ಕೆಯಾಗಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವೆಯೂ ಆಗಿದ್ದರು. ಆದ್ರೆ, 2023ರ ಚುನಾವಣೆಯಲ್ಲಿ ಅವರಿಗೆ ಟಿಕೆಟ್‌ ತಪ್ಪಿದ್ದು,. ಹೊಸ ಮುಖ ಸಿದ್ದು ಕೊಣ್ಣೂರು ಅವರಿಗೆ ಕಾಂಗ್ರೆಸ್‌ ಮಣೆ ಹಾಕಿದೆ. ಇನ್ನು ಬಿಜೆಪಿಯಲ್ಲಿ ಈ ಬಾರಿ ಜಿಲ್ಲೆಯ ನೇಕಾರ ಮುಖಂಡ ಮನೋಹರ ಶಿರೋಳ ಪ್ರಬಲ ಆಕಾಂಕ್ಷಿಯಾಗಿದ್ದರು. ಇವುಗಳ ಮಧ್ಯೆ ಮೂರನೇ ವ್ಯಕ್ತಿ ಪಿಕೆಪಿಎಸ್​ ಮಾಜಿ ನಿರ್ದೆಶಕ ಭೀಮಶಿ ಮಗದುಮ್​ ಸಹ ಬಿಜೆಪಿ ಟಿಕೆಟ್​ ಗಾಗಿ ಪೈಪೋಟಿ ನಡೆಸಿದ್ದರು. ಆದರೆ ಬಿಜೆಪಿ ಅಂತಿಮವಾಗಿ ಸಿದ್ದು ಸವದಿಗೆ ಮುದ್ರೆ ಒತ್ತಿದೆ.

ಇನ್ನು ಪ್ರಮುಖ ಅಂಶ ಅಂದರೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಅತೃಪ್ತಗೊಂಡಿರುವವವರು ನೇಕಾರರ ಸ್ವಾಮಿಜೀಯವರನ್ನು ಚುನಾವಣಾ ಕಣಕ್ಕೆ ನಿಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕುರುಹಿನಶೆಟ್ಟಿ ಗುರುಪೀಠದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಕಣದಲ್ಲಿದ್ದಾರೆ. ಈ ಹಿನ್ನೆಲೆಲ್ಲಿ ಈ ಬಾರಿ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಗೆಲುವು ಯಾರ ಪಾಲಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us