Karnataka Assembly Election 2023: ಈ ಕ್ಷೇತ್ರದಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೋ ಅದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಎಂಬ ನಂಬಿಕೆ; ಯಾವುದು ಆ ಕ್ಷೇತ್ರ?

ಅದು ರಾಜ್ಯದ ಮೂಡಣ ಬಾಗಿಲು ಎಂದೇ ಕರೆಯುವ ರಾಜ್ಯ ರಾಜಕಾರಣದ ಪವರ್​ ಸೆಂಟರ್​ ಕ್ಷೇತ್ರ, ಈ ಕ್ಷೇತ್ರದಲ್ಲಿ ಗೆದ್ದ ಪಕ್ಷವೇ ರಾಜ್ಯದಲ್ಲಿಯೂ ಅಧಿಕಾರ ಚುಕ್ಕಾಣಿ ಹಿಡಿಯುತ್ತಾರೆ ಎಂಬ ನಂಬಿಕೆ ಕೂಡ ಇಲ್ಲಿದೆ. ಆ ಕಾರಣಕ್ಕಾಗಿಯೇ ಪ್ರಮುಖ ಮೂರು ಪಕ್ಷದ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸಿ ಮತದಾರರನ್ನು ಒಲಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

Karnataka Assembly Election 2023: ಈ ಕ್ಷೇತ್ರದಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೋ ಅದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಎಂಬ ನಂಬಿಕೆ; ಯಾವುದು ಆ ಕ್ಷೇತ್ರ?
ಪ್ರಾತಿನಿಧಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 29, 2023 | 8:35 AM

ಕೋಲಾರ: ಜಿಲ್ಲೆಯ ಮುಳಬಾಗಿಲು(Mulabagilu) ಕ್ಷೇತ್ರ ಎಂದರೆ ರಾಜ್ಯದ ಘಟಾನುಘಟಿ ನಾಯಕರಿಗೆ ಅಚ್ಚುಮೆಚ್ಚು. ಕಾರಣ ರಾಜ್ಯದ ಮೂಡಣ ಬಾಗಿಲು ಎಂದು ಕರೆಯುವ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಒಂದು ನಂಬಿಕೆಯಿದ್ದು, ಈ ಕ್ಷೇತ್ರದಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೋ ಅದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎನ್ನುವ ನಂಬಿಕೆ ಇದೆ. ಅದೇ ಕಾರಣಕ್ಕೆ ಮೂರು ಪಕ್ಷಗಳು ಈ ಕ್ಷೇತ್ರದಲ್ಲಿ ಗೆಲುವಿಗಾಗಿ ಹೆಚ್ಚಿನ ಆಸಕ್ತಿ ವಹಿಸುತ್ತವೆ. ಅದಕ್ಕಾಗಿಯೇ ಮುಳಬಾಗಿಲು ಕ್ಷೇತ್ರವನ್ನು ಲಕ್ಕಿ ಕ್ಷೇತ್ರ ಎಂದು ಕೆರೆಯುತ್ತಾರೆ. ಇನ್ನು ಚುನಾವಣೆ ಬಂತೆಂದರೆ ಸಾಕು ಕುರುಡುಮಲೆ ವಿನಾಯಕನಿಗೆ ಎಲ್ಲಾ ಪಕ್ಷಗಳ ಮುಖಂಡರು ಬಂದು ಹರಕೆ ಕಟ್ಟಿಕೊಳ್ಳುತ್ತಾರೆ. ಈ ಬಾರಿ ಈ ಕ್ಷೇತ್ರದಲ್ಲಿ ಯಾವ ಯಾವ ಪಕ್ಷದ ಪರಿಸ್ಥಿತಿ ಹೇಗಿದೆ

ಕಾಂಗ್ರೆಸ್‌ಗೆ ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಬಲವಿದ್ರೆ, ಮೂಡಣ ಬಾಗಿಲಿನಲ್ಲಿ ಖಾತೆ ತೆರೆಯಲು ಜೆಡಿಎಸ್ ಉತ್ಸಾಹದಲ್ಲಿದೆ. ಬಿಜೆಪಿಗೆ ಇಲ್ಲಿ ನೆಲೆ ಇಲ್ಲದಿದ್ರೂ ಪುಟಿದೇಳಲು ಇನ್ನಿಲ್ಲದ ಸರ್ಕಸ್​ ಮಾಡುತ್ತಿದೆ. ಮುಳಬಾಗಿಲಿನಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಚುನಾವಣೆಗೆ ಇನ್ನು 11 ದಿನಗಳಷ್ಟೇ ಬಾಕಿ ಇರುವುದರಿಂದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ತಂತ್ರಗಾರಿಕೆ ರೂಪಿಸಿದ್ದಾರೆ. ಬಿಜೆಪಿಯಿಂದ ದಿವಂಗತ ಮಾಜಿ ಶಾಸಕ ನಂಗಲಿ ಮುನಿಯಪ್ಪ ಅವರ ಮೊಮ್ಮಗ ಸೀಗೇಹಳ್ಳಿ ಸುಂದರ್, ಕಾಂಗ್ರೆಸ್‌ನಿಂದ ಆದಿನಾರಾಯಣ ಅವರಿಗೆ ಹಾಗೂ ಜೆಡಿಎಸ್​ನಿಂದ ಸಮೃದ್ಧಿ ಮಂಜುನಾಥ್ ಅಭ್ಯರ್ಥಿಗಳಾಗಿ ಕಣದಲ್ಲಿದ್ದಾರೆ. ಕಾಂಗ್ರೆಸ್​ ಹಾಗೂ ಬಿಜೆಪಿ ಕೊನೆ ಕ್ಷಣದಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ಕಳೆದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಕಡಿಮೆ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದ ಸಮೃದ್ಧಿ ಮಂಜುನಾಥ್​ಗೆ ಟಿಕೆಟ್​ ನೀಡಿದೆ. ಕಳೆದ ಐದು ವರ್ಷಗಳಿಂದ ಕ್ಷೇತ್ರದಲ್ಲಿ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಮಾಜ ಸೇವೆಯ ಮೂಲಕ ಕ್ಷೇತ್ರದಲ್ಲಿ ಉಳಿದುಕೊಂಡು ಈ ಬಾರಿ ಮತ್ತೆ ಜೆಡಿಎಸ್​ ನಿಂದ ಎರಡನೇ ಬಾರಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಇದನ್ನೂ ಓದಿ:Puttur Constituency: ಪುತ್ತೂರಿನಲ್ಲಿ ಬಿಜೆಪಿ ವರ್ಸಸ್ ಹಿಂದುತ್ವ ಫೈಟ್; ಯಾರಿಗೆ ಒಲಿಯಲಿದೆ ಜಯದ ಮಾಲೆ

ಜಾತಿ ಪ್ರಮಾಣ ಪತ್ರ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇರುವ ಕಾರಣ ಕೊತ್ತೂರು ಮಂಜುನಾಥ್, ಮುಳಬಾಗಿಲಿಗೆ ಬದಲಾಗಿ ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು ಇವರ ಬದಲಿಗೆ ಕೊನೇ ಕಣದಲ್ಲಿ ವಿ.ಅದಿನಾರಾಯಣ ಅವರನ್ನು ಕಾಂಗ್ರೆಸ್‌ ನಿಂದ ಅಭ್ಯರ್ಥಿಯಾಗಿಸಿದೆ. ಹಾಗಾಗಿ ಮುಳಬಾಗಿಲು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳಿಗಿಂತ ನಾನು ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಿಂದ ಹಗಲು ರಾತ್ರಿ ಎನ್ನದೆ ಜೊನರೊಟ್ಟಿಗಿದ್ದು ಜನರು ವಿಶ್ವಾಸ ಗಳಿಸಿದ್ದೇನೆ ಹಾಗಾಗಿ ಈ ಬಾರಿ ಮತದಾರರು ನಮ್ಮ ಕೈಬಿಡೋದಿಲ್ಲ ಎನ್ನುವುದು ಜೆಡಿಎಸ್ ಅಭ್ಯರ್ಥಿ ವಿಶ್ವಾಸ. ಇನ್ನು ಕಾಂಗ್ರೆಸ್​ನ ಆದಿನಾರಾಯಣ ಬಿರುಸಿನಿಂದ ಪ್ರಚಾರ ಮಾಡುತ್ತಿದ್ದಾರೆ. ಅವರಿಗೆ ಕೆ.ಹೆಚ್​. ಮುನಿಯಪ್ಪ ಹಾಗೂ ಕೊತ್ತೂರು ಮಂಜುನಾಥ್ ಬಣ ಎರಡೂ ಒಂದಾಗಿದ್ದು, ಜೆಡಿಎಸ್‌ನ ಆಲಂಗೂರು ಶಿವಣ್ಣ ಬೆಂಬಲ ಸೂಚಿಸಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಕೊತ್ತೂರು ಮಂಜುನಾಥ್​ ಮುಳಬಾಗಿಲು ಕ್ಷೇತ್ರದಲ್ಲಿ ತಮ್ಮದೇ ಪ್ರಭಾವ ಹೊಂದಿರುವ ಕಾರಣ ಇಲ್ಲಿ ಅವರ ಬೆಂಬಲವೊಂದಿದ್ದರೆ ತಾನು ಗೆದ್ದೇ ಗೆಲ್ತೀನಿ ಅನ್ನೋದು ಕಾಂಗ್ರೆಸ್ ಅಭ್ಯರ್ಥಿಯ ವಿಶ್ವಾಸ.

ಇನ್ನು ಬಿಜೆಪಿ ಅಭ್ಯರ್ಥಿ ಸೀಗೆಹಳ್ಳಿ ಸುಂದರ್​, ಈ ಹಿಂದೆ ಮುಳಬಾಗಿಲಿನಲ್ಲಿ ಶಾಸಕರಾಗಿದ್ದ ದಿವಂಗತ ನಂಗಲಿ ಮುನಿಯಪ್ಪ ಅವರ ಮೊಮ್ಮಗ ಎನ್ನುವ ಜೊತೆಗೆ ಬಿಜೆಪಿ ಪಕ್ಷ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಅಭ್ಯರ್ಥಿಯನ್ನಾಗಿಸಿದೆ ಹಾಗಾಗಿ ಕ್ಷೇತ್ರದ ಅಭಿವೃದ್ದಿಯ ಕನಸು ಕಂಡಿರುವ ನನಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ದಿಯೇ ನನಗೆ ಶ್ರೀರಕ್ಷೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ದಿ ಯೋಜನೆಗಳು ಮನೆ ಮನೆ ತಲುಪಿವೆ ಹಾಗಾಗಿ ಅದೆಲ್ಲವೂ ಕೂಡ ನನಗೆ ಅನುಕೂಲಕರ ವಾತಾವರಣ ನಿರ್ಮಾಣ ಮಾಡಿ ನನ್ನ ಗೆಲುವಿಗೆ ಸಹಾಯ ಮಾಡಲಿದೆ ಎನ್ನುವುದು ಬಿಜೆಪಿ ಅಭ್ಯರ್ಥಿ ವಿಶ್ವಾಸ.

ಇದನ್ನೂ ಓದಿ:ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ: ರಾಜಕೀಯ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು

ಒಟ್ಟಿನಲ್ಲಿ ರಾಜ್ಯದ ಮೂಡಣ ಬಾಗಿಲು ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಮೂರು ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಸರ್ಕಸ್​ ಮಾಡುತ್ತಿದ್ದು, ಇಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ, ಯಾವ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗುತ್ತಿದೆ. ಈ ಎಲ್ಲಾ ಕುತೂಹಲಕ್ಕೆ ಮೇ 13 ರಂದು ಉತ್ತರ ಸಿಗಲಿದೆ.

ವರದಿ: ರಾಜೇಂದ್ರಸಿಂಹ ಟಿವಿ9 ಕೋಲಾರ

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?