ಕಳೆದ ಬಾರಿಯ ಸಮೀಕ್ಷೆಗಳು ಕೂಡ ಕಾಂಗ್ರೆಸ್​ ಪರವೇ ಇದ್ದವು, ನಾವು ಅಧಿಕಾರಕ್ಕೆ ಬರುವುದು ಪಕ್ಕಾ -ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

|

Updated on: May 11, 2023 | 10:00 AM

ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಹೇಳಿದ್ದವು. ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ ಅಂತಾ ಹೇಳಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. -ಬಸವರಾಜ ಬೊಮ್ಮಾಯಿ

ಕಳೆದ ಬಾರಿಯ ಸಮೀಕ್ಷೆಗಳು ಕೂಡ ಕಾಂಗ್ರೆಸ್​ ಪರವೇ ಇದ್ದವು, ನಾವು ಅಧಿಕಾರಕ್ಕೆ ಬರುವುದು ಪಕ್ಕಾ -ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us on

ಹುಬ್ಬಳ್ಳಿ: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಗಿದಿದೆ. ರಾಜಕೀಯ ನಾಯಕರ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಕರುನಾಡ ಮತಪ್ರಭುಗಳು ತಮ್ಮ ಹಕ್ಕು ಚಲಾಯಿಸಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಹೊರ ಬಿದ್ದಿದ್ದು ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್​ಗೆ ಗದ್ದುಗೆ ಅಂತ ಭವಿಷ್ಯ ನುಡಿದಿವೆ. 2 ಸಮೀಕ್ಷೆಗಳು ಕಮಲ ಅರಳೋದು ಪಕ್ಕಾ ಎಂದಿವೆ. ಸದ್ಯ ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಹೇಳಿದ್ದವು. ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ ಅಂತಾ ಹೇಳಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಗ್ಗಾವಿ ಜನತೆ ತೋರಿದ ಪ್ರೀತಿಗೆ ನಾನು ಚಿರಖುಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದರು. ನನ್ನ ವಿರುದ್ಧ ಷಡ್ಯಂತರ, ಅಪಪ್ರಚಾರ ಮಾಡಿದರೂ ನಿನ್ನೆಗೆ ಮುಗಿದಿದೆ. ನಾನು ದೊಡ್ಡ ಬಹುಮತದಿಂದ ಗೆಲ್ಲುತ್ತೇನೆ. ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107 ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು. ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ಮೋದಿಯವರ ಪ್ರಚಾರ ನಮಗೆ ಪ್ಲಸ್ ಆಗಿದೆ. ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನನಗೆ ವಿಶ್ವಾಸವಿದೆ ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಅತಂತ್ರ ಎಂಬ ಪ್ರಶ್ನೆ ಉತ್ತರ ನೀಡಲ್ಲ. ನಾನು 150 ಅಂತ ಎಲ್ಲೂ ಹೇಳಿಲ್ಲ ಆದರೆ ಬಹುಮತ ಅಂತ ಹೇಳಿದ್ದೆ ಈಗಲೂ ಅದೇ ಹೇಳಿಕೆ ಬದ್ಧನಾಗಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಆಸ್ಪತ್ರೆಗೆ ದಾಖಲು

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತೆ

ಇನ್ನು ಮತ್ತೊಂದೆಡೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ತಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ, ನಾವೇ ಗೆಲ್ತೇವೆ. ಕರ್ನಾಟಕ ಜನರ ನಾಡಿಮಿಡಿತ ನಮಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರುತ್ತೆ, ಸರ್ಕಾರ ರಚನೆ ಮಾಡ್ತೀವಿ. ಬಿಜೆಪಿಗೆ 115ರಿಂದ 117 ಸ್ಥಾನ ಬಂದೇ ಬರುತ್ತದೆ. ಜೆಡಿಎಸ್​ ಜೊತೆ ಯಾವುದೇ ಮಾತುಕತೆ ಆಗಿಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:50 am, Thu, 11 May 23