ಇದು ನನ್ನ ಕೊನೆಯ ಚುನಾವಣೆ; ಚುನಾವಣೆ ಕರ ಪತ್ರದ ಮೂಲಕ ಜಗದೀಶ್ ಶೆಟ್ಟರ್ ಘೋಷಣೆ

ಇದು ನನ್ನ ಕೊನೆಯ ಚುನಾವಣೆ ಎಂದು ಜನರಿಗೆ ನೀಡಲಾದ ಕರ ಪತ್ರದಲ್ಲಿ ಜಗದೀಶ್ ಶೆಟ್ಟರ್ ಘೋಷಿಸಿದ್ದಾರೆ. ಹಾಗೂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದು ನನ್ನ ಕೊನೆಯ ಚುನಾವಣೆ; ಚುನಾವಣೆ ಕರ ಪತ್ರದ ಮೂಲಕ ಜಗದೀಶ್ ಶೆಟ್ಟರ್ ಘೋಷಣೆ
ಜಗದೀಶ್ ಶೆಟ್ಟರ್
Follow us
ಆಯೇಷಾ ಬಾನು
|

Updated on: May 03, 2023 | 1:47 PM

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಿದೆ. ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಜಗದೀಶ್ ಶೆಟ್ಟರ್(Jagadish Shettar) ಬಿಜೆಪಿ ವಿರುದ್ಧ ಅಸಮಾಧಾನಗೊಂಡು ಸದ್ಯ ಕಾಂಗ್ರೆಸ್ ಸೇರಿದ್ದು ಹು-ಧಾ ಸೆಂಟ್ರಲ್​ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯ ವಿಧಾನಸಭಾ ಚುನಾವಣೆ ಎದುರಿಸಲಿದ್ದಾರೆ. ಇದರ ಜೊತೆಗೆ ಇದು ನನ್ನ ಕೊನೆಯ ಚುನಾವಣೆ ಎಂದು ಘೋಷಿಸಿದ್ದಾರೆ. ಜನರಿಗೆ ನೀಡಲಾದ ಕರ ಪತ್ರದಲ್ಲಿ ಇದು ನನ್ನ ಕೊನೆ ಚುನಾವಣೆ ಎಂದು ಘೋಷಿಸಿದ್ದಾರೆ.

ನಾನು ಏಳನೇ ಬಾರಿ ಚುನಾವಣೆ ಎದುರಿಸುತ್ತಿದ್ದೇನೆ. ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಕೆಟ್ಟು ಹೋಗಿರುವ ವ್ಯವಸ್ಥೆ ಸರಿಪಡಿಸುವ ಉದ್ದೇಶ ಇದೆ ಎಂದು ಸುದೀರ್ಘವಾದ ಕರ ಪತ್ರದ ಮೂಲಕ ಹು-ಧಾ ಸೆಂಟ್ರಲ್​ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮತ ಹಾಕುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ತೊರೆದ ಬಗ್ಗೆಯೂ ಕರಪತ್ರದಲ್ಲಿ ಶೆಟ್ಟರ್ ಪ್ರಸ್ತಾಪಿಸಿದ್ದಾರೆ.

ನನ್ನಂತಹ ಹಿರಿಯ ನಾಯಕರಿಗೆ ಬಿಜೆಪಿ ಅಪಮಾನ ಯಾಕೆ ಮಾಡಿದ್ರು‌?

Jagdish Shettar

ಜಗದೀಶ್ ಶೆಟ್ಟರ್ ಕರಪತ್ರ

ರಾಜ್ಯದಲ್ಲಿ 4 ದಶಕಗಳ ಕಾಲ ಪಕ್ಷವನ್ನು ಕಟ್ಟಿ ಬೆಳೆಸಿದ್ದೇವೆ. ನಾನು ವಿನಾಕಾರಣ ಬಿಜೆಪಿ ತೊರೆದಿಲ್ಲ. ಬೆವರು ಸುರಿಸಿ ಕಟ್ಟಿದ ಮನೆ ಬಿಡುವುದು ಅಷ್ಟು ಸುಲಭ ಇರಲ್ಲಿಲ್ಲ. ಈಗ ಹಸ್ತ ಚಿಹ್ನೆಯಡಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿದ್ದೇನೆ. ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದು ರಾಜ್ಯಾದ್ಯಂತ ಸಂಚಲನ ಉಂಟು ಮಾಡಿತ್ತು. ಬಿಜೆಪಿಯಲ್ಲಿ ನಾನು ಕನಸಲ್ಲಿ ಊಹಿಸದ ಪರಿಸ್ಥಿತಿ ಸೃಷ್ಟಿ ಮಾಡಿದರು. ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರು ಷಡ್ಯಂತ್ರ ನಡೆಸಿದ್ರು. ನನ್ನಂತಹ ಹಿರಿಯ ನಾಯಕರಿಗೆ ಅಪಮಾನ ಯಾಕೆ ಮಾಡಿದ್ರು‌? ಇದಕ್ಕೆ ಬಿಜೆಪಿ ನಾಯಕರೇ ಉತ್ತರಿಸಬೇಕಿದೆ ಎಂದು ಜಗದೀಶ್ ಶೆಟ್ಟರ್​ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಜರಂಗದಳ ನಿಷೇಧ ಪ್ರಸ್ತಾಪಿಸಿರುವ ಕಾಂಗ್ರೆಸ್​ ವಿರುದ್ಧ ವ್ಯಾಪಕ ಆಕ್ರೋಶ: ಈ ಬಗ್ಗೆ ಅಧ್ಯಕ್ಷ ಖರ್ಗೆ ಹೇಳಿದ್ದಿಷ್ಟು

ಓರ್ವ ವ್ಯಕ್ತಿಯು ಸೋಲನ್ನು ಸಹಿಸಬಹುದು. ಅಪಮಾನ ಸಹಿಸಲು ಸಾಧ್ಯವೆ? ನನಗಿಂತ ಕಿರಿಯರಾದ ಬಸವರಾಜ ಬೊಮ್ಮಾಯಿ ಸಿಎಂ ಆದಾಗ ನಾನು ಮಂತ್ರಿ ಆಗಲಿಲ್ಲ. ನನಗೆ ಅಧಿಕಾರದ ಹಪಾಹಪಿ‌ ಇಲ್ಲ. ಯುವಕರು ರಾಜಕೀಯಕ್ಕೆ ಬರಬೇಕು, ಇದು ತಪ್ಪಲ್ಲ. ಆದ್ರೆ ನನಗೆ ಮುಂಚಿತವಾಗಿ ಹೇಳಬಹುದಿತ್ತು. ಕೊನೆ ಕ್ಷಣದಲ್ಲಿ ಟಿಕೆಟ್ ಇಲ್ಲ ಅಂದರೆ ಆಘಾತ ಆಗೋದಿಲ್ಲವೇ? ಯಡಿಯೂರಪ್ಪ ಕೂಡಾ ನನಗೆ ಟಿಕೆಟ್ ಅಂದಿದ್ರು. ನನ್ನ ನಡೆಯಿಂದ ಕೆಲ ಲಿಂಗಾಯತ ನಾಯಕರು ನನ್ನ ಸಂಪರ್ಕ ಮಾಡಿದ್ದರು. ಬಿಜೆಪಿಯ ಕೆಲ‌ವರು ಮಾಡಿರೋ ಕುತಂತ್ರದ ಬಗ್ಗೆ ಅವರಿಗೆ ಮನವರಿಕೆ ಆಗಿದೆ. ಹೀಗಾಗಿ ಲೆಕ್ಕವಿಲ್ಲದಷ್ಟು ಜನ ನನ್ನ ಸಂಪರ್ಕ ಮಾಡಿದ್ದಾರೆ. ನನ್ನ ರಾಜಕೀಯ ನಡೆ ಸಮರ್ಥನೆ ಮಾಡಿದ್ದಾರೆ. ಕೆಲವರ ಹಿತಕ್ಕಾಗಿ ಪಕ್ಷ ನಲಗುತ್ತಿದೆ. ಕೆಲವರ ಕಪಿಮುಷ್ಟಿಯಲ್ಲಿ ಬಿಜೆಪಿ ಇದೆ. ಇಂದು ಕೇಂದ್ರ ನಾಯಕರಿಗೆ ಮಾಹಿತಿ ಇಲ್ಲ. ಸ್ವಾರ್ಥಕ್ಕಾಗಿ ಮಾಡ್ತಿರೋದು ಪಕ್ಷಕ್ಕೆ ಒಳಿತಾಗಲು ಸಾಧ್ಯವೆ ಇಲ್ಲ. ಹೀಗೆಲ್ಲ ಕುತಂತ್ರ ಮಾಡೋರಿಗೆ ಇದು ತಿರುಗುಬಾಣವಾಗಲಿದೆ ಎಂದು ಕರಪತ್ರದಲ್ಲಿ ಪರೋಕ್ಷವಾಗಿ ಸಂತೋಷ್, ಪ್ರಲ್ಹಾದ್ ಜೋಶಿ ವಿರುದ್ದ ಶೆಟ್ಟರ್ ಅಸಮಾಧಾನ ಹೊರ ಹಾಕಿದ್ದಾರೆ. ಹಾಗೂ ಕುತಂತ್ರ ರಾಜಕಾರಣ ವಿರೋಧಿಸಿ ನಾನು ಸೆಂಟ್ರಲ್ ‌ಕ್ಷೇತ್ರದಿಂದ ಕಣಕ್ಕಿಳಿದಿದ್ದೇನೆ ಎಂದು ಬೆಂಬಲ ಸೂಚಿಸಲು ಮತದಾರರಿಗೆ ಮನವಿ ಮಾಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ