AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turuvekere Election Results: ತುರುವೇಕೆರೆ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಮಸಾಲ ಜಯರಾಮ್ ಮತ್ತು ಎಂಟಿ ಕೃಷ್ಣಪ್ಪ ನಡುವೆ ಫೈಟ್

Turuvekere Assembly Election Result 2023 Live Counting Updates: 2013ರ ಚುನಾವಣೆಯಿಂದ ತುರುವೇಕೆರೆ ಕ್ಷೇತ್ರದ ಚುನಾವಣೆಯಲ್ಲಿ ಏರಳಿತಗಳಾಗಿವೆ. ಜೆಡಿಎಸ್ ಮತ್ತು ಬಿಜೆಪಿ ನಡುವೆ ಹಾವು ಏಣಿ ಆಟ ನಡೆಯುತ್ತಿದೆ.

Turuvekere Election Results: ತುರುವೇಕೆರೆ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಮಸಾಲ ಜಯರಾಮ್ ಮತ್ತು ಎಂಟಿ ಕೃಷ್ಣಪ್ಪ ನಡುವೆ ಫೈಟ್
ತುರುವೇಕೆರೆ ವಿಧಾನಸಭೆ ಚುನಾವಣಾ ಫಲಿತಾಂಶ
Follow us
Rakesh Nayak Manchi
|

Updated on: May 13, 2023 | 2:24 AM

Turuvekere Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಸಾಲ ಜಯರಾಮ್ ಅವರು ಕಣದಲ್ಲಿದ್ದರೆ, ಕಾಂಗ್ರೆಸ್​ನಿಂದ ಕಾಂತರಾಜ್ ಬಿಎಂ, ಜೆಡಿಎಸ್​ನಿಂದ ಎಂಟಿ ಕೃಷ್ಣಪ್ಪ ಅವರು ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲೂ ಆಮ್ ಆದ್ಮಿ ಪಕ್ಷ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಕಣದಲ್ಲಿದ್ದಾರೆ.

1999ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಬಿಜೆಪಿಯ ಎಂಡಿ ಲಕ್ಷ್ಮೀನಾರಾಯಣ (ಅಣ್ಣಯ್ಯ) ಅವರು 2004ರಲ್ಲಿ ನಡೆದ ಚುನಾವಣೆಯಲ್ಲಿ ಸತತ ಎರಡನೇ ಬಾರಿ ಆಯ್ಕೆಯಾಗಿದ್ದರು. 2008ರ ಚುನಾವಣೆಯಲ್ಲಿ ಇವರನ್ನು ಜೆಡಿಎಸ್​ನ ಕೃಷ್ಣಪ್ಪ ಅವರು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 2008ರ ಚುನಾವಣೆಯಲ್ಲಿ ಬಿಜೆಪಿಯ ಲಕ್ಷ್ಮೀನಾರಾಯಣ ಅವರು ಮತ್ತೊಮ್ಮೆ ಸೋತರು. ಈ ಚುನಾವಣೆಯಲ್ಲಿ ಕಾಂಗ್ರೆಸ್​ನ ಜಗ್ಗೇಶ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.

2013 ರ ಚುನಾವಣೆಯ ನಂತರ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹಾವು ಏಟಿ ಆಟ ನಡೆಯುತ್ತಿದೆ. 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿದ್ದ ಮಸಾಲ ಜಯರಾಮ್ ಅವರು ಸೋಲು ಅನುಭವಿಸಿದ್ದರೆ, ಜೆಡಿಎಸ್​ನ ಕೃಷ್ಣಪ್ಪ ಅವರು ಜಯಶಾಲಿಯಾಗಿದ್ದರು. 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಸಾಲ ಜಯರಾಮ್ ಅವರು ಶಾಸಕರಾಗಿ ಆಯ್ಕೆಯಾದರೆ ಕೃಷ್ಣಪ್ಪ ಅವರು ಸೋಲು ಅನುಭವಿಸಿದ್ದರು. 2023ರ ಚುನಾವಣೆಯಲ್ಲೂ ಈ ಇಬ್ಬರು ನಾಯಕರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ