ಬೆಂಗಳೂರು: ದಕ್ಷಿಣ ಭಾರತದ ಅತಿ ದೊಡ್ಡ ರಾಜ್ಯವಾಗಿರುವ ಕರ್ನಾಟಕದ (Karnataka) ಮೇಲೆ ಭವಿಷ್ಯದ ದೃಷ್ಟಿಯಿಂದ ಎರಡು ರಾಷ್ಟ್ರೀಯ ಪಕ್ಷಗಳು ಕಣ್ಣಿಟ್ಟಿದ್ದು, ಶತಾಯಗತಾಯ ಅಧಿಕಾರದ ಗದ್ದುಗೆ ಏರಲು ಕಸರತ್ತು ನಡೆಸಿವೆ. ಈ ಸಂಬಂಧ ಬಿಜೆಪಿ (BJP) ಕೇಂದ್ರ ನಾಯಕರು ಸಾಕಷ್ಟು ತಂತ್ರಗಳನ್ನು ಮಾಡುತ್ತಿದ್ದು, ರಾಜ್ಯ ನಾಯಕರೊಂದಿಗೆ ಸರಣಿ ಸಭೆ ಮಾಡುತ್ತಿದ್ದಾರೆ. ಜೊತೆಗೆ ರಾಜ್ಯ ಪ್ರವಾಸ ಮಾಡಿ ಮತಗಳ ಕ್ರೋಢೀಕರಣಕ್ಕೆ ಕಸರತ್ತು ನಡೆಸುತ್ತಿದ್ದಾರೆ. ಇದರ ಭಾಗವಾಗಿ ಇಂದಿನಿಂದ (ಏ.23) ಮೂರು ದಿನಗಳ ಕಾಲ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇಂದು ರಾತ್ರಿ 9.30ಕ್ಕೆ ಹೈದರಾಬಾದ್ನಿಂದ (Hyderabad) ಬೆಂಗಳೂರಿಗೆ (Bengaluru) ಆಗಮಿಸುವ ಅಮಿತ್ ಶಾ ಅವರು ರಾತ್ರಿ ರೇಸ್ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನಾಳೆ (ಏ.24) ಬೆಳಗ್ಗೆ 8.55ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಅಮಿತ್ ಶಾ ಅವರು ಬೆಳಗ್ಗೆ 10.30ಕ್ಕೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಅಮ್ಮನವರ ದರ್ಶನ ಪಡೆಯುತ್ತಾರೆ. ಬಳಿಕ ಬೆಳಗ್ಗೆ 11.30ಕ್ಕೆ ಗುಂಡ್ಲುಪೇಟೆ ಪಟ್ಟಣದಲ್ಲಿ ರೋಡ್ಶೋ ಪ್ರಾರಂಭಿಸಲಿದ್ದಾರೆ. ಇದಾದ ನಂತರ ಮಧ್ಯಾಹ್ನ 2.25ಕ್ಕೆ ಸಕಲೇಶಪುರದ ಆಲೂರಿನಲ್ಲಿ ನಡೆಯುವ ರೋಡ್ ಶೋದಲ್ಲಿ ಪಾಲ್ಗೊಳ್ಳುತ್ತಾರೆ.
ಇದನ್ನೂ ಓದಿ: ಬಿಜೆಪಿಯಿಂದ ನನಗೆ ಆಫರ್ ಬಂದಿತ್ತು ಎನ್ನುವ ರಮ್ಯಾ ಹೇಳಿಕೆಗೆ ಸಚಿವ ಆರ್ ಅಶೋಕ್ ಹೇಳಿದ್ದಿಷ್ಟು
ಈ ರೋಡ್ಶೋ ಮುಗಿಸಿಕೊಂಡು ಸಂಜೆ 4.40 ಕ್ಕೆ ಮೈಸೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳಸುತ್ತಾರೆ. ಸಂಜೆ 5.40 ಕ್ಕೆ ಹುಬ್ಬಳ್ಳಿಗೆ ತಲುಪಲಿರುವ ಅಮಿತ್ ಶಾ ಸಂಜೆ 6.15 ಕ್ಕೆ ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಪಕ್ಷದ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ರಾತ್ರಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 25 ರಂದು ಬೆಳಗ್ಗೆ 9.10 ಕ್ಕೆ ಹುಬ್ಬಳ್ಳಿಯಿಂದ ಬಾಗಲಕೋಟೆ ಜಿಲ್ಲೆಯ ತೇರದಾಳಕ್ಕೆ ಪ್ರಯಾಣ ಬೆಳಸಲಿದ್ದಾರೆ. 10.20 ಕ್ಕೆ ತೇರದಾಳದ ಪ್ರಸಿದ್ಧ ಅಲ್ಲಪ್ರಭು ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 11 ಗಂಟೆಗೆ ತೇರದಾಳದಲ್ಲಿ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಬಳಿಕ ಮಧ್ಯಾಹ್ನ 2 ಗಂಟೆಗೆ ವಿಜಯಪುರ ಜಿಲ್ಲೆಗೆ ತೆರಳಲಿರುವ ಅಮಿತ್ ಶಾ ಅವರು ದೇವರ ಹಿಪ್ಪರಗಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗವಹಿಸುತ್ತಾರೆ. ನಂತರ ಸಂಜೆ 4.20ಕ್ಕೆ ಯಾದಗಿರಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ರಾತ್ರಿ 7.30 ಕ್ಕೆ ಕಲಬುರಗಿಯಲ್ಲಿ ಜಿಲ್ಲಾ ಬಿಜೆಪಿ ಮುಖಂಡರ ಸಭೆ ನಡೆಸಲಿದ್ದು, 8.45ಕ್ಕೆ ಕಲಬುರಗಿಯಿಂದ ನವದೆಹಲಿಗೆ ನಿರ್ಗಮಿಸಲಿದ್ದಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:23 am, Sun, 23 April 23