Pralhad Joshi: ಕರ್ನಾಟಕದಲ್ಲಿ ಬಿಜೆಪಿಯ ಈ ಬಾರಿಯ ಚುನಾವಣಾ ವಿಷಯವೇನು? ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು

|

Updated on: Apr 07, 2023 | 4:12 PM

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯ ವಿಷಯಗಳ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿವರವಾದ ಮಾಹಿತಿ ನೀಡಿದ್ದು, ನಾವು ಕೈಗೊಂಡ ಅಭಿವೃದ್ಧಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅಭಿವೃದ್ಧಿ ಯೋಜನೆಗಳೊಂದಿಗೆ ಈ ಬಾರಿ ಜನರ ಬಳಿಗೆ ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Pralhad Joshi: ಕರ್ನಾಟಕದಲ್ಲಿ ಬಿಜೆಪಿಯ ಈ ಬಾರಿಯ ಚುನಾವಣಾ ವಿಷಯವೇನು? ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು
ಪ್ರಲ್ಹಾದ್ ಜೋಶಿ
Follow us on

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯ ವಿಷಯಗಳ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವಿವರವಾದ ಮಾಹಿತಿ ನೀಡಿದ್ದು, ನಾವು ಕೈಗೊಂಡ ಅಭಿವೃದ್ಧಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅಭಿವೃದ್ಧಿ ಯೋಜನೆಗಳೊಂದಿಗೆ ಈ ಬಾರಿ ಜನರ ಬಳಿಗೆ ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ. ನಮ್ಮ ಸರ್ಕಾರ ಭ್ರಷ್ಟಾಚಾರ ಮುಕ್ತ ಸರ್ಕಾರವಾಗಿದೆ. ಕಾಂಗ್ರೆಸ್ ಕೆಲವು ಸುಳ್ಳು ಆರೋಪಗಳನ್ನು ಮಾಡಲು ಪ್ರಯತ್ನಿಸಿತ್ತು. ಆದರೆ ಜನರು ಅದನ್ನು ಸ್ವೀಕರಿಸಲಿಲ್ಲ. ಜನರ ಖಾತೆಗೆ ಹಣ ಹಾಕುವ ಪದ್ಧತಿಯನ್ನು (ಡಿಬಿಟಿ )ದೊಡ್ಡ ಪ್ರಮಾಣದಲ್ಲಿ ತಂದಿದ್ದೇವೆ ಮತ್ತು ಪಾರದರ್ಶಕತೆಯನ್ನು ಬಳಸಿಕೊಂಡು ನಾವು ಸ್ವಚ್ಛ ಸರ್ಕಾರವನ್ನು ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಬಿಎಸ್ ಯಡಿಯೂರಪ್ಪ ನೇತೃತ್ವವಿಲ್ಲದ ಮೊದಲ ಚುನಾವಣೆ, ಎಷ್ಟು ದೊಡ್ಡ ಸವಾಲು ಎಂಬ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಯಡಿಯೂರಪ್ಪ ನಮ್ಮ ಹಿರಿಯ ನಾಯಕರಾಗಿದ್ದಾರೆ. ಅವರು ಚುನಾವಣೆಯಲ್ಲಿ ಸಕ್ರಿಯರಾಗಿದ್ದಾರೆ, ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲುವವರೆಗೂ ವಿರಮಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಅವರಿಗೆ ಈಗ 80 ವರ್ಷ ವಯಸ್ಸು. ಆದರೂ ಅವರು ನಮ್ಮೆಲ್ಲರಿಗಿಂತ ಹೆಚ್ಚು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಧ್ಯೇಯದಡಿ ಸಮುದಾಯಗಳ ಮೀಸಲಾತಿ ಹೆಚ್ಚಳ: ಪ್ರಲ್ಹಾದ್ ಜೋಶಿ

ಡಿಬಿಟಿ ಮತ್ತು ಪಾರದರ್ಶಕತೆಯನ್ನು ಬಳಸಿಕೊಂಡು ನಾವು ಸ್ವಚ್ಛ ಸರ್ಕಾರವನ್ನು ನೀಡಿದ್ದೇವೆ. ಯಡಿಯೂರಪ್ಪ ನಮ್ಮೆಲ್ಲರಿಗಿಂತ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ನಮಗೂ ಕಾಂಗ್ರೆಸ್​ಗೂ ಇರುವ ಮುಖ್ಯ ವ್ಯತ್ಯಾಸ ಇದೇ ನೋಡಿ. ನಾನು ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ, ಹಾಗಾಗಿ ನಾನೇಕೆ ಪಕ್ಷಕ್ಕಾಗಿ ದುಡಿಯಬೇಕು ಎಂಬ ವಿಚಾರ ಕಾಂಗ್ರೆಸ್​ ನಾಯಕರಿಗೆ ಬರುತ್ತದೆ. ಇಲ್ಲಿ ಹಾಗಲ್ಲ. ಯಡಿಯೂರಪ್ಪನವರು ತುಂಬಾ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಹೇಳಿದ್ದಾರೆ.

ಭಯದಿಂದ ಬಿಜೆಪಿ ಟಿಕೆಟ್‌ ಹಂಚಿಕೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್‌ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಗೆ ಬಹಳ ಮುಂಚೆಯೇ ಟಿಕೆಟ್ ನೀಡುವುದು ದೊಡ್ಡ ಧೈರ್ಯದ ಕಾರ್ಯವೇ? ನಮ್ಮ ಲೆಕ್ಕಾಚಾರಕ್ಕೆ ಅನುಗುಣವಾಗಿ ನಾವು ಟಿಕೆಟ್ ಘೋಷಣೆ ಮಾಡುತ್ತೇವೆ. ಇನ್ನೆರಡು ದಿನದಲ್ಲಿ ಟಿಕೆಟ್ ಘೋಷಣೆ ಆಗಲಿದೆ ಎಂದಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ