AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiggaon: ಸಿಎಂ ಬಸವರಾಜ ಬೊಮ್ಮಾಯಿ ಪರ ಅಬ್ಬರದ ಪ್ರಚಾರ ನಡೆಸಿ, ಮತ ಯಾಚಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

CM Basavaraj Bommai: ಇಂದು ಇಡೀ ದಿನ ಶಿಗ್ಗಾಂವಿ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು, ಬೊಮ್ಮಾಯಿ ಅವರ ಪರವಾಗಿ ಜನರಲ್ಲಿ ಮತಯಾಚನೆ ನಡೆಸಿದರು.

Shiggaon: ಸಿಎಂ ಬಸವರಾಜ ಬೊಮ್ಮಾಯಿ ಪರ ಅಬ್ಬರದ ಪ್ರಚಾರ ನಡೆಸಿ, ಮತ ಯಾಚಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಸಿಎಂ ಬೊಮ್ಮಾಯಿ ಪರ ಅಬ್ಬರದ ಪ್ರಚಾರ ನಡೆಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಸಾಧು ಶ್ರೀನಾಥ್​
|

Updated on:May 04, 2023 | 5:21 PM

Share

ಶಿಗ್ಗಾಂವಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬೆನ್ನಿಗೆ ನಿಂತಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ಇಂದು ಗುರುವಾರ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಪ್ರಸಕ್ತ ಅಸೆಂಬ್ಲಿ ಚುನಾವಣೆ (Karnataka Assembly Elections 20123) ಸನಿಹದಲ್ಲಿಯೇ ಇದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಪರ ಶಿಗ್ಗಾಂವಿಯಲ್ಲಿ (Shiggaon) ರೋಡ್ ಶೋ (Road Show) ನಡೆಸಿದ ಜೋಶಿಯವರು ಜನರಲ್ಲಿ ಬೊಮ್ಮಾಯಿಯವರನ್ನು ಗೆಲ್ಲಿಸುವಂತೆ ಕೋರಿ ಮತ ಯಾಚಿಸಿದರು.

ಪ್ರತಿ ಚುನಾವಣೆಯಲ್ಲೂ ಪ್ರಲ್ಹಾದ್ ಜೋಶಿಯವರು ಶಿಗ್ಗಾಂವಿ ಕ್ಷೇತ್ರಕ್ಕೆ ತೆರಳಿ ಬಸವರಾಜ್ ಬೊಮ್ಮಾಯಿ ಅವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ಬಾರಿ ಬಸವರಾಜ್ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದರೂ, ಪ್ರಲ್ಹಾದ್ ಜೋಶಿಯವರು ಈ ಹಿಂದಿನ ಅವರ ಪದ್ಧತಿಯಂತೆ ಶಿಗ್ಗಾಂವಿಗೆ ತೆರಳಿ ಬಸವರಾಜ್ ಬೊಮ್ಮಾಯಿಯವರ ಪರ ರೋಡ್ ಶೋ ನಡೆಸಿದರು.

ಇಂದು ಇಡೀ ದಿನ ಶಿಗ್ಗಾಂವಿ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು, ಬೊಮ್ಮಾಯಿ ಅವರ ಪರವಾಗಿ ಜನರಲ್ಲಿ ಮತಯಾಚನೆ ನಡೆಸಿದರು. ಸವಣೂರು ಹಾಗೂ ಶಿಗ್ಗಾಂವಿಯ ಪ್ರಮುಖ ಹಳ್ಳಿಗಳಿಗೆ ತೆರಳಿದ ಜೋಶಿ, ಬೊಮ್ಮಾಯಿ ಅವರನ್ನ ಈ ಬಾರಿ ಅತಿ ಹೆಚ್ಚು ಮತಗಳ ಅಂತರದ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ:

ಕಾಂಗ್ರೆಸ್ ​​ಪ್ರಣಾಳಿಕೆಯಲ್ಲಿರುವ ಬಜರಂಗದಳ ಬ್ಯಾನ್ ಅಂಶವನ್ನು ಕ್ಯಾನ್ಸಲ್ ಮಾಡೋದಾದ್ರೆ ಮೊದಲು ಕ್ಷಮೆ ಕೇಳಲಿ – ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಗುಡುಗು

ಒಂದಡೆ ಸವಣೂರಿನಲ್ಲಿ ಖುದ್ದು ಸಿಎಂ ಬೊಮ್ಮಾಯಿ ಮತಯಾಚನೆಯಲ್ಲಿ ತೊಡಗಿದ್ರೆ, ಇನ್ನೊಂದೆಡೆ ಶಿಗ್ಗಾಂವಿಯ ಹಿರೇಮಲ್ಲೂರು, ಮಂತ್ರೋಡಿ, ಮಂಡ್ಲಿ, ವನಹಳ್ಳಿ ಹನುಮರಹಳ್ಳಿ ಗ್ರಾಮಗಳಿಗೆ ತೆರಳಿ ಬಸವರಾಜ ಬೊಮ್ಮಾಯಿ ಪರ ಜೋಶಿ ಪ್ರಚಾರ ನಡೆಸಿದರು. ಸಿಎಂ ಬೇರೆ ಕ್ಷೇತ್ರಗಳತ್ತ ಗಮನಹರಿಸಬೇಕಾಗಿರುವ ಹಿನ್ನೆಲೆಯಲ್ಲಿ ಶಿಗ್ಗಾಂವಿ ಕ್ಷೇತ್ರದ ಮೇಲೆ ಗಮನ ಹರಿಸಿರುವ ಜೋಶಿ, ಸಿಎಂ ಹೋಗದಿರುವ ಹಳ್ಳಿಗಳಿಗೆ ಭೇಟಿ ನೀಡಿ ಮತ ಯಾಚನೆ ನಡೆಸುತ್ತಿದ್ದಾರೆ.

ಈ ವೇಳೆ ಸಾರ್ವಜನಿಕರನ್ನ ಉದ್ದೇಶಿಸಿ ಮಾತನಾಡಿದ ಪ್ರಲ್ಹಾದ್ ಜೋಶಿ, ಈ ಬಾರಿ ರಾಜ್ಯದಲ್ಲಿ ಬಿಜೆಪಿ 113 ಪ್ಲಸ್ 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಬಡವರಿಗೆ ವಿಶೇಷ ಆದ್ಯತೆ ನೀಡಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾಸಿರಿ ಯೋಜನೆ ಕೊಡುವ ಮೂಲಕ ರೈತರ ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದೆ ಬರಬೇಕು ಎಂಬ ಮನೋಭಾವವನ್ನ ಮೊದಲು ವ್ಯಕ್ಯಪಡಿಸಿದವರು ಬಸವರಾಜ್ ಬೊಮ್ಮಾಯಿ. ಶಿಗ್ಗಾಂವಿ ಕ್ಷೇತ್ರವನ್ನ ಹಿಂದೆಂದೂ ನೋಡಿರದ ರೀತಿಯಲ್ಲಿ ಅಭಿವೃದ್ದಿಪಡಿಸಿದ್ದಾರೆ. ಈ ಬಾರಿ ಅತಿ ಹೆಚ್ಚು ಲೀಡ್ ನಲ್ಲಿ ಬೊಮ್ಮಾಯಿ ಅವರನ್ನ ಶಿಗ್ಗಾಂವಿ ಕ್ಷೇತ್ರದ ಜನತೆ ಗೆಲ್ಲಿಸಬೇಕು ಎಂದು ಜೋಶಿ ಮತದಾರರಲ್ಲಿ ಮನವಿ ಮಾಡಿದರು.‌

ಕರ್ನಾಟಕ ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:18 pm, Thu, 4 May 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ