ಅನರ್ಹತೆ ಭೀತಿಯಲ್ಲಿ ಸಚಿವ: ಆಡಿಯೋ ವೈರಲ್​ ಬಗ್ಗೆ ಸ್ಪಷ್ಟನೆ ಕೊಟ್ಟ ವಿ ಸೋಮಣ್ಣ

ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿಗೆ ಆಮಿಷ ಒಡ್ಡಿದ್ದ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ಅಭ್ಯರ್ಥಿ, ವಸತಿ ಸಚಿವ ವಿ. ಸೋಮಣ್ಣಗೆ ಸದ್ಯ ನಾಮಪತ್ರ ಅನರ್ಹಗೊಳ್ಳುವ ಭೀತಿ ಶುರುವಾಗಿದೆ.

ಅನರ್ಹತೆ ಭೀತಿಯಲ್ಲಿ ಸಚಿವ: ಆಡಿಯೋ ವೈರಲ್​ ಬಗ್ಗೆ ಸ್ಪಷ್ಟನೆ ಕೊಟ್ಟ ವಿ ಸೋಮಣ್ಣ
Follow us
ಗಂಗಾಧರ​ ಬ. ಸಾಬೋಜಿ
|

Updated on: Apr 30, 2023 | 3:52 PM

ಮೈಸೂರು: ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿಗೆ ಆಮಿಷ ಒಡ್ಡಿದ್ದ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ಅಭ್ಯರ್ಥಿ, ವಸತಿ ಸಚಿವ ವಿ. ಸೋಮಣ್ಣಗೆ (V Somanna) ಸದ್ಯ ಮತ್ತೊಂದು ಸಂಕಷ್ಟ ಎದುರಾಗಿದೆ. ನಾಮಪತ್ರ ಅನರ್ಹಗೊಳ್ಳುವ ಭೀತಿ ಸಚಿವ ವಿ. ಸೋಮಣ್ಣಗೆ ಎದುರಾಗಿದೆ. ಇತ್ತೀಚೆಗೆ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನಾಮಪತ್ರ ವಾಪಸ್​ ಪಡೆದುಕೊಳ್ಳಲು ಸೋಮಣ್ಣ ಆಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಈ ಪ್ರಕರಣವನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದೆ.

ಇದರ ಹಿಂದೆ ಯಾರಿದ್ದಾರೆ ಎಂದು ತನಿಖೆಯಾಗಲಿ: ಸಚಿವ ವಿ.ಸೋಮಣ್ಣ

ಈ ಕುರಿತಾಗಿ ಭಾನುವಾರ ಮೈಸೂರಿನಲ್ಲಿ ಟಿವಿ9ಗೆ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದು,ಈ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರ ಹಿಂದೆ ಯಾರಿದ್ದಾರೆ ಎಂದು ತನಿಖೆಯಾಗಲಿ. ಇದು ಕೀಳು ಮಟ್ಟದಲ್ಲಿ ಮಾಡಿದ್ದಾರೆ. ಕಾನೂನು ಪ್ರಕಾರ ತನಿಖೆಯಾಗಲಿ. ಸುಮ್ನೆ ಭಯ ಹುಟ್ಟಿಸಲು ಈ ರೀತಿ ಮಾಡುತ್ತಿದ್ದಾರೆ. ನನ್ನ ಸಹಿಸಲು ಸಾಧ್ಯವಾಗದಿದ್ದರು ಈ ರೀತಿ ಮಾಡಿದ್ದಾರೆ. ಜನಪ್ರಿಯತೆಯನ್ನ ಸಹಿಸಿಕೊಳ್ಳದವರು ಮಾಡುತ್ತಿದ್ದಾರೆ ಎಂದು ಯಾರ ಹೆಸರು ಹೇಳದೆ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ದ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ನಾಮಪತ್ರ ಹಿಂಪಡೆಯಲು ಜೆಡಿಎಸ್ ಅಭ್ಯರ್ಥಿಗೆ ಗೂಟದ ಕಾರು ಆಮಿಷ, ಆಡಿಯೋ ವೈರಲ್​ ಬಗ್ಗೆ ಸೋಮಣ್ಣ ಹೇಳಿದ್ದಿಷ್ಟು

ವಿ. ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಎಫ್​ಐಆರ್​

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವಿ. ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಚಾಮರಾಜನಗರದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಿಂದ ದೂರು ಹಿನ್ನೆಲೆ ವಿ.ಸೋಮಣ್ಣ, ನಟರಾಜ್, ಸುದೀಪ್ ವಿರುದ್ಧ ಐಪಿಸಿ ಸೆಕ್ಷನ್ 1860(u/s 171E, 171F)ರಡಿ ಎಫ್‌ಐಆರ್ ದಾಖಲಾಗಿದೆ. ಹಾಗಾಗಿ ಸೋಮಣ್ಣ ನಾಮಪತ್ರ ಅನರ್ಹಗೊಳ್ಳುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿಗೆ ಆಮಿಷ: ವಿ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ FIR

ಆಡಿಯೋನಲ್ಲೇನಿದೆ?

ನಿನಗೆ ಗೂಟದ ಕಾರು ಕೋಡ್ತೀವಿ, ಮೊದಲು ನಾಮಪತ್ರ ವಾಪಸ್ ತಗೊ. ಆಮೇಲೆ ಎಲ್ಲ ಮಾತನಾಡೋಣ. ನಿನ್ನ ಬದುಕಿಗೆ ಏನು ಬೇಕೋ ಅದು ಮಾಡ್ತೇನೆ. ಹಿತ ಕಾಪಾಡ್ತೇನೆ ಎಂದು ಸೋಮಣ್ಣ ಹೇಳಿರುವುದು ಆಡಿಯೋದಲ್ಲಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ ಇದು ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ