ವರುಣ ಕ್ಷೇತ್ರದ ಅಭಿವೃದ್ಧಿ ನನ್ನಿಂದ ಮಾತ್ರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ವಿ ಸೋಮಣ್ಣ ತಿರುಗೇಟು

|

Updated on: May 04, 2023 | 3:02 PM

ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಮನೆಯ ಕೋಳಿ ಕೂಗಿದರೆ ಮಾತ್ರ ಬೆಳಕು ಹರಿಯುತ್ತೆ ಎಂಬಂತೆ ಹೇಳಿದ್ದಾರೆ. ಸಿದ್ದರಾಮಯ್ಯ ಮನಸ್ಸು ಮಾಡಿದ್ದರೆ ವರುಣ ಅಭಿವೃದ್ಧಿ ಮಾಡಬಹುದಿತ್ತು ಎಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಿರುಗೇಟು ನೀಡಿದ್ದಾರೆ.

ವರುಣ ಕ್ಷೇತ್ರದ ಅಭಿವೃದ್ಧಿ ನನ್ನಿಂದ ಮಾತ್ರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ವಿ ಸೋಮಣ್ಣ ತಿರುಗೇಟು
ವಿ.ಸೋಮಣ್ಣ, ಸಿದ್ದರಾಮಯ್ಯ
Follow us on

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ತಮ್ಮ ಮನೆಯ ಕೋಳಿ ಕೂಗಿದರೆ ಮಾತ್ರ ಬೆಳಕು ಹರಿಯುತ್ತೆ ಎಂಬಂತೆ ಹೇಳಿದ್ದಾರೆ. ಸಿದ್ದರಾಮಯ್ಯ ಮನಸ್ಸು ಮಾಡಿದ್ದರೆ ವರುಣ ಅಭಿವೃದ್ಧಿ ಮಾಡಬಹುದಿತ್ತು ಎಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ (V Somanna) ತಿರುಗೇಟು ನೀಡಿದ್ದಾರೆ. ವರುಣ ಕ್ಷೇತ್ರದ ಅಭಿವೃದ್ಧಿ ನನ್ನಿಂದ ಮಾತ್ರ ಎಂಬ ಹೇಳಿಕೆ ವಿಚಾರವಾಗಿ ಜಿಲ್ಲೆಯ ವರುಣದಲ್ಲಿ ಪ್ರಚಾರದ ವೇಳೆ ಪ್ರತಿಕ್ರಿಯೆ ನೀಡಿದರು. ವರುಣದಲ್ಲಿ 1 ಕಾಲೇಜು ಇಲ್ಲ, ಆಸ್ಪತ್ರೆ ಇಲ್ಲ, ಸರಿಯಾದ ರಸ್ತೆಗಳಿಲ್ಲ. ಬಾದಾಮಿಯಲ್ಲೂ ಸಿದ್ದರಾಮಯ್ಯ ಯಾವುದೇ ಅಭಿವೃದ್ಧಿ ಮಾಡಲಿಲ್ಲ. ಜನರ ಋಣ ತೀರಿಸುವುದಕ್ಕೂ ಬದ್ಧತೆ ಬೇಕೆಂದು ಸೋಮಣ್ಣ ಟಾಂಗ್​​ ನೀಡಿದರು.

ಜನರ ಋಣ ತೀರಿಸುವ ಕೆಲಸವನ್ನು ನಾನು ಮಾಡಿದ್ದೇನೆ. ಎಲ್ಲದ್ದಕ್ಕೂ ನಾನೇ ಎಂಬುವುದನ್ನು ಸಿದ್ದರಾಮಯ್ಯ ಮೊದಲು ಬಿಡಲಿ. ವರುಣ ಕ್ಷೇತ್ರದ ಜನರು ಗೆಲ್ಲಿಸಿದರೆ ನಾನು ವರುಣದಲ್ಲೇ ಇರುತ್ತೇನೆ. ವರುಣ ಕ್ಷೇತ್ರದಲ್ಲೇ ಶಾಶ್ವತವಾಗಿ ಮನೆ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಅಭಿನಯ ಚಕ್ರವರ್ತಿ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಚ್

ನಟ ಶಿವರಾಜ್​ಕುಮಾರ್​ ಯಾಕೆ ಹೀಗೆ ಮಾಡಿದರು ನನಗೆ ಗೊತ್ತಿಲ್ಲ

ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರ ಚಿತ್ರ ನಟರ ಪ್ರಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್​​ಗಳನ್ನು ಕರೆಸಿ ಪ್ರಚಾರ ಮಾಡುತ್ತಿದ್ದಾರೆ. ಒಂದೇ ದಿನ ಪ್ರಚಾರಕ್ಕೆ ಬರ್ತೇನೆ ಎಂದು ಈಗ ಪದೇಪದೆ ಬರ್ತಿದ್ದಾರೆ. ರಾಜ್​ಕುಮಾರ್ ಕುಟುಂಬದ ಜತೆ ನನಗೆ ಅವಿನಾಭಾವ ಸಂಬಂಧವಿದೆ. ಪುನೀತ್ ಹೆಸರಿನಲ್ಲಿ ನಮ್ಮ ಕ್ಷೇತ್ರದಲ್ಲಿ ಬೃಹತ್ ಆಸ್ಪತ್ರೆ ಕಟ್ಟಿಸಿದ್ದೇನೆ ಎಂದರು.

ಇದನ್ನೂ ಓದಿ: ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸುವ ಗ್ಯಾರಂಟಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ, ಪ್ರಣಾಳಿಕೆ ಫುಲ್ ವೈರಲ್

ನಟ ಶಿವರಾಜ್​ಕುಮಾರ್​ ಯಾಕೆ ಹೀಗೆ ಮಾಡಿದರು ನನಗೆ ಗೊತ್ತಿಲ್ಲ. ನನಗೆ ದುನಿಯಾ ವಿಜಿ, ನಟಿ ರಮ್ಯಾ ಬಗ್ಗೆ ಗೊತ್ತಿಲ್ಲ. ಆದರೆ ನಟ ಶಿವರಾಜ್​ಕುಮಾರ್ ಯಾಕೆ ಹೀಗೆ ಮಾಡಿದ್ರು ಗೊತ್ತಾಗುತ್ತಿಲ್ಲಿ. ಜನ ಸೇರಿಸಲು ಸಿದ್ದರಾಮಯ್ಯ ಸ್ಟಾರ್​ಗಳ ಜೊತೆ ಬರುತ್ತಿದ್ದಾರೆ ಅಷ್ಟೇ ಎಂದು ಹೇಳಿದರು.

ಈ ಬಾರಿ ಬಿಜೆಪಿ ಗೆಲ್ಲಿಸುವಂತೆ ಮನವಿ ಮಾಡಿದ ವಿ.ಸೋಮಣ್ಣ

ವರುಣ ಕ್ಷೇತ್ರದಲ್ಲಿ ಮತಯಾಚನೆ ಮಾಡಿದ ವಿ.ಸೋಮಣ್ಣ, ಬಿಳುಗಲಿ, ತಾಯೂರು, ಗೆಜ್ಜಗನಹಳ್ಳಿಯಲ್ಲಿ ಪ್ರಚಾರ ಮಾಡಿದರು. ವರುಣವನ್ನು ಗೋವಿಂದರಾಜನಗರ ರೀತಿ ಅಭಿವೃದ್ಧಿಪಡಿಸುತ್ತೇನೆ. 15 ವರ್ಷಗಳ ಕಾಲ ಸಿದ್ದರಾಮಯ್ಯಗೆ ಅವಕಾಶ ಕೊಟ್ಟಿದ್ದೀರಾ. ಈ ಬಾರಿ ಬಿಜೆಪಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ