ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್​ ಕಾರ್ಯಕರ್ತರಿಂದ ಕಲ್ಲೆಸೆತ ಆರೋಪ: ಸ್ವಲ್ಪದರಲ್ಲೇ ಪಾರಾದ ವಿ ಸೋಮಣ್ಣ, ಪ್ರತಾಪ್​ ಸಿಂಹ

ಕಾಂಗ್ರೆಸ್​​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದ್ದು, ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್​ ಕಾರ್ಯಕರ್ತರು ಕಲ್ಲೆಸೆದ ಆರೋಪ ಮಾಡಲಾಗಿದೆ.

ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್​ ಕಾರ್ಯಕರ್ತರಿಂದ ಕಲ್ಲೆಸೆತ ಆರೋಪ: ಸ್ವಲ್ಪದರಲ್ಲೇ ಪಾರಾದ ವಿ ಸೋಮಣ್ಣ, ಪ್ರತಾಪ್​ ಸಿಂಹ
ಗಲಾಟೆ ವೇಳೆ ಕಾರ್ಯಕರ್ತರಿಗೆ ಗಾಯವಾಗಿರುವುದು
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 27, 2023 | 8:56 PM

ಮೈಸೂರು: ಕಾಂಗ್ರೆಸ್ (Congress) ​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದ್ದು, ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್​ ಕಾರ್ಯಕರ್ತರು ಕಲ್ಲೆಸೆದ ಆರೋಪ ಮಾಡಲಾಗಿದೆ. ಸಿದ್ದರಾಮನಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವಾಗ ಘಟನೆ ನಡೆದಿದೆ. ಅಭ್ಯರ್ಥಿ ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಪ್ರಚಾರ ರಥದಲ್ಲಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ನಾಗೇಶ್ ಕಾಲಿಗೆ ಪೆಟ್ಟಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿಲಾಗಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ಚಿಕ್ಕಮಗಳೂರು: ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲಾ ಕಾಂಗ್ರೆಸ್​ ಕಚೇರಿಯಲ್ಲಿ ಇತ್ತೀಚೆಗೆ ನಡೆದಿತ್ತು. ಯಾರಿಗೆ ಟಿಕೆಟ್ ಕೊಟ್ಟರು ಕೆಲಸ ಮಾಡೋಣ ಎಂದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಸಂಯೋಜಕ ಪವನ್ ಮೇಲೆ ವಿರೋಧಿ ಬಣ ಹಲ್ಲೆ ನಡೆಸಿದ್ದಾರೆ ಎನ್ನಲಾಗಿತ್ತು. ಜೊತೆಗೆ ಎಲ್ಲರೂ ಒಗ್ಗಟ್ಟಾಗಿ ಇರುವಂತೆ ಹೇಳಿದ್ದಕ್ಕೆ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ವಿರುದ್ಧವೂ ಕಿಡಿಕಾರಲಾಗಿತ್ತು.

ಇದನ್ನೂ ಓದಿ: Yadgir: ಆಪ್​ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತನಿಂದ ಹಲ್ಲೆ: ಚುನಾವಣಾ ಪ್ರಚಾರ ವೇಳೆ ಗಲಾಟೆ

ಅರ್ಜಿ ಸಲ್ಲಿಸಿರುವವರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದರು. ತಮ್ಮಯ್ಯಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಒತ್ತಾಯಸಿದ್ದು, ಈ ವೇಳೆ ಸಭೆಯಲ್ಲಿ ಕಾಂಗ್ರೆಸ್​ ಮುಖಂಡರು, ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ದಂಗಲ್ ಶುರುವಾಗಿದ್ದು, ಹೈಕಮಾಂಡ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದರು.

ವಲಸಿಗರಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಪಟ್ಟು ಹಿಡಿದಿದ್ದು, 6 ಟಿಕೆಟ್ ಆಕಾಂಕ್ಷಿಗಳ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ಮಾಡಲಾಗಿತ್ತು. ಎಚ್​ಡಿ ತಮ್ಮಯ್ಯನಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಕಿರಿಕ್​

ಪೊಲೀಸ್ ಠಾಣೆ ಒಳಗೆ ಎರಡು ತಂಡದವರಿಂದ ಗಲಾಟೆ

ನೆಲಮಂಗಲ: ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ತಡರಾತ್ರಿವರೆಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ನಡೆಯಿತು. ಜೆಡಿಎಸ್ ಕಾರ್ಯಕರ್ತ ಮೋಹನ್​ಕಡೆಯವರಾದ ಅಭ್ಯರ್ಥಿ ಮುನೆಗೌಡ ಹಾಗೂ ಬೆಂಬಲಿಗರಿಂದ ಠಾಣೆಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಬಿಜೆಪಿ ಮುಖಂಡ ಕೊಳ್ಳಿಗಾನಹಳ್ಳಿ ವೆಂಕಟೇಶಪ್ಪ ಹಾಗೂ ಬೆಂಬಲಿಗರು ಠಾಣೆಗೆ ಆಗಮಿಸಿದ್ದಾರೆ.

ಮೊದಲು ನಮ್ಮ ದೂರು ತೆಗೆದುಕೊಳ್ಳಿ ಎಂದು ಗಲಾಟೆ ಮಾಡಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಪೊಲೀಸ್ ಠಾಣೆ ಒಳಗೆ ಎರಡು ತಂಡದವರಿಂದ ಗಲಾಟೆ ಮಾಡಲಾಗಿದೆ. ಪೊಲೀಸ್ ಠಾಣೆ ಎಂಬುದನ್ನು ಮರೆತು ಜೋರು ಧ್ವನಿಯಲ್ಲಿ ಗದ್ದಲ ಮಾಡಿದ್ದಾರೆ. ಗಲಾಟೆ ನಿಲ್ಲಿಸಲು ಇಬ್ಬರನ್ನು ಇನ್ಸ್ಪೆಕ್ಟರ್​ ಇಲ್ಲ ನಾಳೆ ಬನ್ನಿ ಎಂದು ಪೊಲೀಸರು ಹೇಳಿ ಕಳುಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:55 pm, Thu, 27 April 23

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?