BJP Candidate List: ಸಿದ್ದರಾಮಯ್ಯ vs ಸೋಮಣ್ಣ, ಡಿಕೆ ಶಿವಕುಮಾರ್ vs ಆರ್ ಅಶೋಕ

ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನಾಗಿ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲಾಗಿದೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕನಕಪುರ ಕ್ಷೇತ್ರದಲ್ಲಿ ಆರ್. ಅಶೋಕ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

BJP Candidate List: ಸಿದ್ದರಾಮಯ್ಯ vs ಸೋಮಣ್ಣ, ಡಿಕೆ ಶಿವಕುಮಾರ್ vs ಆರ್ ಅಶೋಕ
ಆರ್ ಅಶೋಕ ಮತ್ತು ವಿ ಸೋಮಣ್ಣ

Updated on: Apr 11, 2023 | 10:50 PM

ಮುಖ್ಯಾಂಶಗಳು

  • ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
  • ಪ್ರತಿಪಕ್ಷ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನಾಗಿ ವಿ. ಸೋಮಣ್ಣ
  • ಡಿಕೆ ಶಿವಕುಮಾರ್ ವಿರುದ್ಧ ಕನಕಪುರ ಕ್ಷೇತ್ರದಲ್ಲಿ ಆರ್. ಅಶೋಕ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನಾಗಿ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲಾಗಿದೆ. ಜತೆಗೆ ಚಾಮರಾಜನಗರ ಕ್ಷೇತ್ರದಿಂದಲೂ ಸೋಮಣ್ಣಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ವರುಣಾ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಡುವ ನಿರೀಕ್ಷೆ ಇದೆ.

ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕನಕಪುರ ಕ್ಷೇತ್ರದಲ್ಲಿ ಆರ್. ಅಶೋಕ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಇದರೊಂದಿಗೆ ಒಕ್ಕಲಿಗ ಸಮುದಾಯದ ಪ್ರಬಲ ನಾಯಕರಿಬ್ಬರ ನಡುವೆ ಪೈಪೋಟಿ ಏರ್ಪಡಲಿದೆ. ಮತ್ತೊಂದೆಡೆ ಪದ್ಮನಾಭನಗರ ಕ್ಷೇತ್ರದಿಂದಲೂ ಅಶೋಕ್​ಗೆ ಟಿಕೆಟ್ ನೀಡಲಾಗಿದೆ.

ಪ್ರಸಕ್ತ ಚುನಾವಣೆಗೆ ಬಿಜೆಪಿ 52 ಹೊಸ ಮುಖಗಳಿಗೆ ಮಣೆ ಹಾಕಿದೆ. ಒಬಿಸಿಯ 32 ಮಂದಿಗೆ ಟಿಕೆಟ್ ಘೋಷಿಸಲಾಗಿದೆ. ಒಬಿಸಿ 32, ಎಸ್​ಸಿ 30, ಎಸ್​ಟಿ 16 ಹಾಗೂ 9 ವೈದ್ಯರು, ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಟಿಕೆಟ್ ನೀಡಲಾಗಿದೆ. 8 ಮಂದಿ ಮಹಿಳೆಯರು, ಐವರು ವಕೀಲರು, ಮೂವರು ಶಿಕ್ಷಕರು, 9 ಸ್ನಾತಕೋತ್ತರ ಪದವೀಧರರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: BJP’s First Candidate List: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 189 ಮಂದಿಗೆ ಟಿಕೆಟ್, 52 ಮಂದಿ ಹೊಸಬರಿಗೆ ಮಣೆ

189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us